ETV Bharat / state

ಕೃಷಿ ಚಟುವಟಿಕೆಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ವಿಭಿನ್ನ ಯೋಜನೆಗಳು

ಕರ್ನಾಟಕದಲ್ಲಿ ಕೃಷಿ ಚಟುವಟಿಕೆಯನ್ನು ಉತ್ತೇಜಿಸಲು ಮತ್ತು ರೈತರನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಆಧುನಿಕ ಕ್ರಮಗಳನ್ನು ಕೈಗೊಂಡಿದೆ.

author img

By

Published : Jan 17, 2021, 2:37 PM IST

Karnataka
ಕೃಷಿ ಚಟುವಟಿಕೆ

ಬೆಂಗಳೂರು: ಕೃಷಿ ಚಟುವಟಿಕೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಹಲವು ರೀತಿಯ ಆಧುನಿಕ ಕ್ರಮಗಳನ್ನು ಕೈಗೊಂಡಿದೆ.

ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣೆ ಕಾರ್ಯಕ್ರಮದಡಿ ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಹಾಗೂ ಕೃಷಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಒದಗಿಸಲಾಗುವುದು.

ಸಣ್ಣ ಟ್ರ್ಯಾಕ್ಟರ್ ಖರೀದಿಗೆ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ 3 ಲಕ್ಷ ರೂ. ಸಹಾಯಧನ ಹಾಗೂ ಕೃಷಿ ಸಂಸ್ಕರಣೆ ಘಟಕಗಳು ಮತ್ತು ಟಾರ್ಪಾಲಿನ್​ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ 50 ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ 90 ರ ಸಹಾಯಧನವನ್ನು ನೀಡಲಾಗುತ್ತಿದೆ.

ರಾಜ್ಯದಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ, ಕಡಿಮೆ ಬಾಡಿಗೆ ದರದಲ್ಲಿ ಭೂಮಿ ಸಿದ್ಧತೆಯಿಂದ ಕೊಯ್ಲು ಮತ್ತು ಸಂಸ್ಕರಣೆಗೆ ಉಪಯುಕ್ತವಾಗುವ ವಿವಿಧ ಕೃಷಿ ಯಂತ್ರೋಪಕರಣಗಳನ್ನು ಕಲ್ಪಿಸಲು ಹೋಬಳಿ ಕೇಂದ್ರಗಳಲ್ಲಿ ಆಯ್ದ ಸಂಸ್ಥೆಗಳ ಸಹಯೋಗದೊಂದಿಗೆ ಕೃಷಿ ಯಂತ್ರಧಾರೆ (ಕೃಷಿ ಯಂತ್ರೋಪಕರಣ ಬಾಡಿಗೆ ಆಧಾರಿತ ಸೇವಾ) ಕೇಂದ್ರಗಳನ್ನು ತೆರೆಯಲಾಗಿದೆ.

ನೀರಾವರಿ ಯೋಜನೆ: ರಾಜ್ಯದಲ್ಲಿ ಲಭ್ಯವಿರುವ ನೀರಿನ ಸಮರ್ಪಕ ಬಳಕೆಗೆ ಪ್ರೋತ್ಸಾಹಿಸಲು ಹಾಗೂ ಮಿತ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಸೂಕ್ಷ್ಮ (ಹನಿ/ತುಂತುರು) ನೀರಾವರಿ ಪದ್ಧತಿಯ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಶೇ 90 ರಷ್ಟು ಹಾಗೂ 2 ಹೆಕ್ಟೇರಿಗಿಂತ ಮೇಲ್ಪಟ್ಟು 5 ಹೆಕ್ಟೇರ್ ಪ್ರದೇಶದವರೆಗೆ ಶೇ 45ರ ಸಹಾಯಧನ ನೀಡಲಾಗುತ್ತಿದೆ.

ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ ಯೋಜನೆಯಡಿ ಮಣ್ಣು ಆರೋಗ್ಯ ನಿರ್ವಹಣೆ ಯೋಜನೆಯಡಿ ಗ್ರಾಮ ಮಟ್ಟದಲ್ಲಿ ಮಣ್ಣು ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸಲು (Village level soil testing Lab) ಆರ್ಥಿಕ ಸಹಾಯ ನೀಡಲಾಗುತ್ತದೆ. ಪ್ರಯೋಗಾಲಯದ ಒಟ್ಟು ವೆಚ್ಚ 5 ಲಕ್ಷ ರೂ. ಗಳಾಗಿದ್ದು, ಫಲಾನುಭವಿಗಳಿಗೆ ಯೋಜನಾ ವೆಚ್ಚದ ಶೇ 75 ರಷ್ಟು ಅರ್ಥಿಕ ಸಹಾಯವನ್ನು ಸಹಾಯಧನವಾಗಿ ನೀಡಲಾಗುತ್ತದೆ.

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಭತ್ತ, ದ್ವಿದಳ ಧಾನ್ಯ, ನ್ಯೂಟ್ರಿ ಸೀರಿಯಲ್ಸ್, ಎಣ್ಣೆಕಾಳುಗಳಲ್ಲಿ ವಿವಿಧ ತಾಂತ್ರಿಕತೆಗಳ ಬಗ್ಗೆ ದೊಡ್ಡ ಪ್ರಮಾಣದ ಪ್ರಾತ್ಯಕ್ಷಿಕೆಗಳನ್ನು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅಲ್ಲದೆ, ವಿವಿಧ ಪರಿಕರಗಳು ಮತ್ತು ಉಪಕರಣಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಸಹಾಯಧನ ನೀಡಲಾಗುತ್ತಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರಿಗೆ ವಾರ್ಷಿಕ 6000 ರೂ. ಗಳ ನಗದನ್ನು 2000 ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತಿದೆ. ಇನ್ನು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಎಲ್ಲಾ ಅರ್ಹ ರೈತರಿಗೆ 2019 ಆಗಸ್ಟ್​ನಿಂದಲೇ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 4000 ರೂ.ಗಳನ್ನು ಎರಡು ಕಂತುಗಳಲ್ಲಿ ಆರ್ಥಿಕ ನೆರವು ನೀಡಲಾಗುತ್ತಿದೆ.

ರೈತ ಸಿರಿ: ರೈತ ಸಿರಿ ಕಾರ್ಯಕ್ರಮದಡಿ ರಾಜ್ಯದಲ್ಲಿ ಸಿರಿಧಾನ್ಯಗಳ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಸಿರಿಧಾನ್ಯಗಳಾದ ನವಣೆ, ಹಾರಕ, ಕೊರಲೆ, ಸಾಮೆ, ಊದಲು ಬೆಳೆಗಳನ್ನು ಬೆಳೆದ ಎಲ್ಲಾ ವರ್ಗದ ರೈತರಿಗೆ ಪ್ರತಿ ಹೆಕ್ಟೇರಿಗೆ 10000 ರೂ. ನಂತೆ ಗರಿಷ್ಠ ಎರಡು ಹೆಕ್ಟೇರುಗಳಿಗೆ ಪ್ರೋತ್ಸಾಹಧನವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

ಸಾವಯವ ಕೃಷಿ: ಸಾವಯವ ಕೃಷಿ ಪದ್ಧತಿಗೆ ಅಳವಡಿಸಿರುವ ಪ್ರದೇಶವನ್ನು ಸಾವಯವ ಗುಂಪು ಪ್ರಮಾಣೀಕರಣಕ್ಕೆ ಒಳಪಡಿಸಲು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಮೂಲಕ ಪ್ರಮಾಣೀಕರಣ ಪ್ರದೇಶಕ್ಕನುಗುಣವಾಗಿ ಸಹಾಯಧನ ನೀಡಲಾಗುವುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.