ETV Bharat / state

ತೀರ್ಪು ಕಾಯ್ದಿರಿಸಿದ ಎನ್​ಐಎ ಕೋರ್ಟ್.. ನ.30ಕ್ಕೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ನಿರ್ಧಾರ - NIA court post poned disqualified mlas case judgment

ಅನರ್ಹಗೊಂಡಿದ್ದ 17ಮಂದಿ ಶಾಸಕರ ವಿರುದ್ಧ ದೇಶದ್ರೋಹ ಆರೋಪದಡಿ ದಾಖಲಾಗಿರುವ ಅರ್ಜಿ ಸಂಬಂಧ ತೀರ್ಪನ್ನು ಎನ್​ಐಎ ಕೋರ್ಟ್ ನ. 30ಕ್ಕೆ ಕಾಯ್ದಿರಿಸಿದೆ.

court
ತೀರ್ಪು ಕಾಯ್ದಿರಿಸಿದ ಎನ್​ಐಎ ಕೋರ್ಟ್
author img

By

Published : Nov 26, 2019, 7:08 PM IST

Updated : Nov 26, 2019, 7:26 PM IST

ಬೆಂಗಳೂರು: ಜೆಡಿಎಸ್,ಕಾಂಗ್ರೆಸ್ ಪಕ್ಷ ತೊರೆದು ಅನರ್ಹರಾಗಿರುವ 17 ಮಂದಿ ಶಾಸಕರ ವಿರುದ್ಧ ದೇಶದ್ರೋಹ ಆರೋಪದಡಿ ದಾಖಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಎನ್‌ಐಎ(ರಾಷ್ಟ್ರೀಯ ತನಿಖಾ ದಳ) ವಿಶೇಷ ಕೋರ್ಟ್ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿದೆ.

ದೂರುದಾರರಾದ ಹಿರಿಯ ವಕೀಲ ಬಾಲನ್ ನ್ಯಾಯಾಲಯದಲ್ಲಿ ವಾದ ಮಾಡಿ, ಸಿಎಂ ಯಡಿಯೂರಪ್ಪ ಸರ್ಕಾರ 17 ಶಾಸಕರ‌ ಖರೀದಿಗೆ ಸಾವಿರ ಕೋಟಿ ಖರ್ಚು ಮಾಡಿ ಒಳಸಂಚಿನಿಂದ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಬೀಳಿಸಿದ್ದಾರೆ. ಆಪರೇಷನ್ ಕಮಲಕ್ಕೆ ಬಿಜೆಪಿ ಅಕ್ರಮ ಹಣ ಬಳಸಿದೆ. ಈ ದುಡ್ಡಿನ ಮೂಲ ಯಾವುದು ಎಂದು ತಿಳಿಯಬೇಕಿದೆ. ಸಿಎಂ ಯಡಿಯೂರಪ್ಪ ಕೂಡ ಅನರ್ಹರಿಂದಾಗಿಯೇ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಾಗಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ಅನರ್ಹ ಶಾಸಕರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ ಎಂದರು.

ಅಲ್ಲದೆ ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ರೂ. ಅಕ್ರಮ ಹಣ ಬಳಕೆಯಾಗಿದೆ. ರಾಜಕೀಯ ಪಕ್ಷಗಳಿಗೆ ಭಯೋತ್ಪಾದಕ ಶಕ್ತಿಗಳಿಂದ ಹಣ ಬರುತ್ತಿದೆ ಎಂಬ ಆರೋಪವಿದೆ. ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕೆಂದು ವಕೀಲ ಬಾಲನ್ ನ್ಯಾಯಾಲಯದ ಗಮನಕ್ಕೆ ತಂದರು.
ವಕೀಲರ ವಾದ ಆಲಿಸಿದ ನ್ಯಾಯಾಲಯ ನವೆಂಬರ್ 30ಕ್ಕೆ ತೀರ್ಪನ್ನು ಕಾಯ್ದಿರಿಸಿದೆ.

Intro:ಅನರ್ಹ ಶಾಸಕರ ವಿರುದ್ಧ ದೇಶದ್ರೋಹ ಆರೋಪದಡಿ ದೂರು ದಾಖಲು
ತೀರ್ಪು ಕಾಯ್ದಿರಿಸಿದ ನ್ಯಾಯಲಯ

ಜೆಡಿಎಸ್, ಕಾಂಗ್ರೆಸ್ ಪಕ್ಷ ತೊರೆದು ಅನರ್ಹರಾಗಿರುವ 17 ಮಂದಿ ಅನರ್ಹ ಶಾಸಕರ ವಿರುದ್ಧ ದೇಶದ್ರೋಹ ಆರೋಪದಡಿ ದಾಖಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಎನ್‌ಐಎ(ರಾಷ್ಟ್ರೀಯ ತನಿಖಾ ದಳ) ವಿಶೇಷ ಕೋರ್ಟ್ ವಿಚಾರಣೆ ಇಂದು ನಡೆಸಿತು

ದೂರುದಾರ ಹಿರಿಯ ವಕೀಲ ಬಾಲನ್ ನ್ಯಾಯಲಯದಲ್ಲಿ ವಾದ ಮಾಡಿ ಯಡಿಯೂರಪ್ಪ ಸರ್ಕಾರ 17 ಶಾಸಕರ‌ ಖರೀದಿಗೆ ಸಾವಿರ ಕೋಟಿ ಖರ್ಚು ಮಾಡಿ,ಒಳಸಂಚು ಮಾಡಿ ಅಸ್ತಿತ್ವದಲ್ಲಿದ್ದ ಸರ್ಕಾರವನ್ನು ಬಿಳಿಸಿದ್ದಾರೆ. ಆಪರೇಷನ್ ಕಮಲಕ್ಕೆ ಬಿಜೆಪಿ ಅಕ್ರಮ ಹಣ ಬಳಕೆ ಮಾಡಿದ್ದು, ದುಡ್ಡಿನ ಮೂಲ ಯಾವುದು ಎಂದು ತಿಳಿಯಬೇಕಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಅನರ್ಹರಿಂದಾಗಿಯೇ ಬಿಜೆಪಿ ಸರಕಾರ ರಚನೆ ಮಾಡಲು ಸಾಧ್ಯವಾಗಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇವೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.‌
ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ರೂ. ಅಕ್ರಮ ಹಣ ಬಳಕೆಯಾಗಿದೆ. ರಾಜಕೀಯ ಪಕ್ಷಗಳಿಗೆ ಭಯೋತ್ಪಾದಕ ಶಕ್ತಿಗಳಿಂದ ಹಣ ಬರುತ್ತಿದೆ ಎಂಬ ಆರೋಪವಿದೆ. ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕೆಂದು ಬಾಲನ್ ತಿಳಿಸಿದರು. ಇನ್ನು
ವಕೀಲರ ವಾದ ಆಲಿಸಿದ ನ್ಯಾಯಾಲಯ ನವೆಂಬರ್ 30ಕ್ಕೆ ತೀರ್ಪು ಕಾಯ್ದಿರಿಸಿದೆBody:KN_BNG_07_NIA_7204498Conclusion:KN_BNG_07_NIA_7204498
Last Updated : Nov 26, 2019, 7:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.