ETV Bharat / state

ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ನೀಡುವ ನಿರ್ಧಾರದಲ್ಲಿ ಬದಲಾವಣೆಯಿಲ್ಲ: ಸಿಎಂ

ಕೊರೊನಾ ಸೋಂಕಿನಿಂದ ಮೃತಪಟ್ಟವರ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Sep 29, 2021, 6:25 AM IST

ಬೆಂಗಳೂರು: ಕೋವಿಡ್ ಸೋಂಕು​ ತಗುಲಿ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಬಿಪಿಎಲ್ ಕುಟುಂಬಗಳಿಗೆ 1 ಲಕ್ಷ ರೂ.ಗಳ ಪರಿಹಾರ ನೀಡುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ‌.

ಕೋವಿಡ್ ಸಂಕಷ್ಟದ ಸಮಯದಲ್ಲಿ ಬಡ ಕುಟುಂಬಗಳು ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದು, ಅಂತಹ ಕುಟುಂಬಕ್ಕೆ ಆಸರೆಯಾಗಲು 1 ಲಕ್ಷ ರೂ. ಪರಿಹಾರ ಕೊಡಲು ನಿರ್ಧಾರ ಮಾಡಲಾಗಿತ್ತು. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ, ಘೋಷಣೆ ಮಾಡಿದಂತೆ 1 ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಆದೇಶ ಪ್ರತಿ
ಆದೇಶ ಪ್ರತಿ

ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವ ಸುತ್ತೋಲೆ ವಾಪಸ್ ಪಡೆದಿರುವುದಾಗಿ ಕಂದಾಯ ಇಲಾಖೆ ಆದೇಶ ಹೊರಡಿಸಿ ವಿವಾದ ಸೃಷ್ಟಿಸಿತ್ತು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಸ್ವತಃ ಸಿಎಂ ಸ್ಪಷ್ಟೀಕರಣ ನೀಡಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.