ETV Bharat / state

ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್​ನಿಂದ ತಯಾರಿ : ಗ್ರಾ.ಪಂ. ಚುನಾವಣೆಯಲ್ಲಿ ವರ್ಕೌಟ್​ ಆಗುತ್ತಾ ಹೊಸ ಪ್ಲಾನ್? - ಗ್ರಾ.ಪಂ. ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್​ನಿಂದ ಭರ್ಜರಿ ತಯಾರಿ

ಸತತ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹೊಸ ಪ್ಲಾನ್​ ರೂಪಿಸಿದೆ. ತಾಲೂಕು, ಹೋಬಳಿ ಮಟ್ಟಗಳಲ್ಲಿ ಸಭೆಗಳನ್ನು ನಡೆಸಿ ಸ್ತ್ರೀ ಶಕ್ತಿ ಸಂಘ, ವಿವಿಧ ಸಂಘಟನೆಗಳು, ವಿವಿಧ ಸಮುದಾಯದ ಮುಖಂಡರುಗಳನ್ನು ತಮ್ಮತ್ತ ಸೆಳೆದು ತಮ್ಮ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ತಂತ್ರಗಳನ್ನು ಪಕ್ಷದ ನಾಯಕರು ರೂಪಿಸುತ್ತಿದ್ದಾರೆ.

New plan from JDS
ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್​ನಿಂದ ತಯಾರಿ
author img

By

Published : Dec 16, 2020, 8:25 AM IST

ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಗ್ರಾಮೀಣ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಜೆಡಿಎಸ್ ನಿಂದ ಭರ್ಜರಿ ತಯಾರಿ ನಡೆದಿದೆ.

ಹೌದು, ಸತತ ಸೋಲಿನಿಂದ ಕಂಗೆಟ್ಟಿರುವ ಜೆಡಿಎಸ್ ಹೊಸ ಹುರುಪಿನೊಂದಿಗೆ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕಿಳಿದು, ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸಿ ತಮ್ಮ ಅಸ್ತಿತ್ವವನ್ನು ತೋರಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿದೆ.

ವಿಧಾನಸಭೆ, ಲೋಕಸಭೆ ಚುನಾವಣೆಗೆ ಭದ್ರ ಬುನಾದಿಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚು ಗೆಲ್ಲಿಸಿಕೊಳ್ಳಲು ಕಾರ್ಯತಂತ್ರ ಹೆಣೆದಿದೆ. ತನ್ನ ಹಳೆಯ ಶೈಲಿಯ ಎಲ್ಲ ಕಾರ್ಯ ಚಟುವಟಿಕೆಗಳನ್ನು ಬಿಟ್ಟು ಹೊಸ ತಂತ್ರ ಅಳವಡಿಸಿಕೊಂಡು ನಿರ್ವಹಣಾ ಚಾತುರ್ಯ ಪ್ರದರ್ಶಿಸಲು ಮುಂದಾಗಿದೆ. ಯುವಕರನ್ನೇ ದೃಷ್ಟಿಯಲ್ಲಿಟ್ಟುಕೊಂಡು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಪಕ್ಷಕ್ಕೆ ಚೈತನ್ಯ ತುಂಬುವುದರ ಜೊತೆಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಹೆಚ್ಚು ಸ್ಥಾನ ಗೆಲ್ಲಬೇಕೆಂಬುದು ಜೆಡಿಎಸ್ ನ ಲೆಕ್ಕಾಚಾರ. ಇದಕ್ಕಾಗಿ ಈಗಾಗಲೇ ತಾಲೀಮು ಆರಂಭಿಸಲಾಗಿದೆ. ಜೆಡಿಎಸ್‌ನ ಯುವ ನಾಯಕರೆಂದೇ ಬಿಂಬಿತವಾಗಿರುವ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮುಂದಿಟ್ಟುಕೊಂಡು ಚುನಾವಣಾ ಕಾರ್ಯನೀತಿ ರೂಪಿಸಲಾಗುತ್ತಿದೆ ಎನ್ನಲಾಗ್ತಿದೆ.

ಪಕ್ಷ ರಹಿತ ಚುನಾವಣೆ ವ್ಯವಸ್ಥೆಯಾದರೂ ಕೂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳದ್ದೇ ದರ್ಬಾರು ಹೆಚ್ಚಾಗಿ ನಡೆಯುವುದರಿಂದ, ಯಾವುದೇ ಲೋಕಸಭೆ, ವಿಧಾನಸಭೆ ಚುನಾವಣೆಗೆ ಕಡಿಮೆ ಇಲ್ಲದಂತೆ ಗ್ರಾಮಪಂಚಾಯಿತಿ ಚುನಾವಣೆಗಳು ನಡೆಯುತ್ತವೆ. ಹೀಗಾಗಿ ಪ್ರತಿ ಹಳ್ಳಿಗಳ ಗಲ್ಲಿ ಗಲ್ಲಿಗಳಲ್ಲಿ ಚುನಾವಣೆಯದ್ದೇ ಸದ್ದು. ಡಿಸೆಂಬರ್ 22 ಮತ್ತು 27ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಈಗಾಗಲೇ ಚುನಾವಣಾ ಆಯೋಗ ಘೋಷಿಸಿದೆ. ಗ್ರಾಮ ಪಂಚಾಯಿತಿ ಚುನಾವಣಾ ಆಕಾಂಕ್ಷಿಗಳು ಕಣಕ್ಕಿಳಿಯಲು ತಮ್ಮ ಸ್ಥಳೀಯ ನಾಯಕರ ಬಳಿ ಎಡತಾಕುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಗಿದಿದೆ. ಎರಡನೇ ಹಂತದ ಚುನಾವಣೆಗೂ ಜೆಡಿಎಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಓದಿ :ಗ್ರಾ.ಪಂ.ಚುನಾವಣೆ; ಬೆಂಬಲಿತ ಅಭ್ಯರ್ಥಿಗಳ ಪರ ಬಹಿರಂಗವಾಗಿ ಕಾಣಿಸಿಕೊಳ್ಳದ ಪಕ್ಷಗಳು

ಜೆಡಿಎಸ್ ಮುಖಂಡರು ತಾಲೂಕು, ಹೋಬಳಿ ಮಟ್ಟಗಳಲ್ಲಿ ಸಭೆಗಳನ್ನು ನಡೆಸಿ ಸ್ತ್ರೀ ಶಕ್ತಿ ಸಂಘ, ವಿವಿಧ ಸಂಘಟನೆಗಳು, ವಿವಿಧ ಸಮುದಾಯದ ಮುಖಂಡರುಗಳನ್ನು ತಮ್ಮತ್ತ ಸೆಳೆದು ತಮ್ಮ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಒಟ್ಟಾರೆ, ಕಳೆದ ಐದೂವರೆ ವರ್ಷದಿಂದ ಗದ್ದಲವಿಲ್ಲದೆ ಸುಮ್ಮನಿದ್ದ ಹಳ್ಳಿಗಳಲ್ಲಿ ಚುನಾವಣಾ ಹಣಾಹಣಿ ರಂಗೇರಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.