ETV Bharat / state

ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ.. ಅನವಶ್ಯಕವಾಗಿ ಓಡಾಡಿದರೆ ಶಿಸ್ತು ಕ್ರಮ..

author img

By

Published : Sep 27, 2021, 8:26 PM IST

ಸಾರ್ವಜನಿಕ ಸ್ಥಳಗಳಲ್ಲಿ 4ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಕರ್ಫ್ಯೂ ವೇಳೆ ಅನವಶ್ಯಕವಾಗಿ ಓಡಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ..

Night curfew in Bangalore news
ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ

ಬೆಂಗಳೂರು : ರಾಜಧಾನಿಯಲ್ಲಿ ಸೆಪ್ಟೆಂಬರ್ 27ರವರೆಗೆ ನೈಟ್ ಕರ್ಫ್ಯೂ ಹೇರಲಾಗಿತ್ತು. ಈಗ ಅದನ್ನು ಅಕ್ಟೊಬರ್ 11ರವರೆಗೆ ವಿಸ್ತರಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಮುಂದಿನ ತಿಂಗಳು 11ರ ಮಧ್ಯರಾತ್ರಿವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಜೊತೆಗೆ 144 ಸೆಕ್ಷನ್ ಸಹ ಜಾರಿಯಲ್ಲಿ ಇರಲಿದೆ. ಆದರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣದಲ್ಲಿ ಮಾತ್ರ ಕರ್ಫ್ಯೂಗೆ ವಿನಾಯಿತಿ ನೀಡಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ 4ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಕರ್ಫ್ಯೂ ವೇಳೆ ಅನವಶ್ಯಕವಾಗಿ ಓಡಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕಟ್ಟುನಿಟ್ಟಾದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಓದಿ: ದಿವ್ಯಾಂಗರಿಗೆ ಶೇ.5ರಷ್ಟು ನಿವೇಶನ ಮೀಸಲು : ಬಿಡಿಎ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.