ETV Bharat / state

ಹೊಸ ವರ್ಷಾಚರಣೆ ವೇಳೆ ಕಿಕ್​ ಏರಿಸಲು ಸಂಚು; ಬೆಂಗಳೂರಲ್ಲಿ ಸಿಕ್ಕಿಬಿದ್ದ ವಿದೇಶಿ ಪ್ರಜೆ, 21 ಕೋಟಿಯ ಡ್ರಗ್ಸ್​ ವಶ - ಹೊಸ ವರ್ಷಾಚರಣೆ

ಹೊಸ ವರ್ಷ ಆಚರಣೆಗೆ ಮಾದಕ ವಸ್ತುಗಳ ಮಾರಾಟ ಮಾಡಲು ಯೋಜನೆ ರೂಪಿಸಿ ಮನೆಯಲ್ಲಿ ಶೇಖರಿಸಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಾದಕ ಪದಾರ್ಥ ಶೇಖರಿಸಿಟ್ಟ ವಿದೇಶಿ ಪ್ರಜೆಯ ಬಂಧನ

author img

By ETV Bharat Karnataka Team

Published : Dec 12, 2023, 1:32 PM IST

Updated : Dec 12, 2023, 7:57 PM IST

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡುತ್ತಿರುವುದು.

ಬೆಂಗಳೂರು: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಶೇಖರಿಸಿಟ್ಟಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಬಂಧಿಸಿದೆ. ನೈಜೀರಿಯಾ ಮೂಲದ ಲಿಯೋನಾರ್ಡ್ ಒಕ್ವುಡಿಲಿ (44) ಬಂಧಿತ ಆರೋಪಿ. ಈತನಿಂದ 16 ಕೆ.ಜಿ ಮಾದಕ ಪದಾರ್ಥ, 500 ಗ್ರಾಂ ತೂಕದ ಕೊಕೇನ್ ಹಾಗೂ 1 ಮೊಬೈಲ್ ಹಾಗೂ ಇತರೆ ವಸ್ತುಗಳು ಸೇರಿ ಅಂದಾಜು 21 ಕೋಟಿ ರೂ. ಬೆಲೆ ಬಾಳುವ ಡ್ರಗ್ಸ್​ ವಶಕ್ಕೆ ಪಡೆದಿದೆ.

ಮಾದಕ ಪದಾರ್ಥ
ಮಾದಕ ಪದಾರ್ಥ

ವಿದೇಶಿ ಪ್ರಜೆಯಾಗಿರುವ ಆರೋಪಿಯು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. 2024ರ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಿಗೆ ನಿಷೇಧಿತ ಡ್ರಗ್ಸ್​ ಮತ್ತು ಕೊಕೇನ್ ಅನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದೆಹಲಿ, ಮುಂಬೈ ಹಾಗೂ ಇತರೆ ರಾಜ್ಯಗಳಲ್ಲಿ ನೆಲೆಸಿರುವ ವಿದೇಶಿ ಮೂಲದ ವ್ಯಕ್ತಿಗಳಿಂದ ಚೂಡಿದಾರ್ ಬಟ್ಟೆ, ಬೆಡ್‌ಶೀಟ್ ಕವರ್‌ಗಳಲ್ಲಿ, ಸೋಪ್ ಬಾಕ್ಸ್ ಮತ್ತು ಚಾಕೊಲೇಟ್ ಬಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿ ಯಾರಿಗೂ ಅನುಮಾನ ಬರದಂತೆ ಖರೀದಿಸಿಕೊಂಡು ತರುತ್ತಿದ್ದ ಮತ್ತು ಅವುಗಳನ್ನು ತನ್ನ ಮನೆಯಲ್ಲಿರಿಸಿಕೊಂಡಿದ್ದ.

ಮಾದಕ ಪದಾರ್ಥ
ಮಾದಕ ಪದಾರ್ಥ

ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರ ತಂಡ ಆರೋಪಿಯನ್ನ ಬಂಧಿಸಿದೆ. ಆರೋಪಿಯು ಹೊಸ ವರ್ಷದ ಆಚರಣೆಯ ಸಮಯದಲ್ಲಿ ಹೆಚ್ಚಿನ ಬೆಲೆಗೆ ಬೆಂಗಳೂರು ನಗರದಲ್ಲಿ ನಡೆಯುವ ಪಾರ್ಟಿಗಳಿಗೆ, ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುವ ಉದ್ದೇಶದಿಂದ ಮಾದಕ ವಸ್ತುಗಳನ್ನು ಸಂಗ್ರಹಿಸಿ ಗೌಪ್ಯವಾಗಿ ಶೇಖರಿಸಿಕೊಂಡಿರುವುದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಯ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸಿಕೊಳ್ಳಲಾಗಿದೆ.

ಮಾದಕ ಪದಾರ್ಥ
ಮಾದಕ ಪದಾರ್ಥ

ಇತ್ತೀಚಿನ ಪ್ರಕರಣ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮಾದಕ ವಸ್ತು ಹಾಗೂ ಹುಲಿ ಉಗುರುಗಳನ್ನು ವಶಕ್ಕೆ ಪಡೆದುಕೊಂಡು ಏಳು ಆರೋಪಿಗಳನ್ನು ಬಂಧಿಸಿರುವ ಪ್ರಕರಣ ಕಳೆದ ಎರಡು ದಿನಗಳ ಹಿಂದೆ ದಾವಣಗೆರೆಯಲ್ಲಿ ನಡೆದಿತ್ತು.

ಮಾದಕ ಪದಾರ್ಥ
ಮಾದಕ ಪದಾರ್ಥ

ಇದನ್ನೂ ಓದಿ: ಬೆಂಗಳೂರು: ಮನೆಯಲ್ಲಿ ಮಿನಿ ಡ್ರಗ್ಸ್ ಫ್ಯಾಕ್ಟರಿ! ನೈಜೀರಿಯಾ ವ್ಯಕ್ತಿ ಬಂಧನ

Last Updated : Dec 12, 2023, 7:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.