ETV Bharat / state

ನೀಟ್ ಮಾದರಿಯಲ್ಲೇ ಸಿಇಟಿ... ಹಿಜಾಬ್ ನಿಷೇಧ - mobile phones ban in cet

ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ನಡೆಯುವ ಸಿಇಟಿ ಪರೀಕ್ಷೆಗೂ ಹಿಜಾಬ್‍ ಧರಿಸುವುದಕ್ಕೆ ನಿಷೇಧ ಹೇರಲಾಗಿದೆ.. ನೀಟ್ ಪರೀಕ್ಷೆ ಮಾದರಿಯಲ್ಲೇ ಸಿಇಟಿ ನಡೆಸಲಾಗುತ್ತಿದೆ.

neet-like-rules-for-cet-hijab-mobile-phones-banned
ನೀಟ್ ಮಾದರಿಯಲ್ಲೇ ಸಿಇಟಿ... ಹಿಜಾಬ್ ನಿಷೇಧ
author img

By

Published : Jun 3, 2022, 4:15 PM IST

ಬೆಂಗಳೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ನಡೆಯುವ ಸಿಇಟಿ ಪರೀಕ್ಷೆಗೂ ಹಿಜಾಬ್‍ ಧರಿಸುವುದಕ್ಕೆ ನಿಷೇಧ ಹೇರಲಾಗಿದೆ. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಹಿಜಾಬ್ ತೆಗೆದಿಡಬೇಕು. ಒಂದು ವೇಳೆ ಹಿಜಾಬ್ ಧರಿಸಿ ಬಂದರೆ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಮಾದರಿಯಲ್ಲೇ ಸಿಇಟಿ ಪರೀಕ್ಷೆ ನಡೆಸಲಾಗುವುದು. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಪ್ರಾಧಿಕಾರ ಖಡಕ್ ಎಚ್ಚರಿಕೆ ನೀಡಿದೆ. ಜೂನ್​ 16, 17 ಮತ್ತು 18ರಂದು ನಡೆಯಲಿರುವ ಸಿಇಟಿಗೆ ಸಮವಸ್ತ್ರ ಪಾಲನೆಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಪಿಎಸ್‍ಐ ಹಾಗೂ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ತೀರ್ಮಾನಿಸಲಾಗಿದೆ.

ನೀಟ್ ಪರೀಕ್ಷೆ ಮಾದರಿಯಲ್ಲೇ ಸಿಇಟಿ ಪರೀಕ್ಷೆ: ನೀಟ್ ಪರೀಕ್ಷೆ ಮಾದರಿಯಲ್ಲೇ ಸಿಇಟಿ ನಡೆಸಲಾಗುವುದು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾಂಗಲ್ಯ ಸರ, ಮೂಗುತಿ, ಓಲೆ, ಸರ, ಬಳೆ ಸೇರಿದಂತೆ ಯಾವುದೇ ರೀತಿಯ ಆಭರಣ ಧರಿಸಿ ಬರುವಂತಿಲ್ಲ. ವಾಚ್, ಕ್ಯಾಲ್ಕುಲೇಟರ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ. ಮಾತ್ರವಲ್ಲ ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಮೆಟಲ್ ಡಿಟೆಕ್ಟರ್​​ಗಳನ್ನು ಅಳವಡಿಕೆ ಮಾಡಲಾಗುತ್ತಿದೆ.

ಹದ್ದಿನ ಕಣ್ಣು: ಸಿಇಟಿಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿಡಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಅದೇ ರೀತಿ ಪರೀಕ್ಷೆ ನಡೆಯುವ ದಿನಗಳಲ್ಲಿ ಸುತ್ತಮುತ್ತಲ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ಆದೇಶ ಹೊರಡಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯ ವಿವರಿಸಿದ್ದಾರೆ.

ಪರೀಕ್ಷೆ ಬರೆಯಲಿರುವ 2.11 ಲಕ್ಷ ವಿದ್ಯಾರ್ಥಿಗಳು: ಒಟ್ಟು 2.11 ಲಕ್ಷ ವಿದ್ಯಾರ್ಥಿಗಳು ಸಿಇಟಿಗೆ ನೋಂದಣಿ ಮಾಡಿಸಿದ್ದಾರೆ. ಇದರಲ್ಲಿ 1.4 ಲಕ್ಷ ಪುರುಷರು ಹಾಗೂ 1.7 ಲಕ್ಷ ಮಹಿಳಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ರಮ್ಯ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜೂನ್‌ 16ರಿಂದ ಸಿಇಟಿ ಪರೀಕ್ಷೆ: ಪ್ರವೇಶ ಪತ್ರ ಡೌನ್‌ಲೋಡ್​​ಗೆ ಅವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.