ETV Bharat / state

ಕೈಗಾರಿಕಾ ವಲಯದ ಚೇತರಿಕೆಗೆ ಅಗತ್ಯ ಕ್ರಮ: ಜಗದೀಶ್​ ಶೆಟ್ಟರ್​ - ಕೈಗಾರಿಕಾ ಸಂಘಟನೆಗಳ ಪ್ರತಿನಿಧಿ

ಕಾರ್ಮಿಕರಿಗೆ ವೇತನ, ಲಾಕ್‌ ಡೌನ್‌ ನಿಂದಾಗಿ ಕೈಗಾರಿಕಾ ವಲಯಕ್ಕೆ ಆಗಿರುವ ತೊಂದರೆಗಳು ಹಾಗೂ ಅವುಗಳಿಂದ ಹೊರ ಬರಲು ರಾಜ್ಯ ಸರಕಾರದಿಂದ ಬೇಕಾದ ಸೌಲಭ್ಯಗಳ ಬಗ್ಗೆ ಕೈಗಾರಿಕೋದ್ಯಮಿಗಳು, ಸಚಿವ ಜಗದೀಶ್‌ ಶೆಟ್ಟರ್‌ ಅವರ ಗಮನ ಸೆಳೆದರು.

ಜಗದೀಶ್​ ಶೆಟ್ಟರ್​ ಜಗದೀಶ್​ ಶೆಟ್ಟರ್​
ಜಗದೀಶ್​ ಶೆಟ್ಟರ್​
author img

By

Published : Apr 10, 2020, 10:57 AM IST

ಬೆಂಗಳೂರು: ಕೊರೊನಾ ಕರ್ಫ್ಯೂನಿಂದ ತೊಂದರೆಗೀಡಾಗಿರುವ ರಾಜ್ಯದ ಕೈಗಾರಿಕಾ ವಲಯದ ಚೇತರಿಕೆಗೆ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಕೈಗಾರಿಕಾ ಸಂಘಟನೆಗಳ ಪ್ರತಿನಿಧಿಗಳಿಗೆ ಭರವಸೆ ನೀಡಿದರು.

ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಚೇಂಬರ್‌ ಆಫ್‌ ಇಂಡಸ್ಟ್ರಿ ಮತ್ತು ಕಾಮರ್ಸ್‌ ಹಾಗೂ ಪೀಣ್ಯ ಕೈಗಾರಿಕಾ ಸಂಘದ ಪಧಾಧಿಕಾರಿಗಳು ಹಾಗೂ ಕೆಲವು ಕೈಗಾರಿಕೋದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಕಾರ್ಮಿಕರಿಗೆ ವೇತನ, ಲಾಕ್‌ ಡೌನ್‌ ನಿಂದಾಗಿ ಕೈಗಾರಿಕಾ ವಲಯಕ್ಕೆ ಆಗಿರುವ ತೊಂದರೆಗಳು ಹಾಗೂ ಅವುಗಳಿಂದ ಹೊರ ಬರಲು ರಾಜ್ಯ ಸರಕಾರದಿಂದ ಬೇಕಾದ ಸೌಲಭ್ಯಗಳ ಬಗ್ಗೆ ಕೈಗಾರಿಕೋದ್ಯಮಿಗಳು ಸಚಿವ ಜಗದೀಶ್‌ ಶೆಟ್ಟರ್‌ ಅವರ ಗಮನ ಸೆಳೆದರು. ಈ ಬಗ್ಗೆ ಮಾತನಾಡಿದ ಅವರು, ಕೊರೊನಾದಿಂದಾಗಿ ದೇಶ ಅಷ್ಟೇ ಅಲ್ಲದೆ ಇಡೀ ಜಗತ್ತೇ ತೊಂದರೆಯನ್ನು ಅನುಭವಿಸುತ್ತಿದೆ. ಇಂತಹ ಸಂಧರ್ಭದಲ್ಲಿ ಹಲವಾರು ವಲಯಗಳು ತೊಂದರೆಗೀಡಾಗುವುದು ಸಹಜ. ಕೈಗಾರಿಕಾ ಇಲಾಖೆಯ ಅಡಿಯಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವ, ಅಗತ್ಯ ಕೈಗಾರಿಕೆಗಳು ಕಾರ್ಯಪ್ರಾರಂಭಿಸುವಂತೆ ಆದೇಶ ನೀಡಲಾಗಿದೆ ಎಂದರು.

ಕೈಗಾರಿಕಾ ಸಂಘಟನೆಗಳ ಪ್ರತಿನಿಧಿಗಳು ನೌಕರರಿಗೆ ವೇತನ, ಸಾರಿಗೆ ಹಾಗೂ ಇನ್ನಿತರ ಸೌಲಭ್ಯಗಳ ಕುರಿತಂತೆ ಮನವಿಗಳನ್ನು ಸಲ್ಲಿಸಿದ್ದಾರೆ. ಈ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಅಲ್ಲದೆ, ಕೈಗಾರಿಕೆಗಳ ಚೇತರಿಕೆಗೆ ಬೇಕಾದ ಕ್ರಮಗಳು ಹಾಗೂ ಅನುಕೂಲತೆಗಳ ಬಗ್ಗೆ ರಾಜ್ಯ ಸರ್ಕಾರ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.