ಬೆಂಗಳೂರು : ನಾಳೆಯಿಂದ (ಮಂಗಳವಾರ) 10 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜೊತೆ ಜೊತೆಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ (ಬಿಎಂಆರ್‌ಸಿಎಲ್) ರೈಲು ಸಂಚಾರದ ವೇಳೆಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಪ್ರಕಟಣೆ ಹೊರಡಿಸಿದೆ.
ಡಿಸೆಂಬರ್ 28ರಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರುವುದರಿಂದ ರಾತ್ರಿ 10ರ ಬಳಿಕ ಜನರು ರಸ್ತೆಗಿಳಿಯದಂತೆ ಸರ್ಕಾರ ನಿರ್ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋಗೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸಂಸ್ಥೆ ಹೇಳಿದೆ.
ಹಾಗಾಗಿ, ರಾತ್ರಿ 10 ಗಂಟೆಯ ನಂತರ ಮೆಟ್ರೋ ರೈಲಿನ ಟ್ರಿಪ್ಗಳನ್ನು ಕಡಿತಗೊಳಿಸಲಾಗಿದೆ. ಮೆಟ್ರೋ ರೈಲಿನ ಸಂಚಾರದ ಅವಧಿಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಬಿಎಂಆರ್‌ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಓದಿ: ಕಾಂಗ್ರೆಸ್, ಬಿಜೆಪಿ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ