ಬೆಂಗಳೂರು: ಯಲಹಂಕದ ಸರ್ಕಾರಿ ಆಸ್ಪತ್ರೆಯಲ್ಲಿ ಪೊಲೀಸರಿಗೆ ಕೊರೊನಾ ಟೆಸ್ಟ್ ಮಾಡಲು ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ.
ಈಶಾನ್ಯ ವಿಭಾಗದ ಪೊಲೀಸರು ಕೊರೊನಾ ಟೆಸ್ಟ್ ಮಾಡಿಸಲು ಇಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಇಂದು ಟೆಸ್ಟ್ ಮಾಡಲು ಸಾಧ್ಯವಿಲ್ಲವೆಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ಮಧ್ಯೆ ವಾಗ್ವಾದ ನಡೆದಿದೆ.
ಸೋಮವಾರ ಸಹ ತಪಾಸಣೆಗೆ ಬಂದಾಗ ಇಂದು ಆಗಮಿಸುವಂತೆ ತಿಳಿಸಿದ್ದರು. ಇದೀಗ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸದ್ಯ ಪೊಲೀಸರು ಈ ಕುರಿತಂತೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.