ETV Bharat / state

ನಾಯಂಡಹಳ್ಳಿ ಆಸ್ಪತ್ರೆಗೆ ಪುನೀತ್ ರಾಜ್‌ಕುಮಾರ್ ಹೆಸರು ನಾಮಕರಣ: ವಿ.ಸೋಮಣ್ಣ - ETV Bharat Kannada news

ನಾಡಿನ ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಸಭಾಂಗಣವನ್ನು ಲೋಕಾರ್ಪಣೆ ಮಾಡಿದ ಸಚಿವ ವಿ.ಸೋಮಣ್ಣ, ರಾಷ್ಟ್ರ ಮತ್ತು ರಾಜ್ಯಕ್ಕೆ ವಿಶೇಷ ಸೇವೆ ಸಲ್ಲಿಸಿದ ಮಹನೀಯರ ಹೆಸರುಗಳನ್ನು ಪ್ರಮುಖ ಕ್ಷೇತ್ರದ ಯೋಜನೆಗಳಿಗೆ ಇಡಲಾಗುವುದು ಎಂದರು.

Inauguration of Dr M Chidananda Murthy Auditorium
ಡಾ ಎಂ ಚಿದಾನಂದ ಮೂರ್ತಿ ಸಭಾಂಗಣ ಲೋಕಾರ್ಪಣೆ
author img

By

Published : Jan 20, 2023, 8:20 AM IST

ಬೆಂಗಳೂರು : ನಮ್ಮ ಸಂಸ್ಕೃತಿಯನ್ನು ಉಳಿಸಲು ನಮ್ಮ ಕ್ಷೇತ್ರದ ಯೋಜನೆಗಳಿಗೆ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಲಾಗುವುದು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಗೋವಿಂದ ರಾಜ ವಿಧಾನಸಭಾ ಕ್ಷೇತ್ರದ ಪಾಲಿಕೆ ಸೌಧದಲ್ಲಿ ಗುರುವಾರ ಹಿರಿಯ ಸಂಶೋಧಕ, ಸಾಹಿತಿ ಚಿಂತಕ ನಾಡೋಜ ಡಾ.ಎಂ.ಚಿದಾನಂದ ಮೂರ್ತಿ ಸಭಾಂಗಣವ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಚಿದಾನಂದಮೂರ್ತಿ ಅವರು ತಮ್ಮ ಸಂಶೋಧನೆಯಲ್ಲಿ ವಾಸ್ತವಾಂಶಕ್ಕೆ ಹೆಚ್ಚು ಒತ್ತು ನೀಡಿದ್ದರು. ರಾಜ್ಯದ ಮೂಲೆ, ಮೂಲೆಗಳಿಗೆ ತೆರಳಿ ಕನ್ನಡ ನಾಡಿನ ಇತಿಹಾಸವನ್ನು ಸಂಶೋಧಿಸಿದ್ದಾರೆ ಎಂದು ಅವರು ಸ್ಮರಿಸಿದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಯೋಜನೆಗಳಿಗೆ ರಾಷ್ಟ್ರ ಮತ್ತು ರಾಜ್ಯಕ್ಕೆ ಸೇವೆ ಸಲ್ಲಿಸಿದ ಮಹನೀಯರುಗಳ ಹೆಸರುಗಳನ್ನು ನಾಮಕರಣ ಮಾಡಲಾಗುತ್ತಿದೆ. ಇದೇ ರೀತಿ, ರಾಷ್ಟ್ರಕ್ಕೆ ಸಂಶೋಧನೆ ಮೂಲಕ ಉಪಯುಕ್ತ ಕೊಡುಗೆ ನೀಡಿರುವ ಚಿದಾನಂದಮೂರ್ತಿ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು ಎಂದು ಅವರ ಹೆಸರನ್ನು ಪಾಲಿಕೆ ಸಭಾಂಗಣಕ್ಕೆ ಇಡಲಾಗಿದೆ ಎಂದರು. ಈ ಸಂದರ್ಭದಲ್ಲಿ ನಾಯಂಡಹಳ್ಳಿಯ 200 ಹಾಸಿಗೆಯ ಆಸ್ಪತ್ರೆಗೆ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್​ ಹೆಸರಿಡುವ ಬಗ್ಗೆ ಅವರು ಪ್ರಕಟಿಸಿದರು.

ಕಾಯಕ ಯೋಗಿ ಶ್ರೀ ಬಸವೇಶ್ವರ, ದಾಸಶೇಷ್ಠ ಕನಕದಾಸ, ಸಂಗೊಳ್ಳಿ ರಾಯಣ್ಣ, ನಾಡಪ್ರಭು ಕೆಂಪೇಗೌಡರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ, ಪೇಜಾವರ ಶ್ರೀ ಅವರಂಥ ಮಹನೀಯರುಗಳ ಹೆಸರುಗಳನ್ನು ಶಾಶ್ವತವಾಗಿ ಸ್ಮರಿಸಿಕೊಳ್ಳಲು ಮತ್ತು ಮುಂದಿನ ಪೀಳಿಗೆಯು ಮಹನೀಯರುಗಳ ಆದರ್ಶಗಳನ್ನು ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಪ್ರಜೆಯಾಗಲೆಂಬ ಉದ್ದೇಶದಿಂದ ಹೆಸರುಗಳನ್ನು ನಾಮಕರಣ ಮಾಡಲಾಗಿದೆ ಎಂದರು.

ಮಾಗಡಿ ರಸ್ತೆ ಪೊಲೀಸ್ ಠಾಣೆಯನ್ನು ನವೀಕರಣ ಮಾಡಲಾಗಿದೆ. ಡಿ.ಸಿ.ಪಿ. ಕಚೇರಿಯನ್ನು ಮಾಗಡಿ ರಸ್ತೆಯಲ್ಲಿ ಪ್ರಾರಂಭಿಸಲಾಗಿದೆ. 2,000 ವಿದ್ಯಾರ್ಥಿಗಳಿಗೆ ಅವಕಾಶ ಇರುವ ಪ್ರಥಮ ದರ್ಜೆ ಕಾಲೇಜು ಹಾಗೂ 1 ಕಿಲೋ ಮೀಟರ್ ಉದ್ದದ ಮೇಲ್ಸೇತುವೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣವನ್ನು ಇದೇ ತಿಂಗಳು ಜನವರಿ 29ರಂದು ಲೋಕಾರ್ಪಣೆ ಮಾಡಲಾಗುವುದು. ನಾಯಂಡಹಳ್ಳಿ ಕೆರೆಯನ್ನು ಶುದ್ಧೀಕರಿಸಲಾಗಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.

ದಾಸರಹಳ್ಳಿ ವಾರ್ಡ್​ನಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು 16ನೇ ತಾರೀಖಿನಂದು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಸಮಾರಂಭದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಜಯರಾಮ್, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ದಾಸೇಗೌಡ, ಜಯರತ್ನ ಹಾಗು ಬಿ.ಜೆ.ಪಿ.ಮುಖಂಡರು, ಕಾರ್ಯಕರ್ತರಿದ್ದರು.

ಇದನ್ನೂ ಓದಿ: ಬಡವರಿಗೆ ವಸತಿ ಸೌಲಭ್ಯ: ಸಹಾಯಧನ ಹೆಚ್ಚಳ- ಸಚಿವ ವಿ.ಸೋಮಣ್ಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.