ETV Bharat / state

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಜೀವಿನಿ ಸರಸ್‌ ಮೇಳ

author img

By

Published : Apr 6, 2022, 7:33 PM IST

Updated : Apr 6, 2022, 8:18 PM IST

ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಇಲ್ಲಿ ತಮ್ಮ ಕೌಶಲಗಳನ್ನು ಪ್ರದರ್ಶಿಸುವ ಜತೆಗೆ ಗ್ರಾಹಕರೊಂದಿಗೆ ನೇರ ಸಂವಾದ ಮಾಡಬಹುದು. ಅಲ್ಲದೆ, ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯೊಂದಿಗೆ ತರಬೇತಿ, ಕಾರ್ಯಾಗಾರ, ವಿಚಾರ ಸಂಕಿರಣ, ಕಾರ್ಪೊರೇಟ್ ಪ್ರಮುಖರ ಮಾತುಕತೆ ಸಿಎಸ್ಆರ್ ದುಂಡು ಮೇಜಿನ ಸಭೆಗಳು ಮತ್ತು ನವೋದ್ಯಮ ಹಾಗೂ ಎನ್‌ಜಿಒ ಅಧಿವೇಶನಗಳನ್ನು ಕೂಡ ಏರ್ಪಡಿಸಲಾಗಿದೆ ಎಂದು ಅಶ್ವತ್ಥ್‌ ನಾರಾಯಣ ತಿಳಿಸಿದರು..

Demonstration of products made by women's self-help groups at the fair
ರಾಷ್ಟ್ರೀಯ ಸಂಜೀವಿನಿ ಸರಸ್‌ ಮೇಳ

ಬೆಂಗಳೂರು : ಮಹಿಳೆಯರ ಆರ್ಥಿಕ ಸಬಲೀಕರಣದ ಆಶಯವನ್ನುಳ್ಳ ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳವು ಏಪ್ರಿಲ್ 8ರಿಂದ 18ರವರೆಗೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಮೇಳವನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥ್‌ ನಾರಾಯಣ ಹೇಳಿದರು.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. 300ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಗಳ ಸಂಯುಕ್ತ ಆಶ್ರಯದಲ್ಲಿ 'ಸಂಜೀವಿನಿ ಸರಸ್' ಮೇಳ ನಡೆಯುತ್ತಿದೆ.

ರಾಷ್ಟ್ರೀಯ ಸಂಜೀವಿನಿ ಸರಸ್‌ ಮೇಳ

ಇದರಲ್ಲಿ ಅಖಿಲ ಭಾರತ ಮಟ್ಟದ ಉತ್ಪನ್ನಗಳು ಗ್ರಾಹಕರಿಗೆ ಸಿಗಲಿವೆ. ರಾಷ್ಟ್ರೀಯ ಗ್ರಾಮೀಣ ಮತ್ತು ನಗರ ಜೀವನೋಪಾಯ ಅಭಿಯಾನದಡಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಮೇಳದ ಲಾಂಛನವನ್ನು ಅನಾವರಣಗೊಳಿಸಿದರು. ಮುಖ್ಯವಾಗಿ ಈ ಮೇಳದಲ್ಲಿ ಕೈಮಗ್ಗದ ಉತ್ಪನ್ನಗಳು, ಕರಕುಶಲ ವಸ್ತುಗಳು, ಬುಡಕಟ್ಟು ಮತ್ತು ಸಾವಯವ ಉತ್ಪನ್ನಗಳು, ಅಲಂಕಾರಿಕ ವಸ್ತುಗಳು, ಮಣ್ಣಿನಿಂದ ತಯಾರಿಸಿದ ಪಾತ್ರೆಗಳು, ಮರದಿಂದ ಮಾಡಿದ ವಸ್ತುಗಳು, ಬಿದಿರು ಮತ್ತು ಸೆಣಬಿನ ವಸ್ತುಗಳು, ಸಾಂಬಾರ ಪದಾರ್ಥಗಳು, ಸಾಂಪ್ರದಾಯಿಕ ವಸ್ತ್ರಗಳು, ಕಲಾಕೃತಿಗಳು, ವರ್ಣಚಿತ್ರಗಳು, ಟೆರ್ರಾಕೋಟ ಮತ್ತು ಪಾರಂಪರಿಕ ಉತ್ಪನ್ನಗಳು ಹಾಗೂ ಸಂಸ್ಕರಿಸಿದ ಆಹಾರ ಪದಾರ್ಥಗಳು ಮುಂತಾದವು ಸಿಗಲಿವೆ.

ಇದನ್ನೂ ಓದಿ: ಬೆಂಗಳೂರು ಪೊಲೀಸರೊಂದಿಗೆ ಡಿಜಿ - ಐಜಿಪಿ‌ ಪ್ರವೀಣ್ ಸೂದ್ ಸಭೆ.. ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ

ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಇಲ್ಲಿ ತಮ್ಮ ಕೌಶಲಗಳನ್ನು ಪ್ರದರ್ಶಿಸುವ ಜತೆಗೆ ಗ್ರಾಹಕರೊಂದಿಗೆ ನೇರ ಸಂವಾದ ಮಾಡಬಹುದು. ಅಲ್ಲದೆ, ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯೊಂದಿಗೆ ತರಬೇತಿ, ಕಾರ್ಯಾಗಾರ, ವಿಚಾರ ಸಂಕಿರಣ, ಕಾರ್ಪೊರೇಟ್ ಪ್ರಮುಖರ ಮಾತುಕತೆ ಸಿಎಸ್ಆರ್ ದುಂಡು ಮೇಜಿನ ಸಭೆಗಳು ಮತ್ತು ನವೋದ್ಯಮ ಹಾಗೂ ಎನ್‌ಜಿಒ ಅಧಿವೇಶನಗಳನ್ನು ಕೂಡ ಏರ್ಪಡಿಸಲಾಗಿದೆ ಎಂದು ಅಶ್ವತ್ಥ್‌ ನಾರಾಯಣ ತಿಳಿಸಿದರು.

ಉದ್ಯಮಶೀಲ ಮಹಿಳೆಯರಿಗೆ ಸರ್ಕಾರದ ನಾನಾ ಇಲಾಖೆಗಳು ಮತ್ತು ಬ್ಯಾಂಕುಗಳು ವಿವಿಧ ಸಾಲ ಸೌಲಭ್ಯ ಹಾಗೂ ಸೇವಾ ಉಪಕ್ರಮಗಳನ್ನು ಹೊಂದಿವೆ. ಮೇಳದಲ್ಲಿ ಈ ಬಗ್ಗೆಯೂ ಮಾಹಿತಿ ಒದಗಿಸುವ ಏರ್ಪಾಡನ್ನು ಕೂಡ ಮಾಡಲಾಗಿದೆ. ಇನ್ನು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಮಂಜುಶ್ರೀ‌, ಜಂಟಿ ನಿರ್ದೇಶಕಿ ಸ್ವರೂಪಾ, ಉಪ ನಿರ್ದೇಶಕಿ ನಯನಾ ಮತ್ತಿತರರು ಇದ್ದರು.

Last Updated : Apr 6, 2022, 8:18 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.