ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಜೂನ್ ಒಂದರಿಂದ ಇದುವರೆಗೆ ರಾಜ್ಯದಲ್ಲಿ ಸರಾಸರಿ ಮಳೆಯಾಗಿದೆ. ದಕ್ಷಿಣ ಕನ್ನಡ, ಗದಗ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮೈಸೂರು, ಮಂಡ್ಯ, ಚಿಕ್ಕಮಂಗಳೂರು, ಕೊಡಗಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಈ ವಾರದ ಗಾಳಿ ಬೀಸುವಿಕೆಯ ದಿಕ್ಕು ಬದಲಾಗಿದ್ದು, ಈ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಚನ್ನಬಸವ ಪಾಟೀಲ್ ತಿಳಿಸಿದರು.
ಬಂಗಾಳ ಉಪಸಾಗರದ ಆಗ್ನೇಯ ಭಾಗದಲ್ಲಿ ಸರ್ಕ್ಯುಲೇಷನ್ ಉಂಟಾಗಿದೆ. ಈ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಜೂ. 26, 27, 28 ರಂದು ಭಾರೀ ಮಳೆಯಾಗಲಿದೆ ಎಂದು ತಿಳಿಸಿದರು.