ETV Bharat / state

ಹೊಸ ವರ್ಷಾಚರಣೆ; ಎಂಜಿ ರೋಡ್, ಬ್ರಿಗೇಡ್ ರೋಡ್​ಗೆ ಆಗಮಿಸುವವರಿಗೆ‌ ಪೊಲೀಸರ ಸೂಚನೆ - new year rules

ಹೊಸ ವರ್ಷಾಚರಣೆಗೆ ಬೆಂಗಳೂರು ಸಂಚಾರಿ ಪೊಲೀಸರು ಕೆಲ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ಬೆಂಗಳೂರು ಸಂಚಾರಿ ನಿಯಮಗಳು
ಹೊಸ ವರ್ಷಾಚರಣೆಗೆ ಬೆಂಗಳೂರು ಸಂಚಾರಿ ನಿಯಮಗಳು
author img

By ETV Bharat Karnataka Team

Published : Dec 30, 2023, 7:59 PM IST

Updated : Dec 30, 2023, 11:02 PM IST

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು

ಬೆಂಗಳೂರು: ಹೊಸ ವರ್ಷಾಚರಣೆಗೆ ಒಂದೇ ದಿನ ಬಾಕಿ ಇದ್ದು ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು, ವಾಹನ ಸವಾರರು ಮತ್ತು ಪಾದಚಾರಿಗಳು ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೈಂಟ್ ಮಾರ್ಕ್ಸ್ ರಸ್ತೆ, ಮತ್ತು ಚರ್ಚ್ ​ಸ್ಟ್ರೀಟ್​ನಲ್ಲಿ ಸೆಲೆಬ್ರೇಷನ್'ಗಾಗಿ ಜಮಾವಣೆಗೊಳ್ಳುವುದರಿಂದ ಬೆಂಗಳೂರು ಸಂಚಾರಿ ಪೊಲೀಸರು ಕೆಲ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ವಾಹನಗಳ ಪ್ರವೇಶಕ್ಕೆ ನಿರ್ಬಂಧವಿರುವ ಸ್ಥಳಗಳು

  • ಡಿಸೆಂಬರ್ 31ರ ಸಂಜೆ 4 ಗಂಟೆಯಿಂದ ಜನವರಿ 1ರ ಬೆಳಗ್ಗೆ 3ಗಂಟೆಯವರೆಗೂ ಎಂ ಜಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್ ವರೆಗೆ.
  • ಬ್ರಿಗೇಡ್ ರಸ್ತೆಯ, ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಒಪೇರಾ ಜಂಕ್ಷನ್‌ ವರೆಗೆ, ಚರ್ಚ್ ಸ್ಟ್ರೀಟ್‌ನ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ ವರೆಗೆ.
  • ಮ್ಯೂಸಿಯಂ ರಸ್ತೆಯ, ಎಂ ಜಿ ರಸ್ತೆ ಜಂಕ್ಷನ್ ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆಯ (ಎಸ್.ಬಿ.ಐ) ವೃತ್ತದವರೆಗೆ. ರೆಸ್ಟ್ ಹೌಸ್ ರಸ್ತೆಯಲ್ಲಿ, ಮ್ಯೂಸಿಯಂ ರಸ್ತೆ ಜಂಕ್ಷನ್‌ ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್‌ ವರೆಗೆ.
  • ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ, ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ ರಸ್ತೆ ಜಂಕ್ಷನ್‌ವರೆಗೆ (ಶಂಕರ್ ನಾಗ್ ಚಿತ್ರಮಂದಿರ) ದವರೆಗೆ ಪೊಲೀಸ್ ವಾಹನಗಳು ಹಾಗು ಕರ್ತವ್ಯ ನಿರತ ತುರ್ತುಸೇವಾ ವಾಹನಗಳನ್ನ ಹೊರತುಪಡಿಸಿ ಉಳಿದ ವಾಹನಗಳ ಪ್ರವೇಶಕ್ಕೆ ನಿರ್ಬಂಧವಿರಲಿದೆ.

ವಾಹನ‌ಗಳ ಪಾರ್ಕಿಂಗ್ ನಿರ್ಬಂಧಿತ ಸ್ಥಳಗಳು

  • ಎಂ.ಜಿ ರಸ್ತೆಯಲ್ಲಿ, ಅನಿಲ್ ಕುಂಬ್ಳೆ ವೃತದಿಂದ ಟ್ರಿನಿಟಿ ವೃತ್ತದವರೆಗೆ.
  • ಬ್ರಿಗೇಡ್ ರಸ್ತೆಯಲ್ಲಿ, ಆರ್ಟ್ಸ್ & ಕ್ರಾಫ್ಟ್ ಜಂಕ್ಷನ್‌ನಿಂದ ಒಪೇರಾ ಜಂಕ್ಷನ್‌ ವರೆಗೆ.
  • ಚರ್ಚ್ ಸ್ಟ್ರೀಟ್‌ನಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಸೆಂಟ್ ಮಾರ್ಕ್ಸ್ ರಸ್ತೆ ಜಂಕ್ಷನ್ ವರೆಗೆ.
  • ರೆಸ್ಟ್ ಹೌಸ್ ರಸ್ತೆಯಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ ವರೆಗೆ.
  • ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆ ಜಂಕ್ಷನ್‌ನಿಂದ ಹಳೆ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್.ಬಿ.ಐ) ವೃತ್ತದ ವರೆಗೆ ಪೊಲೀಸ್ ವಾಹನಗಳು ಹಾಗು ಕರ್ತವ್ಯ ನಿರತ ತುರ್ತುಸೇವಾ ವಾಹನಗಳನ್ನ ಹೊರತುಪಡಿಸಿ ಉಳಿದ ವಾಹನಗಳ ನಿಲುಗಡೆಗೆ ನಿಷೇಧವಿರಲಿದೆ. ಮತ್ತು ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸ್ಟ್ ಹೌಸ್ ರಸ್ತೆ, ಚರ್ಚ್ ಸ್ಟ್ರೀಟ್,ರೆಸಿಡೆನ್ಸಿ, ರಸ್ತೆ & ಸೆಂಟ್ ಮಾರ್ಕ್ಸ್ ರಸ್ತೆಗಳಲ್ಲಿ ಈಗಾಗಲೇ ನಿಲ್ಲಿಸಲಾಗಿರುವ ವಾಹನಗಳ ಚಾಲಕರು/ಮಾಲಿಕರು ಡಿಸೆಂಬರ್ 31ರಂದು ಸಂಜೆ 4:00 ಗಂಟೆಯೊಳಗೆ ತಮ್ಮ ವಾಹನಗಳನ್ನ ತೆರುವುಗೊಳಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ಸಂಚಾರಿ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಭ್ರಮಾಚರಣೆ ಮುಗಿಸಿ ತೆರಳುವವರಿಗೆ ಸೂಚನೆಗಳು;

ಡಿಸೆಂಬರ್ 31ರಂದು ರಾತ್ರಿ 10-00 ಗಂಟೆಯ ನಂತರ ಸಂಚರಿಸುವವರು ಎಂ.ಜಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದ ಕಡೆಯಿಂದ - ಹಲಸೂರು ಹಾಗು ಇನ್ನು ಮುಂದಕ್ಕೆ ಹೋಗುವವರು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ - ಬಿ ಆರ್ ವಿ ಜಂಕ್ಷನ್ ಬಲ ತಿರುವು ಕಬ್ಬನ್ ಮೂಲಕ ಸಂಚರಿಸಿ ವೆಬ್ ಜಂಕ್ಷನ್ ಬಳಿ ಎಂ ಜಿ ರಸ್ತೆಯನ್ನು ಸೇರಿ ಮುಂದೆ ಸಾಗಬಹುದಾಗಿದೆ.

ಹಲಸೂರು ಕಡೆಯಿಂದ ಕಂಟೋನ್ಮೆಂಟ್ ಕಡೆಗೆ ಹೋಗುವಂತಹ ವಾಹನಗಳು ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದುಕೊಂಡು ಹಲಸೂರು ರಸ್ತೆ-ಡಿಕೆನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆ ಸೇರಿ ಮುಂದೆ ಸಾಗಬಹುದು.

ಕಾಮರಾಜ ರಸ್ತೆಯಲ್ಲಿ ಕಬ್ಬನ್ ರಸ್ತೆ ಜಂಕ್ಷನ್ ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್ ವರೆಗೆ ವಾಹನಗಳ ನಿಲುಗಡೆಗೆ ಅವಕಾಶವಿರಲಿದೆ. ಅಲ್ಲದೆ ಶಿವಾಜಿನಗರ ಬಿಎಂಟಿಸಿ ಶಾಪಿಂಗ್ ಕಾಂಪ್ಲೆಕ್ಸ್ ನ 1ನೇ ಮಹಡಿಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶವಿರಲಿದೆ.

ಅಪಘಾತಗಳನ್ನು ತಪ್ಪಿಸುವ ಉದ್ದೇಶದಿಂದ ಡಿಸೆಂಬರ್ 31ರ ರಾತ್ರಿ 11ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆಯವರೆಗೂ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ ಹೊರತುಪಡಿಸಿ ನಗರದ ಎಲ್ಲಾ ಮೇಲ್ಸೇತುವೆಗಳ ಮೇಲೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಕ್ಯಾಬ್ ಚಾಲಕರಿಗೆ ಗ್ರಾಹಕರ ಪಿಕ್​ಅಪ್ ಹಾಗೂ ಡ್ರಾಪ್ ಪಾಯಿಂಟ್

ಕಬ್ಬನ್ ರಸ್ತೆಯಲ್ಲಿ ಗ್ರಾಹಕರನ್ನು ಪಿಕ್​ಅಪ್ ಮಾಡುವವರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹಾಗೂ ಡ್ರಾಪ್ ಮಾಡುವವರು ಕ್ರೀಡಾಂಗಣದ ಆರನೇ ಪ್ರವೇಶದ್ವಾರದ ಬಳಿ ಡ್ರಾಪ್ ಮಾಡಬಹುದು. ಕ್ವೀನ್ಸ್ ರಸ್ತೆಯಲ್ಲಿ ಕ್ವೀನ್ಸ್ ಜಂಕ್ಷನ್ ಹಾಗೂ ಸಿಟಿಒ ಜಂಕ್ಷನ್ ಬಳಿ ಪಿಕ್ ಅಪ್ ಹಾಗೂ ಡ್ರಾಪ್ ಮಾಡಬಹುದು. ಹಾಗೂ ರಾಜಭವನ ರಸ್ತೆಯಲ್ಲಿ ಸಿಟಿಒ ಜಂಕ್ಷನ್ ಹಾಗೂ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಪಿಕ್ ಅಪ್ ಹಾಗೂ ಡ್ರಾಪ್ ಮಾಡಲು ಅವಕಾಶವಿರಲಿದೆ.

ಹೊಸ ವರ್ಷಾಚರಣೆಗಾಗಿ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಿಗೆ ಬರುವವರು ತಮ್ಮ ಸ್ವಂತ ವಾಹನಗಳನ್ನು ಬಳಸದೇ, ನಮ್ಮ ಮೆಟ್ರೋ ಬಿಎಂಟಿಸಿ, ಕೆಎಸ್ಆರ್ಟಿಸಿ, ಕ್ಯಾಬ್, ಆಟೋ ಸೇವೆಗಳನ್ನ ಬಳಸಿಕೊಳ್ಳುವಂತೆ ಬೆಂಗಳೂರು ಸಂಚಾರಿ ಪೊಲೀಸರು ಕೋರಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಬೆಂಗಳೂರಿಗರ ನೆಚ್ಚಿನ ಹಾಟ್​​ಸ್ಪಾಟ್​ಗಳಿವು

Last Updated : Dec 30, 2023, 11:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.