ETV Bharat / state

ಅಕಾಲಿಕವಾಗಿ ಖಾಲಿ ಬಿದ್ದ ಕ್ಷೇತ್ರಕ್ಕೆ ಜೋತು ಬೀಳುವ ಜಾಯಮಾನ ನನ್ನದಲ್ಲವೇ ಅಲ್ಲ: ನಿಖಿಲ್ ಕುಮಾರಸ್ವಾಮಿ - Nikhil Kumaraswamy

ಮಾಜಿ ಸಚಿವರು ಹಾಗೂ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರು ಅಕಾಲಿಕ ನಿಧನರಾಗಿದ್ದರಿಂದ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ಅನಿವಾರ್ಯವಾಗಿದೆ. ಹಾಗಂತ ಅಕಾಲಿಕವಾಗಿ ಖಾಲಿ ಬಿದ್ದ ಕ್ಷೇತ್ರಕ್ಕೆ ಜೋತು ಬೀಳುವ ಜಾಯಮಾನ ನನ್ನದಲ್ಲವೇ ಅಲ್ಲ ಎಂದು ನಿಖಿಲ್​ ಕುಮಾರ್​ಸ್ವಾಮಿ ಸ್ಪಷ್ಟಪಡಿಸಿದ್ದಾರೆ.

Nikhil Kumaraswamy
ನಿಖಿಲ್ ಕುಮಾರಸ್ವಾಮಿ
author img

By

Published : Aug 15, 2020, 11:48 PM IST

ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇಲೆ ಕಣ್ಣಿಟ್ಟಿದ್ದೇನೆ ಎಂಬಂತೆ ವದಂತಿಗಳನ್ನು ಹರಿ ಬಿಡಲಾಗುತ್ತಿದೆ ಎಂದು ಜೆಡಿಎಸ್​ನ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಇಂತಹ ಕಪೋಲ ಕಲ್ಪಿತ ಸುದ್ದಿ- ವದಂತಿಗಳನ್ನು ಯಾರು ಹಬ್ಬಿಸುತ್ತಾರೋ? ಯಾಕೆ ಹಬ್ಬಿಸುತ್ತಾರೋ? ಇದರಿಂದ ಕುತ್ಸಿತ ಮನಸುಗಳಿಗೆ ಆಗುವ ಲಾಭ ಏನೆಂಬುದು ನನಗೆ ತಿಳಿಯದಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಾಜಿ ಸಚಿವರು ಹಾಗೂ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರು ಅಕಾಲಿಕ ನಿಧನರಾಗಿದ್ದರಿಂದ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಅನಿವಾರ್ಯವಾಗಿದೆ. ಹಾಗಂತ ಅಕಾಲಿಕವಾಗಿ ಖಾಲಿ ಬಿದ್ದ ಕ್ಷೇತ್ರಕ್ಕೆ ಜೋತು ಬೀಳುವ ಜಾಯಮಾನ ನನ್ನದಲ್ಲವೇ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆ ವೇಳೆ ಮೂರು ದಿನಗಳ ಕಾಲ ಶಿರಾ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ನಿಜ. ಇನ್ನು ಸತ್ಯನಾರಾಯಣ ಅವರ ಪಕ್ಷ ನಿಷ್ಠೆ ಮತ್ತು ಬದ್ಧತೆ ಪ್ರಶ್ನಾತೀತ. ಯಾವುದೇ ಆಮಿಷಗಳಿಗೆ ಬಲಿಯಾಗದೆ ಕೊನೆ ಉಸಿರಿರುವವರೆಗೂ ನಂಬಿದ ಪಕ್ಷವನ್ನು ಹೆಸರಿಗೆ ತಕ್ಕಂತೆ ಸತ್ಯವಾಗಿಸಿಕೊಂಡಿದ್ದರು ಎಂದು ಹೇಳಿದ್ದಾರೆ.

ಉಪ ಚುನಾವಣೆಗೆ ಯೋಗ್ಯ, ಸಮರ್ಥ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಲಿದ್ದಾರೆ. ಅವರ ಪರವಾಗಿಯೂ ಪಕ್ಷದ ಅಭ್ಯರ್ಥಿ ಪರ ಟೊಂಕಕಟ್ಟಿ ನಿಂತು ಪ್ರಚಾರ ಮಾಡಲಿದ್ದೇನೆ. ಇದರಲ್ಲಿ ಯಾರಿಗೂ ಎಳ್ಳಷ್ಟು ಸಂಶಯ ಬೇಡ. ನಾನು ಶಿರಾ ಉಪ ಚುನಾವಣೆಯ ಅಭ್ಯರ್ಥಿಯಾಗುವ ಕನಸು ಕಂಡವನಲ್ಲ. ಯಾವುದೇ ಕಾರಣಕ್ಕೂ ನಾನು ಶಿರಾದಲ್ಲಿ ಅಭ್ಯರ್ಥಿ ಆಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಶಿರಾ ಕ್ಷೇತ್ರದ ಉಪಚುನಾವಣೆಗೆ ನನ್ನನ್ನು ಕಣಕ್ಕಿಳಿಸಲು ಒತ್ತಡಗಳಿವೆ ಎಂಬಂತೆ ಹಾಗೂ ರಾಜಕೀಯ ನೆಲೆ ಕಂಡುಕೊಳ್ಳಲು ಈ ಕ್ಷೇತ್ರವನ್ನೇ 'ಚಿಮ್ಮು ಹಲಗೆ" ಮಾಡಿ ಕೊಳ್ಳುವ ಹವಣಿಕೆಯಲ್ಲಿದ್ದಾರೆ ಎಂಬ ವದಂತಿಗಳನ್ನು ನಿಖಿಲ್ ತಳ್ಳಿ ಹಾಕಿದ್ದಾರೆ. ರಾಜ್ಯ ಜಾತ್ಯಾತೀತ ಯುವ ಜನತಾದಳದ ಅಧ್ಯಕ್ಷನಾಗಿರುವ ನಾನು ಪಕ್ಷಕ್ಕಾಗಿ ದುಡಿಯುವಾಗ ಹುದ್ದೆಯ ಕಿರೀಟವನ್ನು ಬದಿಗಿರಿಸಿ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ದಣಿವರಿಯದೆ ದುಡಿಯುತ್ತೇನೆ. ಪಕ್ಷದ ನಿಷ್ಠಾವಂತ ಹಿರಿಯ-ಕಿರಿಯರ ನಿಸ್ವಾರ್ಥ ರಾಜಕೀಯ ನಿಷ್ಠೆಯೇ ಇದಕ್ಕೆ ಮೂಲ ಪ್ರೇರಣೆ ಎಂದು ಹೇಳಿದ್ದಾರೆ.

ಅರಿವುಂಟೆ?, ತೊಳಗಿ ಬೆಳಗಿ ಪ್ರಜ್ವಲಿಸಿ ಉರಿವ ಬೆಳಗು. ಕೆಡುವಲ್ಲಿ ಉಡುಗುತ್ತಿದ್ದೇನೆ ಎಂದು ನುಡಿಯಿತ್ತೆ?. ಇಂತಿವ ಹಿಡಿವಲ್ಲಿ ಬಿಡುವಲ್ಲಿ ಮಿಕ್ಕಾದವ. ಒಡಗೂಡುವಲ್ಲಿ ಅಡಿಯೇರಿ. ಮತ್ತೆ ಪುನರಪಿ, ಅಡಿ ಉಂಟೆ?. ತೊಟ್ಟು ಬಿಟ್ಟ ಹಣ್ಣಿಂಗೆ ಮತ್ತಾ ಬುಡದಾಸೆಯೇಕೆ?. ನಿಶ್ಚಯವೆಂಬುದು ನಷ್ಟವಾದಲ್ಲಿ ಕಾಮಧೂಮ. ಧೂಳೇಶ್ವರನೆಂಬ ಲಕ್ಷವೇತಕ್ಕೆ?. ಮಾದಾರ ಧೂಳಯ್ಯ ಎಂದು ವಚನದ ಮೂಲಕ ಅವರು ವದಂತಿ ಹಬ್ಬಿಸಿದವರಿಗೆ ತಿರುಗೇಟು ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.