ನೆಲಮಂಗಲ: ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನೆಲಮಂಗಲ ಟೌನ್ ಸ್ಟೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ.
ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಎರಡು ದಿನಗಳ ಮಟ್ಟಿಗೆ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೊತೆಗೆ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಈಗಾಗಲೇ ಠಾಣೆಯನ್ನು ಬಂದ್ ಮಾಡಲಾಗಿದ್ದು, ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ಟೌನ್ ಸ್ಟೇಷನ್ ಪಿಎಸ್ಐ ಮಂಜುನಾಥ್ ತಿಳಿಸಿದ್ದಾರೆ.