ETV Bharat / state

ಮೇಕೆದಾಟು ಯೋಜನೆಗೆ ಮತ್ತೆ ಜಯ: ಪ್ರಕರಣ ಕೈಬಿಟ್ಟ ಹಸಿರು ನ್ಯಾಯಮಂಡಳಿ

ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಸಲ್ಲಿಸಿದ್ದ ಲಿಖಿತ ಮನವಿಯಲ್ಲಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಇಐಎ ಅನುಮೋದನೆ ಬಾಕಿ ಇದೆ. ಇನ್ನು ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸರ್ಕಾರ 2018ರಲ್ಲೇ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದೆ. ಪ್ರಸ್ತುತ ರಾಜ್ಯ ಸರ್ಕಾರ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದಿದ್ದರು.

national-green-tribunal-dropped-a-voluntary-case
ಮೇಕೆದಾಟು ಯೋಜನೆಗೆ ಮತ್ತೆ ಜಯ
author img

By

Published : Jun 18, 2021, 6:51 PM IST

ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆ ಕುರಿತಂತೆ ಚೆನ್ನೈ ಭಾಗದ ಪತ್ರಿಕೆಗಳು ಮಾಡಿದ್ದ ವರದಿ ಆಧರಿಸಿ ರಾಜ್ಯದ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್​ಜಿಟಿ) ತಾನು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಪ್ರಕರಣವನ್ನು ಕೈಬಿಟ್ಟಿದೆ. ಕರ್ನಾಟಕ ಸರ್ಕಾರ ಸಂಬಂಧಿತ ಪ್ರಾಧಿಕಾರಗಳಿಂದ ಅನುಮತಿ ಪಡೆಯದೆ ಪರಿಸರ ಕಾನೂನುಗಳನ್ನು ಉಲ್ಲಂಘಿಸಿ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿದೆ ಎಂದು ಆರೋಪಿಸಿ ಚನ್ನೈನಲ್ಲಿ ಪ್ರಸಾರವಾಗುವ ಕೆಲ ಪತ್ರಿಕೆಗಳು ಕಳೆದ ಏಪ್ರಿಲ್ 15ರಂದು ವರದಿ ಮಾಡಿದ್ದವು.

ಈ ಹಿನ್ನೆಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ 2021ರ ಮೇ 21ರಂದು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಜತೆಗೆ ರಾಜ್ಯ, ಕೇಂದ್ರ ಸರ್ಕಾರದ ಹಲವು ಇಲಾಖೆಗಳು ಹಾಗೂ ಪ್ರಾಧಿಕಾರಗಳಿಗೆ ನೋಟಿಸ್ ಜಾರಿ ಮಾಡಿತ್ತು. ಜುಲೈ 5ರೊಳಗೆ ನೋಟಿಸ್​ಗೆ ಉತ್ತರಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆ ರಾಜ್ಯ ಸರ್ಕಾರ ಎನ್​​​​​ಜಿಟಿ ಸುಮೊಟೊ ಪ್ರಕರಣ ದಾಖಲಿಸಿಕೊಂಡ ಕ್ರಮವನ್ನು ಮರು ಪರಿಶೀಲಿಸುವಂತೆ ಕೋರಿ ಜೂನ್ 9ರಂದು ಅರ್ಜಿ ಸಲ್ಲಿಸಿತ್ತು.

ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಸಲ್ಲಿಸಿದ್ದ ಲಿಖಿತ ಮನವಿಯಲ್ಲಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಇಐಎ ಅನುಮೋದನೆ ಬಾಕಿ ಇದೆ. ಇನ್ನು ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸರ್ಕಾರ 2018ರಲ್ಲೇ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದೆ. ಪ್ರಸ್ತುತ ರಾಜ್ಯ ಸರ್ಕಾರ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದಿದ್ದರು.

ಅಲ್ಲದೇ, ಕರ್ನಾಟಕ ಸರ್ಕಾರ 9 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಂಡಿರುವ ಮೇಕೆದಾಟು ಯೋಜನೆಯು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಉದ್ದೇಶವನ್ನು ಹೊಂದಿದೆ ಎಂದು ವಿವರಿಸಿದ್ದರು. ರಾಜ್ಯದ ವಿವರಣೆ ಆಲಿಸಿದ ನ್ಯಾ. ಆದರ್ಶ ಕುಮಾರ್ ಗೋಯೆಲ್ ಅಧ್ಯಕ್ಷತೆಯ ಐವರು ನ್ಯಾಯಮೂರ್ತಿಗಳಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪೀಠ ಸ್ವಯಂಪ್ರೇರಿತ ಪ್ರಕರಣವನ್ನು ಇತ್ಯರ್ಥಗೊಳಿಸಿ ಆದೇಶಿಸಿದೆ.

ಓದಿ: ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಜಾಮೀನು ಕೋರಿದ್ದ ಅತ್ಯಾಚಾರ ಆರೋಪಿಯ ಅರ್ಜಿ ವಜಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.