ETV Bharat / state

ಸೆ.13ರ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ: ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

ಕೋವಿಡ್ ಆತಂಕದ ಹಿನ್ನೆಲೆ ಬೆಂಗಳೂರಲ್ಲಿ ನೈಟ್​​​ಕರ್ಫ್ಯೂ ವಿಸ್ತರಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಕೋವಿಡ್ ನಿಯಮದ ಕಡ್ಡಾಯ ಪಾಲನೆಗೆ ಸೂಚಿಸಿದ್ದಾರೆ.

Night curfew will be extended in Bangalore
ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ
author img

By

Published : Sep 1, 2021, 2:14 PM IST

ಬೆಂಗಳೂರು: ನಗರದಲ್ಲಿ ಜಾರಿಯಲ್ಲಿದ್ದ ನೈಟ್ ಕರ್ಫ್ಯೂ ಅನ್ನು ನಗರ ಪೊಲೀಸರು ಸೆಪ್ಟೆಂಬರ್ 13ರ ವರೆಗೆ ವಿಸ್ತರಿಸಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ವಿಸ್ತೃತ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಪೊಲೀಸರು ನಗರದಲ್ಲಿ ನಿಷೇಧಾಜ್ಞೆಯನ್ನು ಸೆಪ್ಟೆಂಬರ್ 13ರ ಮಧ್ಯರಾತ್ರಿಯವರೆಗೆ ವಿಸ್ತರಿಸಿದ್ದಾರೆ. ಹೀಗಾಗಿ ರಾತ್ರಿ ಕರ್ಫ್ಯೂ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರ ಸಭೆ ನಿರ್ಬಂಧಿಸಲಾಗಿದೆ. ಆದರೆ, ಬಸ್ ನಿಲ್ದಾಣಗಳು, ಮೆಟ್ರೋ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳು ಆದೇಶದಿಂದ ವಿನಾಯಿತಿ ಪಡೆದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಆದೇಶದ ಪ್ರಕಾರ, ಯಾವುದೇ ಉಲ್ಲಂಘನೆಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ, 2005, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯಿದೆ, 2020ರ ಅಡಿ ಮತ್ತು ಐಪಿಸಿ ಸೆಕ್ಷನ್ 188ರ ಅಡಿ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ವಿವರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.