ETV Bharat / state

ಮುಂಬೈ-ಬೆಂಗಳೂರು ಎಕ್ಸ್​ಪ್ರೆಸ್ ಹೈವೆ ಭೂಸ್ವಾಧೀನ ಶೀಘ್ರ.. ಕೇಂದ್ರ ಸಚಿವ ಗಡ್ಕರಿ - Nitin Gadkari Minister of Road Transport and Highway

ಪುಣೆ-ಬೆಂಗಳೂರು ಎಕ್ಸ್​ಪ್ರೆಸ್ ಹೈವೆ ಸಂಬಂಧ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ವ್ಯಾಪ್ತಿಯಲ್ಲಿ ಅವಶ್ಯಕ ಭೂಸ್ವಾಧೀನ ಕಾರ್ಯಕ್ಕೆ ಸದ್ಯದಲ್ಲೇ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದರು.

National Highway Planning Progress Review Meeting
ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
author img

By

Published : Dec 10, 2019, 8:38 PM IST

ಬೆಂಗಳೂರು: ಪುಣೆ- ಬೆಂಗಳೂರು ಎಕ್ಸ್​ಪ್ರೆಸ್ ಹೈವೆ ಸಂಬಂಧ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ವ್ಯಾಪ್ತಿಯಲ್ಲಿ ಅವಶ್ಯಕ ಭೂಸ್ವಾಧೀನ ಕಾರ್ಯಕ್ಕೆ ಸದ್ಯದಲ್ಲೇ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ..

ನಗರದಲ್ಲಿ ನಡೆದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ ಒಟ್ಟಾರೆ 1 ಲಕ್ಷ ಕೋಟಿ ರೂ. ಹೆಚ್ಚು ಮೊತ್ತದ ಹೆದ್ದಾರಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು. ಪ್ರಸಕ್ತ ವರ್ಷದ ವಾರ್ಷಿಕ ಯೋಜನೆಯಡಿ ರೂ.2150 ಕೋಟಿ ನಿಗದಿಪಡಿಸಿರುವುದಕ್ಕಾಗಿ ಕೇಂದ್ರ ಸಚಿವರನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಮಂಜೂರಾತಿ ಮಿತಿಯನ್ನು 3919 ಕೋಟಿ ರೂ. ಗಳಿಗೆ ನಿಗದಿಪಡಿಸುವಂತೆ ಮನವಿ ಮಾಡಿದರು. ಇದಕ್ಕೆ ಕೇಂದ್ರ ಸಚಿವರು ಸಮ್ಮತಿಸಿದರು. ಆದರೆ, ಶೇ.80ರಷ್ಟು ಭೂಸ್ವಾಧೀನ ಪೂರ್ಣಗೊಂಡಿದ್ದು, ಕೇಂದ್ರ ಪರಿಸರ ಸಚಿವಾಲಯದ ಅನುಮತಿ ಪಡೆದ ಯೋಜನೆಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಉಪನಗರ ವರ್ತುಲ ರಸ್ತೆಗೆ (STRR) ಸಂಬಂಧಿಸಿದಂತೆ ಈಗಾಗಲೇ ಕಾರ್ಯಾರಂಭಿಸಲಾಗಿದೆ. ಇದಕ್ಕೆ ತಗಲುವ ಭೂಸ್ವಾಧೀನ ಪ್ರಕ್ರಿಯೆಯ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ. ಆದರೆ, ಉಳಿದ ಹಂತಗಳಿಗೆ ವೆಚ್ಚದ ಶೇ. 25ರಷ್ಟನ್ನು ಭರಿಸಲು ರಾಜ್ಯ ಸರ್ಕಾರ ಲಭ್ಯವಿರುವ ಸರ್ಕಾರಿ ಭೂಮಿಯನ್ನು ಹಸ್ತಾಂತರಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು. ಮರಳು, ಕಲ್ಲಿಗೆ ಸಂಬಂಧಿಸಿದ ರಾಯಲ್ಟಿ ವಿನಾಯಿತಿ ಹಾಗೂ ಸ್ಟೀಲ್ ಮತ್ತು ಸಿಮೆಂಟ್ ಕುರಿತ ಜಿಎಸ್ಟಿ ವಿನಾಯಿತಿಯನ್ನು ಕೂಡ ರಾಜ್ಯ ಸರ್ಕಾರದ ಪಾಲು ಎಂದು ಪರಿಗಣಿಸಲಾಗುವುದು.

ಈ ಎಲ್ಲ ಅಂಶಗಳನ್ನು ಒಳಗೊಂಡಂತೆ ಒಪ್ಪಂದ ಮಾಡಿಕೊಳ್ಳುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರಿಂದ ಸುಮಾರು 6000 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲು ಸಾಧ್ಯವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ಪಡಲಾಯಿತು. ರಾಜ್ಯದಲ್ಲಿ 50 ಸಾವಿರ ಕೋಟಿ ರೂ. ವೆಚ್ಚದಲ್ಲಿ 2300 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪಡಿಸುವ ಯೋಜನೆಯ ಡಿಪಿಆರ್ ಸಿದ್ಧವಾಗುತ್ತಿದೆ. ಶೇ.80ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು, ಪರಿಸರ ಸಚಿವಾಲಯದ ಅನುಮತಿ ಪಡೆದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಸೋಲಾಪುರ-ಕರ್ನೂಲ್‌ ಹೆದ್ದಾರಿಗೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದೆ.

ಅಂತೆಯೇ ಪುಣೆ- ಬೆಂಗಳೂರು ಹೆದ್ದಾರಿಯನ್ನು 6 ಪಥದ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಹೆದ್ದಾರಿಯನ್ನು ಎಕ್ಸ್​ಪ್ರೆಸ್ ಹೈವೆಯಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಇದನ್ನು ಮುಂಬೈ-ಬೆಂಗಳೂರು ಎಕ್ಸ್​ಪ್ರೆಸ್ ಹೈವೆ ಎಂದು ಪರಿಗಣಿಸಲಾಗುವುದು. ಈ ಹೆದ್ದಾರಿ ವ್ಯಾಪ್ತಿಯಲ್ಲಿ ಆರ್ಥಿಕ ಅಭಿವೃದ್ಧಿ ಚಟುವಟಿಕೆಗಳು ಮತ್ತು ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿತಿನ್ ಗಡ್ಕರಿ, ಪುಣೆ-ಮುಂಬೈ-ಬೆಂಗಳೂರು ನಡುವೆ ಎಕ್ಸ್​ಪ್ರೆಸ್ ಹೈವೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದೇವೆ. ಸುಮಾರು 1 ಲಕ್ಷ ಕೋಟಿ ರೂ.ವೆಚ್ಚದ ರಸ್ತೆ ಕಾಮಗಾರಿಗಳಿಗೆ ಇಂದು ಒಪ್ಪಿಗೆ ಸೂಚಿಸಲಾಗಿದೆ. ಷಟ್ಪಥ ರಸ್ತೆ ಕಾಮಗಾರಿ ಸದ್ಯದಲ್ಲೇ ಕೈಗೆತ್ತಿಕೊಳ್ಳಾಗುತ್ತದೆ. ಈ ಸಂಬಂಧ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ‌ ಎಂದರು. ರಾಜ್ಯದಲ್ಲಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೆತ್ತಿಕೊಂಡಿರುವ ಕಾಮಗಾರಿಗಳಲ್ಲಿ ಶೇ.80ರಷ್ಟು ಮುಕ್ತಾಯವಾಗಿದೆ. ವಿಶೇಷವಾಗಿ ಬೆಂಗಳೂರು ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನದ ಜತೆಗೆ ಒಟ್ಟು ಶೇ.50ರಷ್ಟು ವೆಚ್ಚ ಭರಿಸಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೆವು.

ಆದರೆ, ಮುಖ್ಯಮಂತ್ರಿಯವರು ಶೇ.25ರಷ್ಟು ವೆಚ್ಚ ಭರಿಸಲು ಒಪ್ಪಿದ್ದಾರೆ. ಹಾಗಾಗಿ ಶೇ.75ರಷ್ಟನ್ನು ಎನ್​ಹೆಚ್ಐ ಭರಿಸುತ್ತದೆ. ಉಪ ಚುನಾವಣೆಯಲ್ಲಿ ಬಿಜೆಪಿ ಭಾರಿ ವಿಜಯ ಪಡೆದಿದೆ. ಇದರಿಂದ ಯಡಿಯೂರಪ್ಪ ಸ್ಥಿರ ಸರ್ಕಾರ ನೀಡಲು ಸಾಧ್ಯವಾಗುತ್ತದೆ. ಹಾಗಾಗಿ ನಾವು ಯಡಿಯೂರಪ್ಪನವರಿಗೆ ಎಲ್ಲ ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಕೇಂದ್ರದ ನೆರವು ಮುಂದುವರೆಸುವ ಭರವಸೆ ನೀಡಿದರು.

Intro:

ಬೆಂಗಳೂರು: ಪುಣೆ - ಬೆಂಗಳೂರು ಎಕ್ಸ್ ಪ್ರೆಸ್ ವೇ ಸಂಬಂಧ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ವ್ಯಾಪ್ತಿಯಲ್ಲಿ ಅವಶ್ಯಕ ಭೂಸ್ವಾಧೀನ ಕಾರ್ಯಕ್ಕೆ ಸಧ್ಯದಲ್ಲೇ ಚಾಲನೆ ನೀಡಲಾಗುತ್ತದೆ,ಇದನ್ನು ಮುಂಬೈ-ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಎಂದು ಕರೆಯಲಾಗುತ್ತದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನಗರದಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಖಾತೆ ಮತ್ತು ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ ಒಟ್ಟಾರೆ 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹೆದ್ದಾರಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವರು ಸಭೆಯಲ್ಲಿ ತಿಳಿಸಿದರು.

ಪ್ರಸಕ್ತ ವರ್ಷದ ವಾರ್ಷಿಕ ಯೋಜನೆಯಡಿ ರೂ.2150 ಕೋಟಿ ನಿಗದಿಪಡಿಸಿರುವುದಕ್ಕಾಗಿ ಕೇಂದ್ರ ಸಚಿವರನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಪ್ರಸಕ್ತ ವರ್ಷದ ಮಂಜೂರಾತಿ ಮಿತಿಯನ್ನು 3919 ಕೋಟಿ ರೂ. ಗಳಿಗೆ ನಿಗದಿಪಡಿಸುವಂತೆ ಮನವಿ ಮಾಡಿದರು. ಇದಕ್ಕೆ ಕೇಂದ್ರ ಸಚಿವರು ಸಮ್ಮತಿಸಿದರು. ಆದರೆ ಶೇ. 80 ರಷ್ಟು ಭೂಸ್ವಾಧೀನ ಪೂರ್ಣಗೊಂಡಿದ್ದು, ಕೇಂದ್ರ ಪರಿಸರ ಸಚಿವಾಲಯದ ಅನುಮತಿ ಪಡೆದ ಯೋಜನೆಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಉಪನಗರ ವರ್ತುಲ ರಸ್ತೆಗೆ (STRR) ಸಂಬಂಧಿಸಿದಂತೆ ಈಗಾಗಲೇ ಕಾರ್ಯಾರಂಭವಾಗಿದ್ದು, ಇದಕ್ಕೆ ತಗಲುವ ಭೂಸ್ವಾಧೀನ ಪ್ರಕ್ರಿಯೆಯ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ. ಆದರೆ ಉಳಿದ ಹಂತಗಳಿಗೆ ಭೂಸ್ವಾಧೀನ ಪ್ರಕ್ರಿಯೆಯ ವೆಚ್ಚದ ಶೇ. 25ನ್ನು ಭರಿಸಲು ರಾಜ್ಯ ಸರ್ಕಾರ , ಲಭ್ಯವಿರುವ ಸರ್ಕಾರಿ ಭೂಮಿಯನ್ನು ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ಸಭೆಯಲ್ಲಿ ಸೂಚಿಸಲಾಯಿತು.

ಮರಳು, ಕಲ್ಲಿಗೆ ಸಂಬಂಧಿಸಿದ ರಾಯಲ್ಟಿ ವಿನಾಯಿತಿ ಹಾಗೂ ಸ್ಟೀಲ್ ಮತ್ತು ಸಿಮೆಂಟ್ ಕುರಿತ ಜಿಎಸ್ಟಿ ವಿನಾಯಿತಿಯನ್ನು ಕೂಡ ರಾಜ್ಯ ಸರ್ಕಾರದ ಪಾಲು ಎಂದು ಪರಿಗಣಿಸಲಾಗುವುದು.ಈ ಎಲ್ಲ ಅಂಶಗಳನ್ನು ಒಳಗೊಂಡಂತೆ ಒಪ್ಪಂದ ಮಾಡಿಕೊಳ್ಳುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರಿಂದ ಸುಮಾರು 6000 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲು ಸಾಧ್ಯವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ಪಡಲಾಯಿತು.

ರಾಜ್ಯದಲ್ಲಿ 50 ಸಾವಿರ ಕೋಟಿ ರೂ. ವೆಚ್ಚದಲ್ಲಿ 2300 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪಡಿಸುವ ಯೋಜನೆಯ ಡಿ.ಪಿ.ಆರ್. ಸಿದ್ಧವಾಗುತ್ತಿದೆ. ಶೇ. 80 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು, ಪರಿಸರ ಸಚಿವಾಲಯದ ಅನುಮತಿ ಪಡೆದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಗಡ್ಕರಿ ಅವರು ಸಭೆಯಲ್ಲಿ ತಿಳಿಸಿದರು.

ಸೋಲಾಪುರ- ಕರ್ನೂಲ್ ಹೆದ್ದಾರಿಗೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದೆ. ಅಂತೆಯೇ ಪುಣೆ- ಬೆಂಗಳೂರು ಹೆದ್ದಾರಿಯನ್ನು 6 ಪಥದ ರಸ್ತೆಯಾಗಿ ಅಭಿವೃದ್ಧಿ ಪಡಿಸಲು ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಹೆದ್ದಾರಿಯನ್ನು ಎಕ್ಸ್ಪ್ರೆಸ್ ಹೈವೇ ಆಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಇದನ್ನು ಮುಂಬೈ-ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಎಂದು ಪರಿಗಣಿಸಲಾಗುವುದು. ಈ ಹೆದ್ದಾರಿ ವ್ಯಾಪ್ತಿಯಲ್ಲಿ ಆರ್ಥಿಕ ಅಭಿವೃದ್ಧಿ ಚಟುವಟಿಕೆಗಳನ್ನು, ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಅಬ್ ಕಿ ಬಾರ್ ಬಿಎಸ್ವೈ ಸರ್ಕಾರ್,ಸಬೂಬ್ ಮತ್ ಬೋಲ್ನಾ:

ಇದೇ ಸಂದರ್ಭದಲ್ಲಿ ಕೆಲ ಅಧಿಕಾರಿಗಳು ಹಿಂದಿನ ಸರ್ಕಾರ ಇದ್ದ ವೇಳೆ ಕಾಮಾಗಾರಿ ವೇಗವಾಗಿ ಮಾಡಲಿಲ್ಲ ಅಂತ ಹೇಳಿದರು. ಇದಕ್ಕೆ ಗರಂ ಕೇಂದ್ರ ಸಚಿವರು ಅಬ್ ಕಿ ಬಾರ್ ಯಡಿಯೂರಪ್ಪ ಬಿಜೆಪಿ ಸರ್ಕಾರ್ ಹೈ, ಕುಚ್ ಸಬೂಬ್ ಮತ್ ಬೋಲ್ನ, ತುರಂತ್ 1500 ಕಿಲೋಮೀಟರ್ ಪೂರಾ ಕರಕೆ ಹ್ಯಾಂಡ್ ಓವರ್ ಕರೋ ಅಂತ ಹೇಳಿದರು

ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ನಿತಿನ್ ಗಡ್ಕರಿ,ಪುಣೆ-ಮುಂಬೈ-ಬೆಂಗಳೂರು ನಡುವೆ ಎಕ್ಸಪ್ರಸ್ ಹೈವೆ ನಿರ್ಮಾಣಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದೇವೆ.ಸುಮಾರು ಒಂದು ಲಕ್ಷ ಕೋಟಿ ರೂ.ವೆಚ್ಚದ ರಸ್ತೆ ಕಾಮಗಾರಿಗಳಿಗೆ ಇಂದು ಒಪ್ಪಿಗೆ ಸೂಚಿಸಿದ್ದು,ಷಟ್ಪಥ ರಸ್ತೆ ಕಾಮಗಾರಿ ಸದ್ಯದಲ್ಲೇ ಕೈಗೆತ್ತಿಕೊಳ್ಳಾಗುತ್ತದೆ ಈ ಸಂಬಂಧ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತದೆ‌ ಎಂದರು.

ರಾಜ್ಯದಲ್ಲಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೆತ್ತಿಕೊಂಡಿರುವ ಕಾಮಗಾರಿಗಳಲ್ಲಿ ಶೇಕಡಾ 80ರಷ್ಟು ಮುಕ್ತಾಯವಾಗಿದೆ. ವಿಶೇಷವಾಗಿ ಬೆಂಗಳೂರು ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನದ ಜತೆಗೆ ಒಟ್ಟು ಶೇಕಡಾ 50 ರಷ್ಟು ವೆಚ್ಚ ಭರಿಸಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೆವು.ಆದರೆ ಮುಖ್ಯಮಂತ್ರಿಯವರು ಶೇಕಡಾ 25ರಷ್ಟು ವೆಚ್ಚ ಭರಿಸಲು ಒಪ್ಪಿದ್ದಾರೆ.ಹಾಗಾಗಿ ಶೇಕಡಾ 75ರಷ್ಟನ್ನು ಎನ್ ಹೆಚ್ ಐ ಭರಿಸುತ್ತದೆ.

ಉಪ ಚುನಾವಣೆಯಲ್ಲಿ ಬಿಜೆಪಿ ಭಾರಿ ವಿಜಯ ಪಡೆದಿದೆ.ಇದರಿಂದ ಯಡಿಯೂರಪ್ಪ ಸ್ಥಿರ ಸರ್ಕಾರ ನೀಡಲು ಸಾಧ್ಯವಾಗುತ್ತದೆ ಹಾಗಾಗಿ ನಾವು ಯಡಿಯೂರಪ್ಪನವರಿಗೆ ಎಲ್ಲ ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಕೇಂದ್ರದ ನೆರವು ಮುಂದುವರೆಸುವ ಭರವಸೆ ನೀಡಿದರು.

ಗಡ್ಕರಿ ಮುಂದೆ ಸಿಎಂ ಗತ್ತು:

ಕೇಂದ್ರ ಸಚಿವ ನಿತಿನ್ ಗಡ್ಕರಿ ಎದುರು ಸಿಎಂ ಬಿಎಸ್ವೈ ಗತ್ತು ಎದ್ದು ಕಾಣುತ್ತಿತ್ತು. ಕೇಂದ್ರ ಸಚಿವರ ಎದುರು ಗತ್ತಿನಿಂದಲೇ ಇದ್ದ ಸಿಎಂ, ಸುದ್ದಿಗೋಷ್ಟಿ ವೇಳೆ ಕೇಂದ್ರ ಸಚಿವರ ಗನ್ ಮ್ಯಾನ್ ಗಳಿಗೆ ಏ ಭಯ್ಯಾ ಮೀಡಿಯಾವಾಲೋಂಕೋ ಜಗಾ ಛೋಡೋ ಅಂತ ಗತ್ತಿಂದ ಹೇಳಿದರು.

ಇಷ್ಟೇ ಅಲ್ಲ ಖುದ್ದು ನಿತಿನ್ ಗಡ್ಕರಿ ಮಾತಿಗೇ ಕತ್ತರಿ ಹಾಕಿದ ಸಿಎಂ, ಪ್ರಶ್ನೆಯೊಂದಕ್ಕೆ ಗಡ್ಕರಿ ಉತ್ತರಿಸುತ್ತಿದ್ದಾಗ ಅರ್ಧಕ್ಕೆ ಗಡ್ಕರಿ ಮಾತಿಗೆ ಬ್ರೇಕ್ ಹಾಕಿ ತಾವೇ ಉತ್ತರಿಸಿದರು ಬಳಿಕ ಅವರಸರವಾಗಿ ಕರೆದೊಯ್ದರು.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.