ETV Bharat / state

ನೈಸ್ ಒಪ್ಪಂದ : ಸದನ ಸಮಿತಿ ಶಿಫಾರಸಿನಂತೆ ಸಿಬಿಐಗೆ ವಹಿಸುವಂತೆ ಕುಮಾರಸ್ವಾಮಿ ಆಗ್ರಹ

author img

By

Published : Jul 22, 2023, 9:35 PM IST

Updated : Jul 22, 2023, 11:01 PM IST

ನೈಸ್ ಯೋಜನೆ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟಾಸ್ತ್ರ ಪ್ರಯೋಗಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Former Chief Minister H.D. Kumaraswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತೀವ್ರ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರವಾಗಿ ಟೀಕಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹೆಚ್ ಡಿಕೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ನೈಸ್ ಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಯಿತು ಎಂದು ಹೇಳಿದ್ದ ಡಿಕೆಶಿ ಅವರ ವಿರುದ್ಧ ಗರಂ ಆದ ಅವರು, ನೈಸ್ ಅಕ್ರಮಗಳಲ್ಲಿ ನಿಮ್ಮ ಪಾತ್ರ ಏನು ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

  • ನೈಸ್ ಯೋಜನೆಗೆ ಶ್ರೀ @H_D_Devegowda ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಶ್ರೀ @DKShivakumar ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? 1/10#ಬುಲ್ಡೋಜ್_ಬೆಂಗಳೂರು #ಬುಲ್ಡೋಜ್_ಕರ್ನಾಟಕ

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023 " class="align-text-top noRightClick twitterSection" data=" ">

ಇದೇನು ಬುಲ್ಡೋಜ್ ಬೆಂಗಳೂರಾ?: ಡಿಕೆಶಿ ಹಾಗೂ ಕೆಲ ಅಧಿಕಾರಿಗಳ ವಿರುದ್ಧ ಗಂಭೀರ ಅರೋಪ ಮಾಡಿರುವ ಹೆಚ್ ಡಿಕೆ, ನೈಸ್ ಯೋಜನೆಗೆ ಹೆಚ್.ಡಿ. ದೇವೇಗೌಡರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಬುಲ್ಡೋಜ್ ಬೆಂಗಳೂರು ಹಾಗೂ ಬುಲ್ಡೋಜ್ ಕರ್ನಾಟಕ ಎಂದು ಹ್ಯಾಷ್ ಟ್ಯಾಗ್ ಮಾಡಿ ನೇರವಾಗಿ ಡಿಕೆಶಿ ಅವರನ್ನು ಕುಟುಕಿದ್ದಾರೆ.

  • ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು.ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ? 9/10

ನೈಸ್ ರಸ್ತೆಯ 'ತಿರುಚಿದ ಒಪ್ಪಂದ'ದ ಬಗ್ಗೆಯೂ ಡಿಕೆಶಿ ಅವರು ಹೇಳಬೇಕಿತ್ತಲ್ಲವೇ? ಬ್ರ್ಯಾಂಡ್ ಬೆಂಗಳೂರು ಟೀಮಿನ ಮುಖ್ಯಸ್ಥರ ಕರಾಮತ್ತಿನ ಬಗ್ಗೆಯೂ ಬೆಳಕು ಚೆಲ್ಲಬೇಕಲ್ಲವೇ? ಅದು ಬಿಟ್ಟು, ಸತ್ಯ ಮರೆಮಾಚಿ ಬರೀ 'ಸಹಿ'ಯ ಬಗ್ಗೆ ನೀವು ಗೊಣಗಿದ್ದು ಯಾಕೆ? ಸದನ ಸಮಿತಿ ವರದಿಯ ಬಗ್ಗೆಯೂ ಚಕಾರ ಎತ್ತದಿರುವುದು ಯಾಕೋ? ಏನಿದು ಈ ನಿಗೂಢ ಸೋಜಿಗ? ಎಂದು ಕುಮಾರಸ್ವಾಮಿ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

  • ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರಕಾರ ನಿಮ್ಮದಲ್ಲವೇ??
    ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ?10/10

ಮೂಲ ಒಪ್ಪಂದ ನೆನಪಿಸಿದ ಹೆಚ್​ಡಿಕೆ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಉರುಫ್ ನೈಸ್ ರಸ್ತೆ ಯೋಜನೆಗೆ ರಾಜ್ಯ ಸರಕಾರದಿಂದ ನಯಾಪೈಸೆ ಕೊಡುವುದಿಲ್ಲ, ಪೂರ್ಣ ಹೂಡಿಕೆ ಹಣವನ್ನು ಕಂಪನಿಯೇ ಭರಿಸಬೇಕು. ಭೂಸ್ವಾಧೀನವೂ ಸೇರಿ ಸರಕಾರದ ಮೇಲೆ ಯಾವುದೇ ಹೊರೆ ಇರುವಂತಿಲ್ಲ. ಇದು ದೇವೇಗೌಡರ ಕಾಲದಲ್ಲಿ ಆದ ಮೂಲ ಒಪ್ಪಂದದ ಸಾರಾಂಶ. ಹಾಗಾದರೆ, ಈ ಯೋಜನೆ 'ಸಾರ'ವಾಗಿದ್ದು ಯಾರಿಗೆ? ಎಂದು ಪ್ರಶ್ನಿಸಿದ್ದಾರೆ.

  • ಆಲ್ಕೊಹಾಲಿನ ಬೆಲೆ ಏರಿಸಿದ ನಂತರ @INCKarnataka ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! 1/4

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023 " class="align-text-top noRightClick twitterSection" data="

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ @INCKarnataka ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! 1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023 ">

ಒಪ್ಪಂದ ತಿರುಚಿದ ಸೂತ್ರಧಾರ ಬ್ರ್ಯಾಂಡ್ ಬೆಂಗಳೂರು ಮುಖ್ಯಸ್ಥ: ಬ್ರ್ಯಾಂಡ್ ಬೆಂಗಳೂರು ಹರಿಕಾರಾಗಲು ಹೊರಟಿರುವ ನೀವು, 'ತಿರುಚಿದ ಒಪ್ಪಂದ'ದ ಸೂತ್ರಧಾರರನ್ನೇ ಪಕ್ಕದಲ್ಲಿ ಇಟ್ಟುಕೊಂಡಿದ್ದೀರಿ. ಒಪ್ಪಂದ ತಿರುಚಿದ ಪರಿಣಾಮ ರಾಜ್ಯವು ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾಯಿತು. ಸಾವಿರಾರು ಕೋಟಿ ಲೂಟಿಯಾಯಿತು. ಸರಕಾರ & ಜನರ ಸಾವಿರಾರು ಎಕರೆ ಭೂಮಿ ಭೂಗಳ್ಳರ ಪಾಲಾಯಿತು ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಇಬ್ಬರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಟೀಕಾ ಪ್ರಹಾರ ನಡೆಸಿದ್ದಾರೆ.

ದೇವೇಗೌಡರ ಬಗ್ಗೆ ಮಾತನಾಡಲು ನಾಚಿಕೆ ಆಗುವುದಿಲ್ಲವೇ?: ಬ್ರ್ಯಾಂಡ್ ಬೆಂಗಳೂರು ಎಂದರೆ ಬುಲ್ಡೋಜ್ ಬೆಂಗಳೂರಾ? ಇಡೀ ಬೆಂಗಳೂರು ನಗರವನ್ನು ಛಿದ್ರಛಿದ್ರ ಮಾಡಿ ಪೋಗದಸ್ತಾಗಿ ಬುಲ್ಡೋಜ್ ಮಾಡಿ ಕಿಸೆ ತುಂಬಿಸಿಕೊಳ್ಳುವುದಾ? ಕರ್ನಾಟಕವನ್ನು ಕಡಲೇಪುರಿಯಂತೆ ಮುಕ್ಕಿ ತಿನ್ನುವುದಾ? ಎಂದು ಪ್ರಶ್ನಿಸಿರುವ ಅವರು, 2014- 2016ರಲ್ಲಿನ ಸದನ ಸಮಿತಿ ವರದಿಯನ್ನು ತಾವು ಓದಿಲ್ಲವೇ? ಅಥವಾ ಅದನ್ನು ಓದದೇ ಕಸದ ಬುಟ್ಟಿಗೆ ಎಸೆದಿದ್ದೀರಾ? ಕೊಳ್ಳೆ ಹೊಡೆದ ಈಸ್ಟ್ ಇಂಡಿಯಾದಂಥ ಕಂಪನಿ ಜೊತೆ ಕೈ ಜೋಡಿಸಿದ ನಿಮಗೆ, ದೇವೇಗೌಡರ ಹೆಸರು ಹೇಳುವ ಅರ್ಹತೆ ಇದೆಯಾ? ರಾಜ್ಯದ ಅಭ್ಯುದಯಕ್ಕೆ ಬದುಕನ್ನೇ ಮೀಸಲಿಟ್ಟ ಆ ಹಿರಿಯ ಜೀವದ ಬಗ್ಗೆ ನಾಲಿಗೆ ಜಾರಿ ಬಿಡಲು ನಾಚಿಕೆ ಆಗುವುದಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.3/4#ಬೆಲೆ_ಏರಿಕೆ_ಗ್ಯಾರಂಟಿ

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023 " class="align-text-top noRightClick twitterSection" data=" ">

ಅಸಹ್ಯ ಅನಿಸುವುದಿಲ್ಲವೇ?: ನೈಸ್ ಕರ್ಮವನ್ನೆಲ್ಲ ಒಮ್ಮೆ ಕಣ್ಮುಚ್ಚಿ ನೆನಪು ಮಾಡಿಕೊಳ್ಳಿ. ಅಲ್ಲಿ ನೀವೆಲ್ಲಿ ನಿಲ್ಲುತ್ತಿರಿ ಎಂದು ಊಹಿಸಿಕೊಳ್ಳಿ, ಮಾಡಿದ ಪಾಪಗಳೆಲ್ಲವೂ ಸ್ಲೈಡುಗಳಂತೆ ಪ್ರತ್ಯಕ್ಷವಾಗುತ್ತವೆ. ಗಂಗೆಯಲ್ಲಿ ಸಾವಿರ ಸಲ ಮುಳುಗಿದರೂ ಅಳಿಯದ ಪಾಪವದು. ರಾಜ್ಯವನ್ನೇ ದೋಚಿದ ಖಾಸಗಿ ಕಂಪನಿಗೆ 'ಪೊಲಿಟಿಕಲ್ ಏಜೆಂಟ್' ಆಗುವುದಕ್ಕೆ ಅಸಹ್ಯ ಅನಿಸುವುದಿಲ್ಲವೇ? ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಅಧಿಕಾರಿಗಳ ಅನೈತಿಕ ಭ್ರಷ್ಟವ್ಯೂಹ: ನೈಸ್ ಯೋಜನೆ ಯಾರಿಗೆಲ್ಲಾ ಕಾಮಧೇನು, ಕಲ್ಪವೃಕ್ಷವಾಗಿದೆ ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ಧನಪಿಶಾಚಿ ರಾಜಕಾರಣಿಗಳು, ಮುಖ್ಯ ಕಾರ್ಯದರ್ಶಿ ಮಟ್ಟದವರೂ ಸೇರಿ ಅನೇಕ ಅಧಿಕಾರಿಗಳ 'ಅನೈತಿಕ ಭ್ರಷ್ಟವ್ಯೂಹ' ಕರ್ನಾಟಕವನ್ನು ಕಂಡರಿಯದ ರೀತಿಯಲ್ಲಿ ಲೂಟಿ ಮಾಡಿದೆ. ಈ ಲೂಟಿಯ ಕಥೆಯಲ್ಲಿ ನಿಮ್ಮ ಪಾತ್ರವೇನು? ಎಂದು ಡಿಕೆಶಿ ಅವರನ್ನು ನೇರವಾಗಿ ಪ್ರಶ್ನಿಸಿದ್ದಾರೆ.

  • ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ.4/4#ಜನರ_ಬದುಕು_ಹಾಲಾಹಲ

ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ? ಎಂದಿದ್ದಾರೆ.

ಸಿಬಿಐ ತನಿಖೆಗೆ ವಹಿಸಿ: ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರಕಾರ ನಿಮ್ಮದಲ್ಲವೇ? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ..ಸರ್ಕಾರದ ಆಲೋಚನೆ ಏನೆಂದು ನನಗೆ ತಿಳಿದಿಲ್ಲ: ಮಾಜಿ ಸಿಎಂ ಬೊಮ್ಮಾಯಿ

Last Updated : Jul 22, 2023, 11:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.