ETV Bharat / state

ನೀಟ್: ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

author img

By

Published : Jan 30, 2022, 9:11 PM IST

NEET seat allotment in Karnataka: ನೀಟ್ ಪರೀಕ್ಷೆಯ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್​ಗಳ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಫೆಬ್ರವರಿ 4 ರಂದು ಪ್ರಕಟಿಸಲಾಗುವುದು.

neet
ನೀಟ್

ಬೆಂಗಳೂರು: 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್​ಗಳಿಗೆ ಪ್ರವೇಶಾತಿಗೆಂದು ನಡೆಸಿದ್ದ ನೀಟ್ ಪರೀಕ್ಷೆಯನುಸಾರ, ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದೆ. ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಫೆಬ್ರವರಿ 4 ರಂದು ಈ ಮೂರು ಕೋರ್ಸ್​ಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆಬ್ರವರಿ 1ರ ಬೆಳಗ್ಗೆ 10 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆಬ್ರವರಿ 1 ರಿಂದ 3ರ ಬೆಳಗ್ಗೆ 10 ಗಂಟೆಯವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿಂದು 28,264 ಮಂದಿಗೆ ಕೋವಿಡ್ ಸೋಂಕು: 68 ಸೋಂಕಿತರು ಬಲಿ

ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆಬ್ರವರಿ 4ರ ಮಧ್ಯಾಹ್ನ 2 ಗಂಟೆಯಿಂದ ಫೆಬ್ರವರಿ 7ರ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆಬ್ರವರಿ 5 ರಿಂದ 7ರ ಒಳಗೆ ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.