ETV Bharat / state

ಪೊಲೀಸರ ಮೇಲೆ ಹಲ್ಲೆ: ಕುಖ್ಯಾತ ರೌಡಿಶೀಟರ್ ಬಂಧನ

ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗು ಪೊಲೀಸರ ಮೇಲೆಯೇ ಹಲ್ಲೆ ನಡೆಸುತ್ತಿದ್ದ ರೌಡಿಶೀಟರ್ ಓರ್ವನನ್ನು ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

natorious-rowdy-sheeter-arrested-by-dj-halli-police-arrested
ಪೊಲೀಸರ ಮೇಲೆಯೇ ಹಲ್ಲೆ ನಡೆಸುತ್ತಿದ್ದ ಕುಖ್ಯಾತ ರೌಡಿಶೀಟರ್ ಬಂಧನ
author img

By

Published : Dec 12, 2022, 3:14 PM IST

Updated : Dec 12, 2022, 3:27 PM IST

ಪೊಲೀಸರ ಮೇಲೆಯೇ ಹಲ್ಲೆ ನಡೆಸುತ್ತಿದ್ದ ಕುಖ್ಯಾತ ರೌಡಿಶೀಟರ್ ಬಂಧನ

ಬೆಂಗಳೂರು: ಡಕಾಯಿತಿ, ಸುಲಿಗೆ ಹಾಗು ಹಲ್ಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ನನ್ನು​ ಡ್ರಗ್ಸ್​ ಪ್ರಕರಣದಲ್ಲಿ ಡಿ.ಜೆ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜೆ.ಸಿ ನಗರ ಪೊಲೀಸ್ ಠಾಣೆ ರೌಡಿಶೀಟರ್ ಸುಹೈಲ್ ಬಂಧಿತ ಆರೋಪಿ. ಶಿವಾಜಿನಗರ ನಿವಾಸಿಯಾಗಿರುವ ಈತನ ವಿರುದ್ಧ 14ಕ್ಕೂ ಹೆಚ್ಚು ಪ್ರಕರಣಗಳಿವೆ.

ಹಲವು ಬಾರಿ ಜೈಲಿಗೆ ಹೋಗಿಬಂದಿದ್ದ ಸುಹೈಲ್​, ಡ್ರಗ್ಸ್ ಸೇವಿಸಿ ವ್ಯಾಪಾರಿಗಳನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಹಣ ಪಡೆಯುತ್ತಿದ್ದ. ಹಣ ಕೊಡದಿದ್ದರೆ ಮಾರಕಾಸ್ತ್ರಗಳಿಂದ ಹಲ್ಲೆ‌ ಮಾಡುತ್ತಿದ್ದನಂತೆ. ಅಲ್ಲದೆ ತನ್ನ ಸಹಚರರನ್ನು ಕಟ್ಟಿಕೊಂಡು ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದನು ಎಂದು ತಿಳಿದುಬಂದಿದೆ.

ಆರೋಪಿಯ ವಿರುದ್ಧ ವಾರೆಂಟ್ ಹೊರಡಿಸಿದ್ದರೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದನು. ಹಲವು ಬಾರಿ ಪೊಲೀಸರ ಮೇಲೆಯೂ ಹಲ್ಲೆ ನಡೆಸಿದ್ದಾನೆ. ಇದೀಗ ಡಿ.ಜೆ.ಹಳ್ಳಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದರು.

ಇದನ್ನೂ ಓದಿ: ಬಾಲಕಿ ಮೇಲೆ‌ ಅತ್ಯಾಚಾರಕ್ಕೆ ಯತ್ನ ಆರೋಪ: ವೃದ್ಧನನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದ ಸಂತ್ರಸ್ತೆಯ ಕುಟುಂಬ

Last Updated : Dec 12, 2022, 3:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.