ETV Bharat / state

ಮಹಿಳಾ ಉದ್ಯಮಿಗಳಿಗೆ ಸಹಾಯ ಸೌಕರ್ಯ ಒದಗಿಸಲು ಸರಕಾರ ಬದ್ಧ: ಸಚಿವ ಎಂ ಬಿ ಪಾಟೀಲ

ರಾಷ್ಟ್ರಮಟ್ಟದ ಮಹಿಳಾ ಉದ್ಯಮಿಗಳ ಸಮಾವೇಶ ಬೆಂಗಳೂರಿನಲ್ಲಿ ನಡೆಯಿತು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಭಾಗವಹಿಸಿದ್ದರು.

Minister MB Patil participated in the conference of women entrepreneurs.
ಮಹಿಳಾ ಉದ್ಯಮಿಗಳ ಸಮಾವೇಶದಲ್ಲಿ ಸಚಿವ ಎಂ ಬಿ ಪಾಟೀಲ ಭಾಗವಹಿಸಿದ್ದರು.
author img

By ETV Bharat Karnataka Team

Published : Nov 18, 2023, 5:06 PM IST

ಬೆಂಗಳೂರು: ರಾಜ್ಯ ಸರಕಾರವು ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮಂಡಳಿ ಸೇರಿದಂತೆ ಹಲವು ಸಾಂಸ್ಥಿಕ ವ್ಯವಸ್ಥೆಗಳಿಂದ ಉತ್ತೇಜನ ನೀಡುತ್ತಿದೆ. ಉದ್ಯಮಶೀಲ ಮಹಿಳೆಯರು ಬೆಂಗಳೂರಿನ ಆಚೆಯೂ ಉದ್ದಿಮೆಗಳನ್ನು ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಸಲಹೆ ನೀಡಿದರು.

ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ರಾಷ್ಟ್ರಮಟ್ಟದ ಮಹಿಳಾ ಉದ್ಯಮಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯದ ಕೈಗಾರಿಕಾ ನೀತಿಯಲ್ಲಿ ಕೆಐಎಡಿಬಿಯಿಂದ ಹಂಚುತ್ತಿರುವ ನಿವೇಶನದಲ್ಲಿ ಮಹಿಳಾ ಉದ್ಯಮಿಗಳಿಗೆ ಶೇ 5ರಷ್ಟು ಮೀಸಲು ನೀಡಲಾಗಿದೆ. ಜೊತೆಗೆ ಕೆಎಸ್ಸೆಸೈಡಿಸಿಯಲ್ಲೂ ಜಮೀನು ಹಂಚಿಕೆಯಲ್ಲಿ ಇದೇ ಸೂತ್ರ ಅಳವಡಿಸಿಕೊಳ್ಳಲಾಗಿದೆ. ಹೂಡಿಕೆ ಸಬ್ಸಿಡಿಯಾಗಿ ಶೇ.5ರಷ್ಟು ಹೆಚ್ಚುವರಿ ಪ್ರೋತ್ಸಾಹ ಮತ್ತು ವಿದ್ಯುತ್‌ ಬಿಲ್‌ ಮೇಲೆ ಗರಿಷ್ಠ ನಾಲ್ಕು ವರ್ಷಗಳ ವಿನಾಯಿತಿ ನೀಡಲಾಗುತ್ತಿದೆ ಎಂದು ಸಚಿವರು ಇದೇ ವೇಳೆ ವಿವರಣೆ ನೀಡಿದರು.

ರಾಜ್ಯವು ಮಹಿಳೆಯರನ್ನು ಕೈಗಾರಿಕಾ ರಂಗದಲ್ಲಿ ಮೊದಲಿನಿಂದಲೂ ಪ್ರೋತ್ಸಾಹಿಸುತ್ತಿದೆ. ತಂತ್ರಜ್ಞಾನ ಪರಿಪೋಷಣಾ ಕೇಂದ್ರ, ತಂತ್ರಜ್ಞಾನ ಅಳವಡಿಕೆ ಇವುಗಳಲ್ಲೂ ಅರ್ಧದಷ್ಟು ಮೊತ್ತವನ್ನು ಸಬ್ಸಿಡಿಯಾಗಿ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಮಳೆ ನೀರು ಸಂಗ್ರಹಣೆ, ತ್ಯಾಜ್ಯ, ನೀರು ಮರು ಬಳಕೆ, ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗಳಿಗೆ ಪ್ರೋತ್ಸಾಹ ಕೊಡಲಾಗುತ್ತಿದೆ ಎಂದು ವಿವರಿಸಿದರು.

ಕೆಎಸ್‌ಎಫ್‌ಸಿಯಿಂದ 2 ಕೋಟಿ ರೂ ಸಾಲ: ಮಹಿಳೆಯರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದರೆ ಕೆಎಸ್‌ಎಫ್‌ಸಿ ಮೂಲಕ ಗರಿಷ್ಠ 2 ಕೋಟಿ ರೂ.ವರೆಗೆ ಶೇ.14ರಷ್ಟು ಬಡ್ಡಿ ದರದಲ್ಲಿ ಸುಲಭವಾಗಿ ಸಾಲ ಕೊಡಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳನ್ನು ಸ್ಥಾಪಿಸುವ ಆಸಕ್ತಿ ಇರುವ ಮಹಿಳೆಯರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಸಾಲಕ್ಕೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಐದು ವರ್ಷಗಳವರೆಗೆ ಶೇ.10ರಷ್ಟು ಬಡ್ಡಿಯನ್ನು ತಾನೇ ಪಾವತಿಸುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರಕಾರವು ಹೆಚ್ಚಿನ ಒತ್ತು ಕೊಟ್ಟಿದೆ. ಜೊತೆಗೆ ಕೌಶಲ್ಯಾಭಿವೃದ್ಧಿಗೂ ಗಮನ ಹರಿಸಲಾಗಿದೆ. ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ಹಲವು ಸಾಮಾಜಿಕ ಆಶಯಗಳನ್ನೂ ನನಸು ಮಾಡಿಕೊಳ್ಳುವುದು ಸಾಧ್ಯವಿದೆ ಎಂದು ಪ್ರತಿಪಾದಿಸಿದರು.ಕಾರ್ಯಕ್ರಮದಲ್ಲಿ ಕೆ.ರತ್ನಪ್ರಭಾ, ಉದ್ಯಮಿಉಮಾ ರೆಡ್ಡಿ, ರಾಜಲಕ್ಷ್ಮಿ, ಲತಾ ಗಿರೀಶ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಇದನ್ನೂಓದಿ: ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಡಿಜಿಟಲ್ ಬಸ್: ರಾಜ್ಯದಲ್ಲೇ ಪ್ರಥಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.