ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬದಲಾವಣೆ, ಕಾರ್ಯಕ್ರಮ ಹಮ್ಮಿಕೊಂಡರು ವರಿಷ್ಠರ ಗಮನಕ್ಕೆ ತಂದು, ಸೂಕ್ತ ಮಾರ್ಗದರ್ಶನಲ್ಲಿ ಮುನ್ನಡೆಯುತ್ತೇವೆ. ಅದೇ ರೀತಿ ಬಿಎಸ್ವೈ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರವನ್ನು ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಮುಖಂಡರು ವರಿಷ್ಠರನ್ನು ಭೇಟಿ ಮಾಡಿ, ಮಾತುಕತೆ ನಡೆಸುತ್ತಿದ್ದಾರೆ. ಬಿಜೆಪಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿದ್ದೇವೆ. ಹಾಗಾಗಿ ಅವರೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ. ಅವರನ್ನು ಬಿಟ್ಟು ಬೇರೆ ಯಾರೂ ಆಗಲ್ಲ ಎಂದರು.
ನಾನು ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಕರೆದುಕೊಂಡು ಹೋಗಿಲ್ಲ. ಮುಂಬೈನಲ್ಲಿ ವೈಯಕ್ತಿಕ ಕೆಲಸಕ್ಕಾಗಿ ತೆರಳಿದಾಗ ಆಕಸ್ಮಿಕವಾಗಿ ಭೇಟಿಯಾಗಿತ್ತು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.