ಬೆಂಗಳೂರು: ಹೈಕೋರ್ಟ್‌ಗೆ ನೂತನವಾಗಿ ನೇಮಕಗೊಂಡಿರುವ ಹೆಚ್ಚುವರಿ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.
ಹೈಕೋರ್ಟಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ನೂತನ ನ್ಯಾಯಮೂರ್ತಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಸ್ತುತ ರಾಜ್ಯದಲ್ಲಿ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ, ಎಸ್.ಎನ್. ಸತ್ಯನಾರಾಯಣ, ಅರವಿಂದ ಕುಮಾರ್ ಮತ್ತು ಅಲೋಕ್ ಆರಾಧೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾದರು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಕೊಲಿಜಿಯಂ ಮಾಡಿದ ಶಿಫಾರಸು ಆಧರಿಸಿ, ರಾಷ್ಟ್ರಪತಿಗಳ ಆದೇಶಾನುಸಾರ ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಎಸ್. ವಿಶ್ವಜಿತ್ ಶೆಟ್ಟಿ ಅವರನ್ನು ನೇಮಕ ಮಾಡಿ ಏ. 23ರಂದು ಕೇಂದ್ರ ಸರ್ಕಾರ ಆದೇಶಿಸಿತ್ತು.