ETV Bharat / state

ನಿಖಿಲ್ ಕುಮಾರಸ್ವಾಮಿ - ಅಖಿಲೇಶ್ ಯಾದವ್ ಭೇಟಿ : ಲೋಕಸಭೆ ಚುನಾವಣೆ ಸೇರಿ ಸುದೀರ್ಘ ರಾಜಕೀಯ ಚರ್ಚೆ - 2023ರ ವಿಧಾನಸಭೆ ಚುನಾವಣೆ

ಜೆಡಿಎಸ್​ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

nikhil-kumaraswamy-meets-uttar-pradesh-former-cm-akhilesh-yadav
ನಿಖಿಲ್ ಕುಮಾರಸ್ವಾಮಿ - ಅಖಿಲೇಶ್ ಯಾದವ್ ಭೇಟಿ : ಲೋಕಸಭೆ ಚುನಾವಣೆ ಸೇರಿ ಸುದೀರ್ಘ ರಾಜಕೀಯ ಚರ್ಚೆ
author img

By

Published : Jun 15, 2023, 7:45 PM IST

ಬೆಂಗಳೂರು/ಲಖನೌ: ಜಾತ್ಯತೀತ ಜನತಾದಳ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಇಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ತಮ್ಮ ನಿವಾಸಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರನ್ನು ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡ ಅಖಿಲೇಶ್ ಯಾದವ್ ಅವರು, ದೀರ್ಘಕಾಲ ಮಾತುಕತೆ ನಡೆಸಿದರು.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ.

ರಾಷ್ಟ್ರಮಟ್ಟದ ರಾಜಕೀಯ ಚರ್ಚೆ : ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಅವರ ಕುಟುಂಬಗಳ ನಡುವಿನ ಬಾಂಧವ್ಯದ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ ಅಖಿಲೇಶ್ ಯಾದವ್ ಅವರು, ಬಹುಮುಖ್ಯವಾಗಿ ಹೆಚ್. ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ನಡೆಸಿದರು. ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ : ಅಲ್ಲದೆ, ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ ಹಾಗೂ ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜೊತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಬಳಿ ಕೂಲಂಕಷವಾಗಿ ಚರ್ಚಿಸಿದರು ಎಂದು ನಿಖಿಲ್ ಅವರು ವಿವರಿಸಿದ್ದಾರೆ.

  • ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್ ಅವರನ್ನು ಲಖನೌದ ಅವರ ನಿವಾಸದಲ್ಲಿ ಇಂದು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಲಾಯಿತು.@yadavakhilesh@samajwadiparty@JanataDal_S
    1/5 pic.twitter.com/pLCBhaWE2Y

    — Nikhil Kumar (@Nikhil_Kumar_k) June 15, 2023 " class="align-text-top noRightClick twitterSection" data=" ">

ಮೈಸೂರಿನಲ್ಲಿ ಅಧ್ಯಯನ ಮಾಡಿದ್ದ ಅಖಿಲೇಶ್ ​: ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಯಾದವ್​ ಅವರು, ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ನಿಖಿಲ್ ತಿಳಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ದಿಸಿದ್ದ ನಿಖಿಲ್‌ ಕುಮಾರಸ್ವಾಮಿ ಸೋಲು ಕಂಡಿದ್ದರು. ಬಳಿಕ ರಾಜ್ಯ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷವನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ, ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕಿದೆ. ಈ ನಿಟ್ಟಿನಲ್ಲಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದರು. ಇದಕ್ಕೂ ಮುನ್ನ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಿಖಿಲ್​, ಸುಮಲತಾ ಅಂಬರೀಷ್​ ವಿರುದ್ಧ ಸೋತಿದ್ದರು. ಇದೀಗ ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಖಿಲೇಶ್​ ಯಾದವ್​ ಅವರೊಂದಿಗಿನ ಭೇಟಿಯು ರಾಜಕೀಯ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಕಾಂಗ್ರೆಸ್ ಗಿಫ್ಟ್ ಕೂಪನ್ ಹಂಚಿದ್ದೇ ಪುತ್ರ ನಿಖಿಲ್ ಸೇರಿ ಹಲವರ ಸೋಲಿಗೆ ಕಾರಣ: ಕುಮಾರಸ್ವಾಮಿ ಆರೋಪ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.