ETV Bharat / state

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ರಾಜ್ಯದ ಅಭ್ಯರ್ಥಿಗಳ ಉತ್ತಮ ಸಾಧನೆ - ಈಟಿವಿ ಭಾರತ್​ ಕನ್ನಡ

ನ್ಯಾಷನಲ್​​ ಟೆಸ್ಟಿಂಗ್​ ಏಜೆನ್ಸಿ(ಎನ್‌ಟಿಎ) ಬುಧವಾರ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್​​-ಯುಜಿ 2022)ಯ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕದ ಹೃಷಿಕೇಶ್​ ನಾಗಭೂಷಣ ಗಂಗುಲೆ 3ನೇ ಸ್ಥಾನ ಪಡೆದುಕೊಂಡಿದ್ದಾರೆ.

ರಾಜ್ಯದ ಅಭ್ಯರ್ಥಿಗಳ ಉತ್ತಮ ಸಾಧನೆ
ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ
author img

By

Published : Sep 9, 2022, 10:11 AM IST

ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಇತ್ತೀಚೆಗೆ ನಡೆಸಲಾಗಿದ್ದ ನೀಟ್ ಪರೀಕ್ಷೆಯಲ್ಲಿ ರಾಜ್ಯದ 72,262 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ. ಈ ಬಾರಿ ಒಟ್ಟಾರೆ 1,22,423 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ರಾಷ್ಟ್ರೀಯ ಮಟ್ಟದ ಮೊದಲ ಐದು ಸ್ಥಾನಗಳಲ್ಲಿ ಇಬ್ಬರು, ಅಗ್ರ 10 ಸ್ಥಾನಗಳಲ್ಲಿ ಮೂವರು ರಾಜ್ಯದ ವಿದ್ಯಾರ್ಥಿಗಳಿದ್ದಾರೆ.

ರಾಷ್ಟ್ರೀಯ ಮಟ್ಟದಲ್ಲಿ ಮೂರನೇ ರ್ಯಾಂಕ್ ಪಡೆದ ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್‌ನ ಹೃಷಿಕೇಶ್ ನಾಗಭೂಷಣ ಗಂಗುಲೆ ರಾಜ್ಯಕ್ಕೆ ಮೊದಲಿಗರು. ಇವರು ರಾಜ್ಯ ಸಿಇಟಿಯಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ, ಪಶು ವೈದ್ಯಕೀಯದಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದರು. ದಿಲ್ಲಿ ಏಮ್ಸ್​ ಸೇರಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿದ್ದು ವೈದ್ಯಕೀಯ ಕ್ಷೇತ್ರದಲ್ಲಿ ಇನ್ನಷ್ಟು ಮುಂದುವರಿಯಲು ನಿರ್ಧರಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಉಚಗಾವಿಯ ರುಚಾ ಪವಾಶೆ ರಾಷ್ಟ್ರಮಟ್ಟದಲ್ಲಿ 4ನೇ ರ್ಯಾಂಕ್ ಪಡೆದಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಇವರು ಸೇಂಟ್ ಝೇವಿಯರ್ಸ್ ಪ್ರೌಢಶಾಲೆ ಹಾಗೂ ರಾಜಾ ಲಖಮಗೌಡ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ.

ಇದನ್ನೂ ಓದಿ : NEET UG 2022 ಫಲಿತಾಂಶ ಪ್ರಕಟ: ಕರ್ನಾಟಕದ ಹೃಷಿಕೇಶ್​​​ಗೆ 3ನೇ ಸ್ಥಾನ

ಬೆಂಗಳೂರಿನ ಶ್ರೀಚೈತನ್ಯ ಟೆಕ್ನ ಸ್ಕೂಲ್‌ನ ಆರ್.ಕೃಷ್ಣ ರಾಜ್ಯದ 3ನೇ ಟಾಪರ್. ಅಖಿಲ ಭಾರತ ಮಟ್ಟದಲ್ಲಿ 8ನೇ ರ್ಯಾಂಕ್ ಗಳಿಸಿದ್ದಾರೆ. ಇವರು ಸಿಇಟಿಯ ನ್ಯಾಚುರೋಪತಿ ಮತ್ತು ಯೋಗದಲ್ಲಿ 3ನೇ ರ್ಯಾಂಕ್ ಪಡೆದಿದ್ದರು. ಉಡುಪಿಯ ಮಣಿಪಾಲದ ಮಾಧವ ಕೃಪಾ ಇಂಗ್ಲಿಷ್ ಶಾಲೆಯ ವ್ರಜೇಶ್ ವೀಣಾಧರ್ ಶೆಟ್ಟಿ ಅವರು ಅಖಿಲ ಭಾರತ ಮಟ್ಟದಲ್ಲಿ 13ನೇ ರ್ಯಾಂಕ್ ಗಳಿಸಿದ್ದಾರೆ. ಸಿಇಟಿ ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಎರಡನೇ ಸ್ಥಾನ ಪಡೆದಿದ್ದರು. ಶುಭಾ ಕೌಶಿಕ್ ಅವರು ಅಖಿಲ ಭಾರತ ಮಟ್ಟದ 17ನೇ ರ್ಯಾಂಕ್ ಪಡೆದಿದ್ದಾರೆ. ಬೆಂಗಳೂರಿನ ಶ್ರೀಚೈತನ್ಯ ಟೆಕ್ನ ಶಾಲೆಯ ವಿದ್ಯಾರ್ಥಿನಿ. ಸಿಇಟಿ ಪಶುವೈದ್ಯಕೀಯ ವಿಭಾಗದಲ್ಲಿ ಇವರು 3ನೇ ಸ್ಥಾನ ಪಡೆದಿದ್ದರು.

ಇದನ್ನೂ ಓದಿ : ನೀಟ್ ಪರೀಕ್ಷೆ: ದೇಶಕ್ಕೆ ನಾಲ್ಕನೇ ರ‍್ಯಾಂಕ್​​​ ಪಡೆದ ಬೆಳಗಾವಿಯ ರುಚಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.