ETV Bharat / state

ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ನಿಷೇಧ: ಸಚಿವ ಆರ್.ಅಶೋಕ್

author img

By

Published : Dec 11, 2020, 3:46 PM IST

ಹೊಸ ವರ್ಷ ಆಚರಣೆಯನ್ನು ಎಂಜಿ ರೋಡ್, ಬ್ರಿಗೇಡ್ ರೋಡ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾಡುವ ಹಾಗಿಲ್ಲ. ಮನೆಯಲ್ಲಿ ಮಾತ್ರ ಹೊಸ ವರ್ಷ ಆಚರಣೆಗೆ ಅವಕಾಶ ಇದೆ. ಹೋಟೆಲ್​, ಪಬ್​ಗಳಲ್ಲಿ ಶೇ. 50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸಚಿವ ಆರ್. ಅಶೋಕ್
ಸಚಿವ ಆರ್. ಅಶೋಕ್

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಆಚರಣೆಗೆ ನಿಷೇಧ ಹೇರಲಾಗುತ್ತಿದೆ ಎಂದು ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹೊಸವರ್ಷಾಚರಣೆ ನಿಷೇಧ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೊಸ ವರ್ಷ ಆಚರಣೆಯನ್ನು ಎಂಜಿ ರೋಡ್, ಬ್ರಿಗೇಡ್ ರೋಡ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಾಡುವ ಹಾಗಿಲ್ಲ. ಮನೆಯಲ್ಲಿ ಮಾತ್ರ ಹೊಸ ವರ್ಷ ಆಚರಣೆಗೆ ಅವಕಾಶ ಇದೆ. ಹೋಟೆಲ್​, ಪಬ್​ಗಳಲ್ಲಿ ಶೇ. 50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅಲ್ಲದೆ ಪಾಸ್ ಪಡೆದುಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಕಳುಸಿಕೊಡಲಾಗಿದೆ. ಅವರು ಅನುಮೋದನೆ ಕೊಟ್ಟ ಬಳಿಕ ನಿಮಯ ಜಾರಿಗೊಳಿಸಲಾಗುವುದು ಎಂದರು.

ಇದನ್ನು ಓದಿ:ಸಭಾಪತಿ ವಿರುದ್ಧ ರಾಜಭವನದ ಕದತಟ್ಟಿದ ಬಿಜೆಪಿ; ಮಂಗಳವಾರ ಸದನ ಕರೆಯಲು ಮನವಿ

ಕೋವಿಡ್​ನಿಂದಾಗಿ ಈ ಬಾರಿ ಹಲವು ಜನರನ್ನು ನಾವು ಕಳೆದುಕೊಂಡಿದ್ದೇವೆ.‌ ಶಾಸಕರು, ಸಂಸದರು, ಕುಟುಂಬಸ್ಥರನ್ನು ಈ ಕಾರಣದಿಂದ ಕಳೆದುಕೊಂಡಿದ್ದೇವೆ. ಆದ್ದರಿಂದ ಈ ವರ್ಷ ಹೊಸ ವರ್ಷಾಚರಣೆ ಬೇಡ ಎಂದು ಮನವಿ ಮಾಡಿದರು. ಕೋವಿಡ್ ಎರಡನೇ ಅಲೆ ಹಿನ್ನೆಲೆ ಸಾರ್ವಜನಿಕರ ಸಹಕಾರ ಅಗತ್ಯವಿದ್ದು, ಪೊಲೀಸ್ ಇಲಾಖೆಗೆ ಈಗಾಗಲೇ ನಿರ್ದೇಶನ ನೀಡಿದ್ದೇವೆ. ಈ ನಿಯಮ ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.