ETV Bharat / state

ಇಂಗ್ಲೆಂಡ್ ನಲ್ಲಿ ಕೊರೊನಾ ರೂಪಾಂತರ ವೈರಸ್: ನಿಯಂತ್ರಣ ಕ್ರಮಗಳ ವರದಿ ಕೇಳಿದ ಹೈಕೋರ್ಟ್ - bengaluru latest news

ಇಂಗ್ಲೆಂಡ್ ನಲ್ಲಿ ರೂಪಾಂತರ ಹೊಂದಿರುವ ಹೊಸ ಮಾದರಿಯ ಕೊರೊನಾ ವೈರಸ್ ಪತ್ತೆಯಾಗಿದೆ. ಬ್ರಿಟನ್ ನಿಂದ ಈಗಾಗಲೇ ಸಾಕಷ್ಟು ಜನರು ರಾಜ್ಯಕ್ಕೆ ಆಗಮಿಸಿದ್ದಾರೆ. ಹಾಗೆಯೇ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ನಡೆಸಿಲ್ಲ ಎಂಬ ಮಾತುಗಳು ಕೇಳಿಬಂದಿವೆ.

High Court heard control measures
ನಿಯಂತ್ರಣ ಕ್ರಮಗಳ ವರದಿ ಕೇಳಿದ ಹೈಕೋರ್ಟ್
author img

By

Published : Dec 22, 2020, 10:45 PM IST

ಬೆಂಗಳೂರು: ಇಂಗ್ಲೆಂಡ್​​​​ನಲ್ಲಿ ರೂಪಾಂತರ ಹೊಂದಿರುವ ಕೊರೊನಾ ವೈರಸ್ ಪತ್ತೆಯಾಗಿರುವ ಹಿನ್ನೆಲೆ, ಅದನ್ನು ರಾಜ್ಯದಲ್ಲಿ ನಿಯಂತ್ರಿಸಲು ಹಾಗೂ ಹರಡುವಿಕೆ ತಡೆಯಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಕುರಿತು ಜನವರಿ 5ರ ಒಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್ ಪೀಠಕ್ಕೆ ಮಾಹಿತಿ ನೀಡಿ, ಇಂಗ್ಲೆಂಡ್ ನಲ್ಲಿ ರೂಪಾಂತರ ಹೊಂದಿರುವ ಹೊಸ ಮಾದರಿಯ ಕೊರೊನಾ ವೈರಸ್ ಪತ್ತೆಯಾಗಿದೆ. ಬ್ರಿಟನ್ ನಿಂದ ಈಗಾಗಲೇ ಸಾಕಷ್ಟು ಜನರು ರಾಜ್ಯಕ್ಕೆ ಆಗಮಿಸಿದ್ದಾರೆ.

ಓದಿ: ವಿಚ್ಛೇದನ ಪಡೆದುಕೊಳ್ಳಲು ಬಂದ ದಂಪತಿ ಪರಸ್ಪರ ಹಾರ ಬದಲಿಸಿಕೊಂಡ್ರು!

ಹಾಗೆಯೇ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ನಡೆಸಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ಹೀಗಾಗಿ, ವೈರಸ್ ರಾಜ್ಯಕ್ಕೆ ಆಗಮಿಸಿರುವ ಸಾಧ್ಯತೆ ಇದೆ. ಆದ್ದರಿಂದ ರಾಜ್ಯದಲ್ಲಿ ವೈರಸ್ ಹರಡದಂತೆ ತಡೆಯಲು ಸರಕಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ರೂಪಾಂತರಗೊಂಡಿರುವ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರಿ ವಕೀಲರನ್ನು ಪ್ರಶ್ನಿಸಿತು. ವಕೀಲರು ಉತ್ತರಿಸಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ಡಿಸೆಂಬರ್ 7 ರಿಂದ ಇಂಗ್ಲೆಂಡ್ ನಿಂದ ರಾಜ್ಯಕ್ಕೆ ಬಂದಿರುವ ಪ್ರಯಾಣಿಕರ ಮಾಹಿತಿ ನೀಡುವಂತೆ ರಾಜ್ಯದ ವಿಮಾನ ನಿಲ್ದಾಣಗಳಿಗೆ ಸೂಚಿಸಲಾಗಿದೆ. ಪ್ರಯಾಣಿಕರ ವಿವರ ಧ್ವಜ ಕೂಡಲೇ ಅವರನ್ನು ಸಂಪರ್ಕಿಸಿ ಆರೋಗ್ಯ ತಪಾಸಣೆಗೆ ನಡೆಸಲಾಗುವುದು ಹಾಗೆಯೇ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಮುಂದಿನ ವಿಚಾರಣೆ ವೇಳೆ ಎಷ್ಟು ಜನ ಇಂಗ್ಲೆಂಡ್ನಿಂದ ರಾಜ್ಯಕ್ಕೆ ಬಂದಿದ್ದಾರೆ, ಪ್ರಯಾಣಿಕರ ವಿವರಗಳೇನು, ಎಷ್ಟು ಜನರಿಗೆ ತಪಾಸಣೆ ನಡೆಸಲಾಗಿದೆ. ಎಷ್ಟು ಜನಕ್ಕೆ ಸೋಂಕು ತಗುಲಿದೆ, ಚಿಕಿತ್ಸೆಗೆ ಯಾವೆಲ್ಲಾ ಕ್ರಮಕೈಗೊಳ್ಳಲಾಗಿದೆ, ಹಾಗೆಯೇ ರಾಜ್ಯದಲ್ಲಿ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳೇನು ಎಂಬುದಕ್ಕೆ ಸಂಬಂಧಿಸಿದ ಸಮಗ್ರ ವಿವರಗಳನ್ನು ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಜನವರಿ 5 ಕ್ಕೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.