ETV Bharat / state

ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಅಬ್ಬರ.. ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ - 3 days of heavy rain in coastal karnataka

ಕರ್ನಾಟಕದಾದ್ಯಂತ ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

next-3-days-of-heavy-rain-across-karnataka
ರಾಜ್ಯದಲ್ಲಿ ಮುಂದಿನ 3 ದಿನ ಮುಂದುವರಿಯಲಿರುವ ಮಳೆಯ ಅಬ್ಬರ
author img

By

Published : Jul 3, 2022, 3:04 PM IST

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ 3 ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ : ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ : ಮಲೆನಾಡು ಭಾಗಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದಲ್ಲಿಯೂ ಭಾರಿ ಮಳೆಯ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ :ಮರಳುಗಾರಿಕೆ ದೋಣಿ ಮಗುಚಿ ಉತ್ತರ ಪ್ರದೇಶದ ಕಾರ್ಮಿಕ ನಾಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.