ಬೆಂಗಳೂರು : ಆಂತರಿಕ ಭದ್ರತಾ ವಿಭಾಗ (ಐ.ಎಸ್.ಡಿ) ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಅಲ್ ಖೈದಾ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದ ಶಂಕಿತ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಳಗಿನ ಜಾವ ನಡೆದ ಮಿಂಚಿನ ಕಾರ್ಯಾಚರಣೆಯಲ್ಲಿ ನಗರದ ಥಣಿಸಂದ್ರದ ಮಂಜುನಾಥ ನಗರದಲ್ಲಿ ವಾಸವಿದ್ದ ಆರೀಫ್ ಎಂಬಾತನನ್ನು ಪೊಲೀಸರು ಬಂಧಿಸಿದೆ. ಈ ಸಂಬಂದ ಎನ್ಐಎ ಪ್ರೆಸ್ ರಿಲೀಸ್ ಮಾಡಿದೆ. ಇಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಸ್ಥಳಗಳಲ್ಲಿ ಎನ್ಐಎ ಹುಡುಕಾಟ ಮುಂದುವರೆಸಿದೆ.
ಪತ್ರಿಕಾ ಪ್ರಕಟಣೆಯಲ್ಲೇನಿದೆ: ಇಂದು (11.02.2023) ಬೆಂಗಳೂರು ಮತ್ತು ಮುಂಬೈನ ಎರಡು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಎನ್ಐಎ ಅಧಿಕಾರಿಗಳು ಭಯೋತ್ಪಾದನೆಯ ಸಂಚು ಪ್ರಕರಣದಲ್ಲಿ 2 ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದಾರೆ. ಐಎಸ್ಡಿ, ಕರ್ನಾಟಕ ಮತ್ತು ಸ್ಥಳೀಯ ಪೊಲೀಸರ ಸಕ್ರಿಯ ಸಹಾಯದಿಂದ RC-46/2022/NIA/DLI ಯಲ್ಲಿ ಕ್ರಮವಾಗಿ ಕರ್ನಾಟಕದ ಬೆಂಗಳೂರು ಮತ್ತು ಮಹಾರಾಷ್ಟ್ರದ ಥಾಣಿಸಂದ್ರ, ಪಾಲ್ಘರ್, ಥಾಣೆಯಲ್ಲಿ ಪರಿಶೀಲನೆ ಹಾಗೂ ತಪಾಸಣೆ ನಡೆಸಲಾಗಿದೆ ಎಂದು ಎನ್ಐಎ ತಿಳಿಸಿದೆ.
ಇಬ್ಬರು ಶಂಕಿತರು ಎನ್‌ಕ್ರಿಪ್ಟ್ ಮಾಡಲಾದ ಸಂವಹನ ವೇದಿಕೆಗಳ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಪಟ್ಟ ವಿದೇಶಿ ಮೂಲದ ಆನ್‌ಲೈನ್ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿಯಿಂದ ಬಹಿರಂಗವಾಗಿದೆ. ಇವರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯುವಕರನ್ನು ಪ್ರಚೋದಿಸಿ, ಹಿಂಸಾಚಾರ ಮತ್ತು ಭಯೋತ್ಪಾದನೆಯ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದು ಬಯಲಾಗಿದೆ ಎನ್ಐಎ ಪ್ರಕಟಣೆಯಲ್ಲಿ ಹೇಳಿದೆ.
ಈ ಸಂಬಂಧ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ 24.07.2022 ರಂದು 158/2022 ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಹಾಗೂ 30.11.2022ರಂದು ಎನ್ಐಎಯಿಂದ ಮರು ಕೇಸ್ ನೋಂದಣಿಯಾಗಿದೆ ಎಂದು ಹೇಳಿದೆ.
ಈ ಹುಡುಕಾಟಗಳ ಸಮಯದಲ್ಲಿ, ವಿವಿಧ ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದಿನ ಘಟನೆ ಹಾಗೂ ದಾಳಿಗೆ ಸಂಬಂಧ ಪಟ್ಟಂತೆ ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿವೆ ಎಂದು ಭಾರತೀಯ ತನಿಖಾ ದಳ ಎನ್ಐಎ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಇದನ್ನೂ ಓದಿ: ಐಎಸ್ಡಿ-ಎನ್ಐಎ ಭರ್ಜರಿ ಕಾರ್ಯಾಚರಣೆ.. ಅಲ್ ಖೈದಾ ಜೊತೆ ನಂಟು, ಬೆಂಗಳೂರಿನಲ್ಲಿ ಶಂಕಿತ ಅರೆಸ್ಟ್