ETV Bharat / state

ಅ.1 ರಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ: Conditions Apply! - New guidance for theaters

ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ.0.66 ಇದೆ. ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗುವುದು. ಇದು ಶೇ.1 ಕ್ಕಿಂತ ಹೆಚ್ಚಾದರೆ ಶೇ. 50 ರಷ್ಟು ಹಾಗೂ ಶೇ.2 ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡುವ ಕುರಿತು ತೀರ್ಮಾನಿಸಲಾಗಿದೆ.

New guidance for theaters from october 1
ಅ.1 ರಿಂದ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ
author img

By

Published : Sep 24, 2021, 7:55 PM IST

Updated : Sep 24, 2021, 8:56 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಉನ್ನತ ಮಟ್ಟದ ತಜ್ಞರ ಸಮಿತಿ ಸಭೆ ನಡೆಯಿತು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಉನ್ನತ ಮಟ್ಟದ ತಜ್ಞರ ಸಮಿತಿ ಸಭೆ

ಸಭೆಯಲ್ಲಿ ಅತ್ಯಂತ ಪ್ರಮುಖವಾಗಿ ಕೋವಿಡ್​ ನಿಯಂತ್ರಣ ರಾಜ್ಯದಲ್ಲಿ ಯಾವ ರೀತಿ ಇದೆ ಎನ್ನುವ ಬಗ್ಗೆ ಮಾಹಿತಿ ಕುರಿತು ಚರ್ಚೆ ನಡೆಯಿತು. ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ.0.66 ಇದೆ. ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗುವುದು. ಈ ಶೇ.1 ಕ್ಕಿಂತ ಹೆಚ್ಚಾದರೆ ಶೇ. 50 ರಷ್ಟು ಹಾಗೂ ಶೇ.2 ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡುವ ಕುರಿತು ತೀರ್ಮಾನಿಸಲಾಗಿದೆ.

ಪಬ್​ಗಳಿಗೂ ಇದೇ ಮಾನದಂಡ ಅನುಸರಿಸಲಾಗುವುದು. ಕನಿಷ್ಟ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ. ಗರ್ಭಿಣಿಯರು ಮತ್ತು ಮಕ್ಕಳಿಗೆ ಪಬ್​ಗಳಿಗೆ ಪ್ರವೇಶಕ್ಕೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. ನೈಟ್​ ಕರ್ಫ್ಯೂವನ್ನ ರಾತ್ರಿ 10 ರಿಂದ ಬೆಳಿಗ್ಗೆ 5 ರ ವರೆಗೆ ನಿಗದಿ ಪಡಿಸಲಾಗುವುದು. 6 ರಿಂದ 12 ನೇ ತರಗತಿ ವರೆಗೆ ಶೇ.100 ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಯಿತು. ವಾರದಲ್ಲಿ ಐದು ದಿನ ಶಾಲಾ-ಕಾಲೇಜು ನಡೆಸಲು ನಿರ್ಧರಿಸಲಾಯಿತು.

ದಸರಾ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಗಡಿ ಭಾಗದಲ್ಲಿ ಹೆಚ್ಚಿನ ನಿಗಾವಹಿಸಲು ತೀರ್ಮಾನಿಸಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಮತ್ತು ಮೈಸೂರು ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು, ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು.

ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್ ತಜ್ಞರ ಸಮಿತಿಯ ಸಭೆ ನಡೆದಿದೆ. ಇದರಲ್ಲಿ ಕೆಲ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ನಾಲ್ಕೈದು ಜಿಲ್ಲೆಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಇದರಿಂದಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದರು.

ಅ.3 ರಿಂದ ಇದೆ ಮಾನದಂಡದ ಮೇಲೆ ಪಬ್​ಗಳಿಗೂ ಪ್ರವೇಶ ಅವಕಾಶ ಕಲ್ಪಿಸಲಾಗುತ್ತಿದೆ. ನಾಲ್ಕು ಜಿಲ್ಲೆಗಳಲ್ಲಿ ಜನಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ. ಸಚಿವರಾದ ಆರ್.ಅಶೋಕ್ ಹಾಗೂ ಸುಧಾಕರ್ ಈ ಕಾರ್ಯದಲ್ಲಿ ತೊಡಗಲಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳ ಹಾಗೂ ಎನ್​ಜಿಒ ಜೊತೆ ಧಾರ್ಮಿಕ ಸಂಸ್ಥೆಗಳನ್ನು ನಾವು ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ದೇವಾಲಯದಲ್ಲಿ ಪೂಜೆ-ಪುನಸ್ಕಾರಗಳಿಗೆ ಅವಕಾಶ ಕಲ್ಪಿಸುವ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ಈ ಸಂಬಂಧ ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ಧಾರ ಕೈಗೊಳ್ಳುವ ಅವಕಾಶ ಕಲ್ಪಿಸಿದ್ದೇವೆ ಎಂದರು.

ಇದನ್ನೂ ಓದಿ: ತುಮಕೂರಿನ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಸಿಎಂ

Last Updated : Sep 24, 2021, 8:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.