ETV Bharat / state

ಬೆಂಗಳೂರಿನಲ್ಲಿ ಅಮೆರಿಕ ವೀಸಾ ಕಚೇರಿ ತೆರೆಯುವ ಅಗತ್ಯವಿದೆ: ಸಿಎಂ ಬೊಮ್ಮಾಯಿ - ETV Bharat Karnataka

ಬೆಂಗಳೂರಿನಲ್ಲಿ ವೀಸಾ ಕಚೇರಿಯ ಅಗತ್ಯವಿದೆ - ಬೆಂಗಳೂರು ಸ್ಟಾರ್ಟ್ ಅಪ್ ಕ್ಯಾಪಿಟಲ್- ಏರೋಸ್ಪೇಸ್ ಹಾಗೂ ರಕ್ಷಣಾ ವಲಯದಲ್ಲಿಯೂ ಕರ್ನಾಟಕ ಮುಂಚೂಣಿಯಲ್ಲಿದೆ ಎಂದ ಸಿಎಂ ಬೊಮ್ಮಾಯಿ

Chief Minister Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Feb 15, 2023, 9:02 AM IST

ಬೆಂಗಳೂರು :ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇದ್ಕಕಾಗಿ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಹಾಗೂ ಚೆನ್ನೈನಲ್ಲಿರುವ ಕಾನ್ಸುಲ್ ಜನರಲ್ ಜೂಡಿತ್ ರೇವಿನ್ ಅವರಿಗೆ ಮನವಿ ಮಾಡಿದರು. ಮಂಗಳವಾರ ಅಮೆರಿಕ ರಾಯಭಾರಿಗಳನ್ನು ಭೇಟಿ ಮಾಡಿದ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಈ ವಿಷಯವನ್ನು ಪ್ರಸ್ತಾಪಿಸಿದರು.

ಬೆಂಗಳೂರಿನಲ್ಲಿ ವೀಸಾ ಕಚೇರಿ ತೆರೆಯುವಂತೆ ಆಗ್ರಹ : ವೀಸಾ ಕಚೇರಿ ಚೆನ್ನೈನಲ್ಲಿರುವುದರಿಂದ ಬೆಂಗಳೂರಿನಿಂದ ಅಮೆರಿಕಕ್ಕೆ ಪ್ರಯಾಣಿಸುವವರಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ವಿದೇಶಿಗರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನ ಅಮೆರಿಕಕ್ಕೆ ಪ್ರಯಾಣ ಬೆಳೆಸುವುದರಿಂದ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರಿನಲ್ಲಿ ವೀಸಾ ಕಚೇರಿಯನ್ನು ತೆರೆಯುವಂತೆ ಆಗ್ರಹಿಸಿದರು.

ವಿದೇಶಿ ಬಂಡವಾಳ ಹೂಡಿಕೆ ರಾಜ್ಯದಲ್ಲಿ ಹೆಚ್ಚಾಗಿದೆ : ಬೆಂಗಳೂರಿನಲ್ಲಿರುವ ಅಮೆರಿಕದ ಸಂಸ್ಥೆಗಳಿಗೆ ಎಲ್ಲ ಅಗತ್ಯ ಸಹಕಾರವನ್ನು ರಾಜ್ಯ ಸರ್ಕಾರ ಒದಗಿಸುತ್ತಿದ್ದು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳನ್ನು ಸ್ಥಾಪಿಸಲು ಅತ್ಯುತ್ತಮ ವಾತಾವರಣವಿದೆ. ಹಾಗಾಗಿ, ವಿದೇಶಿ ಬಂಡವಾಳ ಹೂಡಿಕೆ ರಾಜ್ಯದಲ್ಲಿ ಹೆಚ್ಚಾಗಿದೆ. ಬೆಂಗಳೂರು ಭವಿಷ್ಯದ ನಗರವಾಗಿದ್ದು, ಆನೇಕ ಜನರಿಗೆ ಜೀವನ ಕಟ್ಟು ಕೊಳ್ಳುವ ನಗರವಾಗಿದೆ. ಆದ್ದರಿಂದ ಬೆಂಗಳೂರಿನಲ್ಲಿ ವೀಸಾ ಕಚೇರಿಯ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಮೆರಿಕದ ರಾಯಭಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

  • ಭಾರತಕ್ಕೆ ಅಮೆರಿಕದ ರಾಯಭಾರಿ ಎಲಿಜಬೆತ್ ಜೋನ್ಸ್ ಹಾಗೂ ಚೆನ್ನೈನಲ್ಲಿರುವ ಯು.ಎಸ್. ಕೌನ್ಸಲ್ ಜನರಲ್ ಜ್ಯೂಡಿತ್ ರಾವಿನ್ ಅವರು ಇಂದು ಮುಖ್ಯಮಂತ್ರಿ @BSBommai ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
    1/2 pic.twitter.com/MRe7I5ttps

    — CM of Karnataka (@CMofKarnataka) February 14, 2023 " class="align-text-top noRightClick twitterSection" data=" ">

ಸ್ಟಾರ್ಟ್ ಅಪ್ ಕ್ಯಾಪಿಟಲ್ ಬೆಂಗಳೂರು: ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ ಹಾಗೂ ವಿಚಾರ ಸಂಕಿರಣಗಳು ನಡೆಯುತ್ತಲೇ ಇರುತ್ತವೆ. ಅಂತಾರಾಷ್ಟ್ರೀಯ ಗಣ್ಯರು ಇವುಗಳಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸುತ್ತಾರೆ. ಬೆಂಗಳೂರು ಸ್ಟಾರ್ಟ್ ಅಪ್ ಕ್ಯಾಪಿಟಲ್ ಆಗಿದ್ದು, ದೇಶದಲ್ಲಿಯೇ ಅತಿ ಹೆಚ್ಚಿನ ಯೂನಿಕಾರ್ನ್​ಗಳಿಗೆ ತವರು. ಇಲ್ಲಿ ಉದ್ಯೋಗಾವಕಾಶಗಳು ಹೇರಳವಾಗಿವೆ. ಏರೋಸ್ಪೇಸ್ ಹಾಗೂ ರಕ್ಷಣಾ ವಲಯದಲ್ಲಿಯೂ ಕರ್ನಾಟಕ ಮುಂಚೂಣಿಯಲ್ಲಿದ್ದು, ವಿಮಾನದ ಬಿಡಿಭಾಗಗಳ ಉತ್ಪಾದನೆಗೂ ಗುರಿಯನ್ನು ಹೊಂದಿದೆ ಎಂದರು.

ಅಮೆರಿಕ-ಭಾರತ ವಾಣಿಜ್ಯ ಸಹಭಾಗಿತ್ವ : ನವದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಮಾತನಾಡಿ, ಭಾರತದ ಸಿಲಿಕಾನ್‌ ವ್ಯಾಲಿ ಬೆಂಗಳೂರಿಗೆ ಇದು ತಮ್ಮ ಮೊದಲ ಭೇಟಿಯಾಗಿದ್ದು, ಅಮೇರಿಕ-ಭಾರತದ ವಾಣಿಜ್ಯ ಸಹಭಾಗಿತ್ವವನ್ನು ಮುನ್ನಡೆಸುವಲ್ಲಿ ಕರ್ನಾಟಕ ಮಹತ್ವದ ಪಾತ್ರವಹಿಸುತ್ತದೆ ಎಂದರು. ಇಲ್ಲಿ 650 ಕ್ಕೂ ಹೆಚ್ಚು ಅಮೇರಿಕನ್‌ ಕಂಪನಿಗಳಿವೆ, ಇವುಗಳಿಂದ ಅಮೇರಿಕ ಮತ್ತು ಭಾರತದಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗುತ್ತಿವೆ ಎಂದು ತಿಳಿಸಿದರು.

ಭಾರತ ಮತ್ತು ಅಮೆರಿಕದ ಆರ್ಥಿಕತೆ ಹಲವಾರು ರೀತಿಯಲ್ಲಿ ಬೆಸೆದುಕೊಂಡಿದೆ. ಅಮೆರಿಕ ಮತ್ತು ಕರ್ನಾಟಕದ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಉತ್ಸುಕರಾಗಿರುವುದಾಗಿ ತಿಳಿಸಿದ ಅವರು, ಆವಿಷ್ಕಾರ ಕ್ರಮಾಂಕದಲ್ಲಿ ಮತ್ತೊಮ್ಮೆ ಮೊದಲ ಸ್ಥಾನ ಪಡೆದಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದರು.

ಇದನ್ನೂ ಓದಿ :ಏರೋಸ್ಪೇಸ್ ವಲಯದಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಅರ್ಹ: ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.