ಬೆಂಗಳೂರು: ಶೀಘ್ರದಲ್ಲಿಯೇ ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮಧ್ಯಮ ಹಾಗೂ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಈ ಕುರಿತಾಗಿ 'ಈಟಿವಿ ಭಾರತ'ದ ಜೊತೆ ಮಾತನಾಡಿದ ಅವರು, ಕಾಯ್ದೆಯು ಸಂಪುಟದಲ್ಲಿ ಸಮ್ಮತಿ ಸಿಕ್ಕ ಬಳಿಕ ಜಾರಿಗೆ ಬರಲಿದೆ ಎಂದು ತಿಳಿಸಿದರು. 2 ಹಾಗೂ 3 ನೇ ದರ್ಜೆಯ ನಗರಕ್ಕೆ ಕೈಗಾರಿಕೆಗಳನ್ನು ಆಕರ್ಷಿಸುವ ಹಿನ್ನಲೆಯಲ್ಲಿ ಈ ನೀತಿ ಸಮಾಜಕ್ಕೆ ನೀಡಲಿದ್ದೇವೆ ಎಂದು ಹೇಳಿದರು.
ಇನ್ನು ಟೌನ್ಶಿಪ್ಗಳ ಬೇಡಿಕೆ ಹೆಚ್ಚಾಗಿದ್ದು, ನಗರಾಭಿವೃದ್ಧಿ ಸಚಿವರೊಂದಿಗೆ ಹಾಗೂ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಶೀಘ್ರದಲ್ಲಿ ನಗರಾಭಿವೃದ್ಧಿ ಇಲಾಖೆಯ ಒಪ್ಪಿಗೆ ಪಡೆದು, ಕೈಗಾರಿಕಾ ಟೌನ್ಶಿಪ್ ಪ್ರಾರಂಭ ಮಾಡಲಾಗುವುದು ಎಂದರು.