ETV Bharat / state

ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಎಸ್.ಮಧು ಬಂಗಾರಪ್ಪ - ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ

''ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೇ ಹೊಣೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸೂಚಿಸಲಾಗಿದೆ'' ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

S Madhu Bangarappa
ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಎಸ್. ಮಧು ಬಂಗಾರಪ್ಪ
author img

By

Published : Aug 11, 2023, 9:53 PM IST

ಬೆಂಗಳೂರು: ''ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯ ನೀಡಬೇಕಿದೆ. ಸಮಯಾವಕಾಶ ನೀಡಿ, ಬಳಿಕ ಹಂತಹಂತವಾಗಿ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯ. ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು'' ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''ರಾಜ್ಯಾದ್ಯಂತ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ. ಅನುಮತಿ ಪಡೆಯದೇ ಉನ್ನತೀಕರಿಸಿರುವ ಶಾಲೆಗಳು 76, ಇತರೆ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು 495 ಇವೆ'' ಎಂದು ಸಚಿವರು ಮಾಹಿತಿ ನೀಡಿದರು.

ಶಾಲಾ ವಿದ್ಯುತ್, ನೀರಿನ ಬಿಲ್ ಮನ್ನಾ ಚಿಂತನೆ: ''ಸರ್ಕಾರಿ ಶಾಲೆಗಳ ನೀರು ಮತ್ತು ವಿದ್ಯುತ್ ಬಿಲ್ ಮೊತ್ತವನ್ನು ಮನ್ನಾ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ಅತಿ ಕಡಿಮೆ ಮೊತ್ತದ ಬಿಲ್ ಗಳಿರುವುದರಿಂದ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದು'' ಎಂದರು.

''ಆ.18ರಂದು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ 2 ದಿನ ನೀಡುತ್ತಿರುವ ಮೊಟ್ಟೆ ವಿತರಣೆ ಯೋಜನೆಯನ್ನು ಶಾಲೆಯೊಂದರಲ್ಲಿ ಮೊಟ್ಟೆ/ ಬಾಳೇಹಣ್ಣು/ ಶೇಂಗಾ ಚಿಕ್ಕಿ ವಿತರಿಸುವ ಮೂಲಕ ಚಾಲನೆ ನೀಡಲಾಗುವುದು" ಎಂದು ಮಾಹಿತಿ ನೀಡಿದರು. "ಬಜೆಟ್​ನಲ್ಲಿ ಘೋಷಿಸಿದ್ದಂತೆ ಶಾಲಾ ಆವರಣ ಮತ್ತು ಸುತ್ತಲಿನ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ 50 ಲಕ್ಷ ಗಿಡಗಳನ್ನು ನೆಡುವ ‘ಸಸ್ಯ ಶ್ಯಾಮಲಾ’ ಯೋಜನೆ ಅನುಷ್ಠಾನಕ್ಕೆ ಚರ್ಚಿಸಲಾಗುತ್ತಿದೆ'' ಎಂದು ಸಚಿವರು ಮಾಹಿತಿ ನೀಡಿದರು.

''ಖಾಸಗಿ ಶಾಲೆಗಳು ಪ್ರತಿವರ್ಷ ಆಗ್ನಿಶಾಮಕ ದಳದಿಂದ ಅನುಮತಿ ನವೀಕರಣ ಮಾಡಿಕೊಳ್ಳಬೇಕು ಎಂಬ ನಿಯಮವನ್ನು ಸಡಿಲಿಸಲು ಸಾಧ್ಯವಿಲ್ಲ. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಅದೇ ರೀತಿ ಶಾಲಾ ಮಕ್ಕಳನ್ನು ಮ್ಯಾನೇಜ್​ಮೆಂಟ್​ನ ಸೇವೆಗಳಿಗೆ ಬಳಸಿದರೆ, ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಗಿಡ ನೆಡುವುದು ಮುಂತಾದ ಕಲಿಕೆಯ ಉದ್ದೇಶದ ಕೆಲಸಗಳಿಗೆ ವಿನಾಯಿತಿಯಿದೆ'' ಎಂದು ಮಧು ಬಂಗಾರಪ್ಪ ತಿಳಿಸಿದರು.

ಇದನ್ನೂ ಓದಿ: ಲೋಕ ಕಲ್ಯಾಣಕ್ಕಾಗಿ ಯಾಗಗಳು ನಿರಂತರವಾಗಿ ನಡೆಯಲಿ: ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.