ಬೆಂಗಳೂರು: ಇಂದು ಸಂಜೆ ನಡೆಯಲಿರುವ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ ಕುಮಾರ್ ಆಗಮಿಸಿದ್ದಾರೆ. ಇವರು ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಿ ನೂತನ ನಾಯಕರ ಹೆಸರು ಪ್ರಕಟಿಸಲಿದ್ದಾರೆ.
ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲು ಇಬ್ಬರು ವೀಕ್ಷಕರನ್ನು ಹೈಕಮಾಂಡ್ ಕಳಿಸಿಕೊಟ್ಟಿದೆ. ವರಿಷ್ಠರ ಸಂದೇಶದೊಂದೊಗೆ ನಿರ್ಮಲಾ ಸೀತಾರಾಮನ್ ಹಾಗು ದುಶ್ಯಂತ್ ಗೌತಮ್ ಕುಮಾರ್ ಬೆಂಗಳೂರು ತಲುಪಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆಯಲಿರುವ ಐಟಿಸಿ ಗಾರ್ಡೇನಿಯಾ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಶಾಸಕಾಂಗ ಪಕ್ಷದ ಸಭೆಗೂ ಮೊದಲು ರಾಜ್ಯ ಬಿಜೆಪಿ ನಾಯಕರ ಜೊತೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ: Basavaraja Bommai : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 22 ಸ್ಥಾನ ಗೆಲ್ಲುವುದು ಕನಸಿನ ಮಾತು: ಬೊಮ್ಮಾಯಿ
ನಿರ್ಮಲಾ ಸೀತಾರಾಮನ್ ಆಗಮಿಸುತ್ತಿದ್ದಂತೆ ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೇಂದ್ರ ಸಚಿವರನ್ನು ಭೇಟಿಯಾಗಿ ಸ್ವಾಗತ ಕೋರಿದರು. ಬಳಿಕ ಕೆಲಕಾಲ ಮಾತುಕತೆ ನಡೆಸಿದರು. ಮತ್ತೊಂದೆಡೆ, ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ ಕುಮಾರ್ ಆಗಮಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜೊತೆ ಆಗಮಿಸಿದ ಗೌತಮ್ ಕುಮಾರ್ ಕಚೇರಿಯಲ್ಲಿ ಕೆಲಕಾಲ ಇರಲಿದ್ದಾರೆ. ಇವತ್ತಿನ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ವೀಕ್ಷಕರಾಗಿ ಆಗಮಿಸಿರುವ ದುಶ್ಯಂತ್ ಗೌತಮ್ ಕುಮಾರ್ ಮಧ್ಯಾಹ್ನದ ನಂತರ ಹೋಟೆಲ್ಗೆ ತೆರಳಲಿದ್ದಾರೆ.
ಇದನ್ನೂ ಓದಿ: ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ