ಬೆಂಗಳೂರು: ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ ಆರೋಪಿ ನವೀನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದೆ.
ಪೂರ್ವ ವಿಭಾಗದ ವಿಶೇಷ ತಂಡ ಹಾಗೂ ಸಿಸಿಬಿ ಪೊಲೀಸರು ನವೀನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ವೇಳೆ ವಿವಾದಾತ್ಮಕ ಫೋಟೋವನ್ನು ಕಮೆಂಟ್ ಮೂಲಕ ಪೋಸ್ಟ್ ಮಾಡಿ, ಬಳಿಕ ಅದನ್ನು ಡಿಲೀಟ್ ಮಾಡಿ ಹ್ಯಾಕ್ ಆಗಿದೆ ಎಂದು ಸುಳ್ಳು ಹೇಳಿದ್ದ. ಆದರೆ, ಪೋಲಿಸರು ಸಾಕ್ಷ್ಯಗಳನ್ನು ಇಟ್ಟಾಗ ಘಟನೆಯ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಆದರೆ, ನವೀನ್ ಮೊಬೈಲ್ ಮಾತ್ರ ಇದುವರೆಗೂ ಪತ್ತೆಯಾಗಿಲ್ಲ. ನವೀನ್ ಫೇಸ್ಬುಕ್ ಐಡಿ, ಪಾಸ್ವರ್ಡ್ ಮೂಲಕ ಅಕೌಂಟ್ ಆಕ್ಸೆಸ್ ಮಾಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ತನಿಖೆ ವೇಳೆ ಕ್ಷಮೆಯಾಚಿಸಿದ್ದಾನೆಂದು ತಿಳಿದು ಬಂದಿದೆ.
ಮತ್ತೊಂದೆಡೆ ನವೀನ್ ಮೊಬೈಲ್ ಎಲ್ಲಿದೆ ಎಂಬ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಇನ್ನು ಪೊಲೀಸ್ ತನಿಖೆ ವೇಳೆ ಮೊಬೈಲ್ ಕಳೆದು ಹೋಗಿದೆ ಎಂದು ನವೀನ್ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣವನ್ನ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಇಂದು ಎಫ್ಎಸ್ಎಲ್ ಅಧಿಕಾರಿಗಳ ತಂಡ ಶಾಸಕ ಅಖಂಡ ಶ್ರೀನಿವಾಸ ಅವರ ನಿವಾಸಕ್ಕೆ ಭೇಟಿ ನೀಡಲಿದ್ದು, ಶಾಸಕರ ಮನೆ ಗೇಟ್ಗೆ ಪೊಲೀಸರು ಬೀಗ ಹಾಕಿದ್ದಾರೆ. ಅಷ್ಟೇ ಅಲ್ಲದೆ, ಅನಾವಶ್ಯಕವಾಗಿ ಓಡಾಡುವವರಿಗೆ ಪೊಲೀಸರು ಎಚ್ಚರಿಕೆ ಸಹ ನೀಡಿದ್ದಾರೆ.