ಬೆಂಗಳೂರು: ಖ್ಯಾತ ಸಿನಿಮಾ ನಿರ್ಮಾಪಕ ರಾಮು ಅವರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿರುವ ಸುದ್ಧಿ ಕೇಳಿ ಮನಸ್ಸಿಗೆ ಬಹಳ ಆಘಾತವಾಯಿತು ಎಂದು ನಟ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡ ಚಿತ್ರರಂಗಕ್ಕೆ ರಾಮು ಅವರ ಕೊಡುಗೆ ಅಪಾರ. ಅವರ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಕೃಷ್ಣ, ನಿರ್ಮಾಪಕ ರಾಮು ಸಾವಿಗೆ ಕಂಬನಿ ಮಿಡಿದಿದ್ದಾರೆ. ರಾಮುಗೆ ಕೊರೊನಾ ದೃಢಪಟ್ಟಿದ್ದಾಗ ರಾಮಕೃಷ್ಣ ಅವರು ಭೇಟಿ ಆರೋಗ್ಯದ ಬಗ್ಗೆ ವಿಚಾರಿಸಿದ್ದರು. ಆದರೆ ಇದೀಗ ಅವರ ನಿಧನದ ಸುದ್ದಿ ಕೇಳಿ ರಾಮಕೃಷ್ಣ ಬೇಸರ ವ್ಯಕ್ತಪಡಿಸಿದ್ದಾರೆ.