ETV Bharat / state

ಜೂನ್ 30ರೊಳಗೆ ಖಾಸಗಿ, ಸರ್ಕಾರಿ ಬಸ್‌ಗಳಲ್ಲಿ ವಿಶೇಷಚೇತನರಿಗೆ ಅಗತ್ಯ ಸೌಲಭ್ಯ: ಸರ್ಕಾರ - ವಿಭಾಗೀಯ ಪೀಠ

Facilities for physically challenged people in Buses: ದೃಷ್ಟಿ ವಿಶೇಷ ಚೇತನ ವ್ಯಕ್ತಿ ಎನ್. ಶ್ರೇಯಸ್ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Highcourt
ಹೈಕೋರ್ಟ್​
author img

By ETV Bharat Karnataka Team

Published : Dec 21, 2023, 3:39 PM IST

ಬೆಂಗಳೂರು: ವಿಶೇಷಚೇತನರಿಗೆ ನೆರವಾಗುವಂತೆ ಖಾಸಗಿ ಮತ್ತು ಸಾರ್ವಜನಿಕ ಸಾರಿಗೆ ಬಸ್‌ಗಳಲ್ಲಿ 'ಆಡಿಯೋ ಪ್ರಕಟಣಾ ವ್ಯವಸ್ಥೆ' ಅಳವಡಿಸಲು ಹಾಗೂ ವಿಶೇಷಚೇತನರಿಗೆ ಇಳಿಯಲು ಮತ್ತು ಹತ್ತಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು 2024ರ ಜೂನ್ 30ರ ಕಾಲಮಿತಿ ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಇಂದು ಹೈಕೋರ್ಟ್‌ಗೆ ತಿಳಿಸಿದೆ.

ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಂ ಹುಯಿಲಗೋಳ, "ಸಾರಿಗೆ ಆಯುಕ್ತರು ಡಿ.19ರಂದು ಹೊರಡಿಸಿರುವ ಸುತ್ತೋಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಹೈಕೋರ್ಟ್ 2023ರ ನವೆಂಬರ್ 9ರಂದು ನೀಡಿದ ಆದೇಶದಂತೆ ಸುತ್ತೋಲೆ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯದ ಅಟೋಮೇಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ಸ್​ ಎಐಎಸ್-153ರ ಬಸ್‌ಗಳ ನಿರ್ಮಾಣಕ್ಕೆ ಹೆಚ್ಚುವರಿ ಅಗತ್ಯತೆಗಳ ತಿದ್ದುಪಡಿ- 2019ರಲ್ಲಿ ಪ್ರಸ್ತಾಪ ಮಾಡಿರುವಂತೆ ಹಾಗೂ ಹೈಕೋರ್ಟ್ ಆದೇಶದಂತೆ ಕ್ರಮ ವಹಿಸಲು ರಾಜ್ಯದ ಎಲ್ಲಾ ಉಪ ಸಾರಿಗೆ ಆಯುಕ್ತರು, ಹಿರಿಯ ಪ್ರಾದೇಶಿಕ ಸಾರಿಗೆ ಆಧಿಕಾರಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ" ಎಂದು ನ್ಯಾಯಪೀಠಕ್ಕೆ ವಿವರಿಸಿದರು.

"ಪ್ರಮುಖವಾಗಿ, ರಾಜ್ಯದಲ್ಲಿ ಎಲ್ಲ ಮಜಲು ವಾಹನಗಳಲ್ಲಿ (ಸ್ಟೇಜ್ ಕ್ಯಾರೇಜ್) ವಿಶೇಷಚೇತನರಿಗೆ ಅನುಕೂಲವಾಗುವಂತೆ ಆಡಿಯೋ ಪ್ರಕಟಣಾ ವ್ಯವಸ್ಥೆ ಮತ್ತು ಬಸ್‌ಗಳಲ್ಲಿ ಇಳಿಯಲು, ಹತ್ತಲು ಅಗತ್ಯ ಸೌಲಭ್ಯವನ್ನು ಒದಗಿಸಲು 2024ರ ಜೂನ್ 30ರೊಳಗೆ ಕಡ್ಡಾಯವಾಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನೋಂದಣಿ ಮತ್ತು ಅರ್ಹತಾ ಪತ್ರ ನವೀಕರಿಸುವ ಮೊದಲು ಈ ವ್ಯವಸ್ಥೆ ಅಳವಡಿಸಿಕೊಂಡಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಇದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳಿಗೂ ಅನ್ವಯವಾಗಲಿದೆ. ಇದಕ್ಕೆ ಸಂಬಂಧಿಸಿದ ಹೆಚ್ಚುವರಿ ಸುತ್ತೋಲೆ, ಸೂಚನೆಗಳನ್ನು ಸಹ ಹೊರಡಿಸಲಾಗುವುದು" ಎಂದು ಮಾಹಿತಿ ನೀಡಿದರು.

ಬಿಎಂಟಿಸಿ ಪರ ವಕೀಲರು ವಾದ ಮಂಡಿಸಿ, "ನಿಗಮದಲ್ಲಿ ಶೇ.59ರಷ್ಟು ವಾಹನಗಳಲ್ಲಿ ಆಡಿಯೋ ಪ್ರಕಟಣಾ ವ್ಯವಸ್ಥೆ ಜಾರಿಯಲ್ಲಿದೆ. ಒಟ್ಟು ಬಸ್‌ಗಳ ಪೈಕಿ 2,562 ಬಸ್‌ಗಳಲ್ಲಿ ಅಂತಹ ವ್ಯವಸ್ಥೆ ಇಲ್ಲ. ಆದರಲ್ಲಿ 1,145 ಬಸ್‌ಗಳನ್ನು ಹಂತ-ಹಂತವಾಗಿ ಗುಜರಿಗೆ ಹಾಕಿ ಬದಲಿ ಬಸ್‌ಗಳನ್ನು ಖರೀದಿಸಲಾಗುವುದು. ಹೊಸದಾಗಿ 921 ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ 430 ಬಸ್‌ಗಳನ್ನು ಖರೀದಿಸಲಾಗುತ್ತದೆ. ಹೊಸ ಬಸ್‌ಗಳಲ್ಲಿ ವಿಶೇಷಚೇತನರಿಗೆ ಬೇಕಾದ ಸೌಲಭ್ಯಗಳು ಇರಲಿವೆ. ನಿಗಮದ ಉಳಿದ ಬಸ್‌ಗಳಲ್ಲಿ ಅಂತಹ ವ್ಯವಸ್ಥೆ ಅಳವಡಿಸಲು ಟೆಂಡರ್ ಕರೆದು, ಖರೀದಿ ಪ್ರಕ್ರಿಯೆ ಮತ್ತು ವ್ಯವಸ್ಥೆಯ ಅಳವಡಿಕೆಗೆ ಕಾಲಮಿತಿ ಹಾಕಿಕೊಳ್ಳಲಾಗಿದೆ" ಎಂದರು.

ಸರ್ಕಾರ ಮತ್ತು ಬಿಎಂಟಿಸಿ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು 2024ರ ಏಪ್ರಿಲ್ 24ಕ್ಕೆ ಮುಂದೂಡಿತು.

ಇದನ್ನೂ ಓದಿ: ಬಿಬಿಎಂಪಿ ಆಸ್ತಿಗಳ ಕುರಿತು ಕ್ಯೂ-ಆರ್ ಕೋಡ್ ಮಾದರಿಯ ತಂತ್ರಜ್ಞಾನ ಅಳವಡಿಸಲು ಹೈಕೋರ್ಟ್ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.