ETV Bharat / state

ರಾಜ್ಯ ಕಾಂಗ್ರೆಸ್ ನಾಯಕರಿಂದ ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಸಲ್ಲಿಕೆ - ರಾಜ್ಯ ಕಾಂಗ್ರೆಸ್ ನಾಯಕರಿಂದ ಹೊಸ ವರ್ಷದ ಶುಭಾಶಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರು ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

New Year wishes by State Congress leaders
ರಾಜ್ಯ ಕಾಂಗ್ರೆಸ್ ನಾಯಕರಿಂದ ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ
author img

By

Published : Jan 1, 2021, 10:16 AM IST

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಶಾಸಕರು, ಮಾಜಿ ಸಚಿವರು, ಸೇರಿದಂತೆ ವಿವಿಧ ನಾಯಕರು ನಾಡಿನ ಸಮಸ್ತ ಜನತೆಗೆ 2021 ರ ವರ್ಷಾರಂಭದಂದು ಶುಭಾಶಯ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರಿಂದ ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯದ ಸಮಸ್ತ ಜನತೆಗೆ ಕಾಂಗ್ರೆಸ್ ಪಕ್ಷದ ಪರವಾಗಿ ಹೊಸ ವರ್ಷದ ಶುಭಾಶಯಗಳು. ಈ ವರ್ಷ ಹೋರಾಟದ ವರ್ಷ, ಈ ವರ್ಷ ಸಂಘಟನೆಯ ವರ್ಷವೆಂದು ಕಾಂಗ್ರೆಸ್ ಸಂಕಲ್ಪ ಮಾಡಿದೆ. ನಮ್ಮ ಕಾರ್ಯಕರ್ತರು ಪ್ರತಿ ಬೂತ್, ಹಳ್ಳಿಯಿಂದ ಪಕ್ಷ ಸಂಘಟನೆ ಆರಂಭಿಸಬೇಕಿದೆ. ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಇಂದಿನಿಂದ ಶಾಲಾ - ಕಾಲೇಜು ಆರಂಭ : ಬೆರಳೆಣಿಕೆಯಷ್ಟೇ ವಿದ್ಯಾರ್ಥಿಗಳ ಆಗಮನ

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ರಾಜ್ಯದ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2021 ಎಲ್ಲರ ಬಾಳಲ್ಲಿ ಸುಖ, ಸಂತೋಷ, ನೆಮ್ಮದಿ, ಪ್ರೀತಿ ತರಲಿ. ನಿಮ್ಮ ಎಲ್ಲಾ ಕನಸುಗಳು ನನಸಾಗಲಿ. ಮನುಕುಲಕ್ಕೆ ಎದುರಾಗಿರುವ ಸಂಕಷ್ಟಗಳು ಕರ್ಪೂರದಂತೆ ಕರಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೊರೊನಾ ಎರಡನೇ ಅಲೆ ಆತಂಕದಲ್ಲಿ ದೇಶ ಇರುವ ಸಂದರ್ಭ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿ ಎಂದು ಶುಭಕೋರಿದ್ದಾರೆ.

ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಟ್ಟೀಟ್​ ಮಾಡಿ ಶುಭಕೋರಿದ್ದು, 2020ನೇ ವರ್ಷ ನಮ್ಮೆಲ್ಲರಿಗೂ ಬಹಳ ಕಷ್ಟದ ವರ್ಷವಾಗಿತ್ತು. ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆ, ನಾವೆಲ್ಲರೂ ಉತ್ತಮ ಮತ್ತು ಪ್ರಕಾಶಮಾನವಾದ ನಾಳೆಗಾಗಿ ಎದುರು ನೋಡೋಣ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ತುಂಬಾ ಆರೋಗ್ಯಕರ ಮತ್ತು ಹೊಸ ವರ್ಷದ ಶುಭಾಶಯಗಳು ಎಂದು ಹಾರೈಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.