ETV Bharat / state

NEP: ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು- ಸಿಎಂ ಸಿದ್ದರಾಮಯ್ಯ - CM Siddaramaiah on NEP

CM Siddaramaiah: ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸಿ ಸಂವಿಧಾನ ರೀತಿಯಲ್ಲಿ ಶಿಕ್ಷಣ ಕೊಡಲು ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Etv nep-will-be-cancelled-from-next-academic-year-sats-cm-siddaramaiah
ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು, ಸಂವಿಧಾನ ರೀತಿಯ ಶಿಕ್ಷಣ ಕೊಡಲು ಯತ್ನ: ಸಿಎಂ ಸಿದ್ದರಾಮಯ್ಯ
author img

By

Published : Aug 14, 2023, 5:01 PM IST

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್​ಇಪಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಸಭಾಂಗಣದ ಬಳಿ ಇಂದು ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು.

ಅಗತ್ಯವಾದ ಕೆಲವು ಸಿದ್ಧತೆಗಳನ್ನು ಮಾಡಿಕೊಂಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಾ ಕಡೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದು ಟೀಕಿಸಿದರು.

ಎನ್ಇಪಿ ಕರಡು ಪ್ರತಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​ಎಸ್ಎಸ್​) ಕಚೇರಿಯಲ್ಲಿ ತಯಾರಾಗಿದೆ. ಮುಂದಿನ ವರ್ಷದಿಂದ ಹೊಸ ಶಿಕ್ಷಣ ನೀತಿ ಬದಲಾವಣೆ ಮಾಡಿ, ಸಂವಿಧಾನ ರೀತಿಯಲ್ಲಿ ಶಿಕ್ಷಣ ಕೊಡಲು ಪ್ರಯತ್ನ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ : ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ, ಯಾವಾಗಲೂ ಹಿಟ್ ಅಂಡ್ ರನ್ ಕೇಸ್: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.