ಬೆಂಗಳೂರು : ನಗರಾದ್ಯಂತ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನ ಆಚರಿಸುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯಮಾರಾಟವನ್ನ ನಿಷೇಧೀಸಿ ಆದೇಶಿಸಿದ್ದಾರೆ.

ನವೆಂಬರ್ 10 ರಂದು ಮುಸ್ಲಿಂ ಭಾಂದವರು ಮಸೀದಿಗಳಲ್ಲಿ ಪ್ರಾಥನೆ ಮುಗಿಸಿ ನಂತರ ಮೆರವಣಿಗೆ ಮಾಡಲಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂದು ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ144 ಸೆಕ್ಷನ್ ಜಾರಿಗೆ ಆದೇಶಿಸಿದ್ದಾರೆ. ಜೊತೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.