ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರವೇ ಭೂಮಿಯನ್ನು ಸ್ವಾಧೀನಪಡಿಸಿ ಕೈಗಾರಿಕೋದ್ಯಮಿಗಳಿಗೆ ಹಂಚಿಕೆ ಮಾಡುತ್ತದೆ. ಆದರೆ ಕೈಗಾರಿಕಾ ಉದ್ದೇಶಕ್ಕಾಗಿ ಪಡೆಯುವ ಭೂಮಿಯನ್ನು ಹಲವರು ಅನ್ಯ ಉದ್ದೇಶಕ್ಕೆ ಬಳಸಿರುವ ಪ್ರಕರಣಗಳೂ ಹೆಚ್ಚಾಗಿದೆ. ಆದರೆ ಈ ಬಗ್ಗೆ ಸರ್ಕಾರ ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದೆ.
ಕೈಗಾರಿಕಾ ಭೂಮಿ ಅನ್ಯ ಉದ್ದೇಶಕ್ಕೆ ದುರ್ಬಳಕೆ ; ಸರ್ಕಾರ ಮಾತ್ರ ಜಾಣಕುರುಡು! - Industrial land
ಬೆಂಗಳೂರಿನಲ್ಲಿ ಕೆಎಸ್ಎಸ್ಐಡಿಸಿ ಹಂಚಿಕೆ ಮಾಡಿರುವ ನಿವೇಶನಗಳ ಪೈಕಿ 2,246 ನಿವೇಶನಗಳನ್ನು ಉದ್ದೇಶಿತ ಉದ್ಯಮಕ್ಕೆ ಬಳಸದೇ ಇರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಆದರೆ ಸರ್ಕಾರ ಅಂತವರಿಗೆ ಕೇವಲ ನೋಟಿಸ್ ನೀಡುತ್ತಿದೆಯೋ ಹೊರತು ಯಾವುದೇ ಕಠಿಣ ಕ್ರಮಕ್ಕೆ ಮುಂದಾಗುತ್ತಿಲ್ಲ.
ಕೈಗಾರಿಕಾ ಭೂಮಿ ದುರ್ಬಳಕೆ
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರವೇ ಭೂಮಿಯನ್ನು ಸ್ವಾಧೀನಪಡಿಸಿ ಕೈಗಾರಿಕೋದ್ಯಮಿಗಳಿಗೆ ಹಂಚಿಕೆ ಮಾಡುತ್ತದೆ. ಆದರೆ ಕೈಗಾರಿಕಾ ಉದ್ದೇಶಕ್ಕಾಗಿ ಪಡೆಯುವ ಭೂಮಿಯನ್ನು ಹಲವರು ಅನ್ಯ ಉದ್ದೇಶಕ್ಕೆ ಬಳಸಿರುವ ಪ್ರಕರಣಗಳೂ ಹೆಚ್ಚಾಗಿದೆ. ಆದರೆ ಈ ಬಗ್ಗೆ ಸರ್ಕಾರ ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದೆ.
ಅನ್ಯ ಉದ್ದೇಶಕ್ಕೆ ಬಳಸಿದ ನಿವೇಶನ ಎಷ್ಟು?:
ಕೆಎಸ್ಎಸ್ಐಡಿಸಿ ಹಂಚಿಕೆ ಮಾಡಿರುವ ನಿವೇಶನಗಳ ಪೈಕಿ 2,246 ನಿವೇಶನಗಳನ್ನು ಉದ್ದೇಶಿತ ಉದ್ಯಮಕ್ಕೆ ಬಳಸದೇ ಇರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಇನ್ನು ಒಟ್ಟು 192 ಉದ್ದಿಮೆದಾರರು ಅನ್ಯ ಉದ್ದೇಶಕ್ಕೆ ನಿವೇಶನಗಳನ್ನು ಬಳಕೆ ಮಾಡಿದ್ದಾರೆ. ಆ ಮೂಲಕ ನಿವೇಶನವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಕೈಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನಿವೇಶನವನ್ನು ಉದ್ದೇಶಿತ ಉದ್ಯಮಕ್ಕೆ ಬಳಸದೇ ಇರುವ ಉದ್ದಿಮೆದಾರರಿಗೆ ಕೆಪಿಪಿ ಕಾಯ್ದೆ-1974ರ ಪ್ರಕಾರ ನೋಟಿಸ್ ಜಾರಿ ಮಾಡಲಾಗಿದೆ. ಅದೇ ರೀತಿ ಅನ್ಯ ಉದ್ದೇಶಕ್ಕೆ ಬಳಸಿದ 192 ಉದ್ಯಮಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇವಲ ನೋಟಿಸ್ಗೆ ಸೀಮಿತ, ಕ್ರಮ ಇಲ್ಲ:
ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರದಿಂದ ಮಂಜೂರಾಗಿರುವ ಭೂಮಿಯನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲಿ ಅಥವಾ ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಳ್ಳದಿದ್ದರೆ, ಆ ಭೂಮಿಯನ್ನು ವಾಪಾಸ್ ಪಡೆಯುವ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದು ಪ್ರತಿ ಸರ್ಕಾರ ಹೇಳುತ್ತಲೇ ಬರುತ್ತಿದೆ . ಆದರೆ ಕಳೆದ ಎರಡು ಮೂರು ವರ್ಷಗಳಿಂದ ಕೈಗಾರಿಕಾ ಇಲಾಖೆ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ.
ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಅಥವಾ ಸರ್ಕಾರದಿಂದ ನೇರವಾಗಿ ಕೈಗಾರಿಕಾ ಉದ್ದೇಶಗಳಿಗೆ ಭೂಮಿಯನ್ನು ಪಡೆದು, ಅದನ್ನು ದುರ್ಬಳಕೆ ಮಾಡಿಕೊಂಡಿದ್ದರೆ ಅಥವಾ ಕೈಗಾರಿಕೆಯನ್ನು ಆರಂಭಿಸದೇ ಹಾಗೆಯೇ ಬಿಟ್ಟಿದ್ದರೂ, ಅಂತಹ ಭೂಮಿಗಳ ಸರ್ವೆ ನಡೆಸಿ ವಾಪಸ್ ಸರ್ಕಾರಕ್ಕೆ ಸ್ವಾಧೀನಪಡಿಸಿಕೊಳ್ಳುವ ಕಾರ್ಯ ಆರಂಭಿಸಲಿದ್ದೇವೆ ಎಂದು ಹಲವು ಬಾರಿ ಹೇಳಿದ್ದಾರೆ.
ಆದರೆ ಈಗಾಗಲೇ ಬೆಳಕಿಗೆ ಬಂದಿರುವ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ಉದ್ಯಮಿಗಳಿಗೆ ಕಳೆದ ಎರಡು ವರ್ಷದಿಂದ ನೋಟಿಸ್ ಜಾರಿಗೊಳಿಸಲಾಗುತ್ತಿದೆ. ಆದರೆ ಸರ್ಕಾರ ಬರೀ ನೋಟಿಸ್ ನೀಡುವುದರಲ್ಲೇ ಕಾಲಹರಣ ಮಾಡುವುದು ಬಿಟ್ಟರೆ ನಿವೇಶನ ವಾಪಸ್ ಪಡೆಯುವ ಬೇರೆ ಯಾವುದೇ ಕಠಿಣ ಕ್ರಮಕ್ಕೆ ಮುಂದಾಗಿಲ್ಲ.

Last Updated : Oct 4, 2020, 6:58 PM IST