ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಸಿದ್ಧತೆ ಪ್ರಾರಂಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಪರಾಜಿತ ಕ್ಷೇತ್ರದ ಅಭ್ಯರ್ಥಿಗಳ ಸಭೆ ನಡೆಸಿದ್ದು, ಪರಾಜಿತ ಅಭ್ಯರ್ಥಿಗಳಿಗೆ 30 ಬೂತ್ಗಳ ಟಾರ್ಗೆಟ್ ನೀಡಲಾಗಿದೆ.
ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ ಮಾಜಿ ಸಿಎಂ ಯಡಿಯೂರಪ್ಪ ಕೂಡ ಚುನಾವಣಾ ತಂತ್ರಗಾರಿಕೆ ರೂಪಿಸಲು ಅಖಾಡಕ್ಕಿಳಿದಿದ್ದಾರೆ. ಶನಿವಾರ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪರಾಜಿತ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಜೊತೆ ಸಭೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರೂ ಪಾಲ್ಗೊಂಡರು. ಇತ್ತ ಸಿಎಂ ಬೊಮ್ಮಾಯಿ ಕೂಡ ಸಭೆಯಲ್ಲಿ ಪಾಲ್ಗೊಂಡು ಚುನಾವಣಾ ತಂತ್ರಗಾರಿಕೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, 2018ರಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳ ಜತೆ ಕಟೀಲ್, ಯಡಿಯೂರಪ್ಪ ಸಮಾಲೋಚನೆ ನಡೆಸಿದರು. ಮುಂಬರುವ ಚುನಾವಣೆಯಲ್ಲಿ ಸೋತ ಕ್ಷೇತ್ರಗಳಲ್ಲಿ ಪಕ್ಷದ ಸ್ಥಿತಿ, ಸಾಮರ್ಥ್ಯ, ಮುಂದಿನ ತಂತ್ರಗಾರಿಕೆ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು.
ಪರಾಜಿತರಿಗೆ 30ರ ಗುರಿ: ಸಭೆಯಲ್ಲಿ ಸೋತ 119 ಕ್ಷೇತ್ರಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಪರಾಜಿತ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಂಡು ಕ್ಷೇತ್ರದಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಕ್ಷೇತ್ರಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಅದರಂತೆ ಪಕ್ಷ ಸಂಘಟನೆ ಗಟ್ಟಿಗೊಳಿಸಲು ಪರಾಜಿತರಿಗೆ 30 ಬೂತ್ಗಳ ಹೊಣೆಗಾರಿಕೆ ನೀಡಲಾಗಿದೆ. ಪರಾಜಿತ ಅಭ್ಯರ್ಥಿಗಳಿಗೆ ಪರಾಜಿತ ಕ್ಷೇತ್ರಗಳಲ್ಲಿನ 30 ಬೂತ್ಗಳಲ್ಲಿ ಪಕ್ಷ ಸಂಘಟನೆಯ ಹೊಣೆಗಾರಿಕೆ ನೀಡಲಾಗಿದೆ.
30 ಬೂತ್ಗಳಲ್ಲಿ ಪಕ್ಷ ಸಂಘಟನೆ, ಚುನಾವಣಾ ತಂತ್ರಗಾರಿಕೆ ಮೂಲಕ ಬೂತ್ ಬಲವರ್ಧನೆಯ ಹೊಣೆ ನೀಡಲಾಗಿದೆ. ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ. ವಿ., ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ, ಎನ್. ರವಿಕುಮಾರ್, ಸಿದ್ದರಾಜು, ಪದಾಧಿಕಾರಿಗಳು ಮತ್ತು ಇತರರು ಭಾಗಿಯಾಗಿದ್ದರು.
ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತದ ಹಿಂದೆ ಡಿಕೆಶಿ ಇರಬೇಕು: ನಳಿನ್ ಕುಮಾರ್ ಕಟೀಲ್