ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಯಾರು ಕಾಲುವೆ ನೀರನ್ನು ಹರಿಸಲು ತೊಂದರೆ ಮಾಡಿದ್ದಾರೆ, ಕೆಲವರು ರಾಜಕಾಲುವೆಯನ್ನು ಮುಚ್ಚಿದ್ದಾರೆ. ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ. ಪ್ರವಾಹ ಬಂದಾಗ ಐಟಿ ಬಿಟಿಯವರು ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ. ಜನಸಾಮಾನ್ಯರಿಗೆ, ಕೆಳಹಂತದ ಮನೆಗಳಿಗೂ ತೊಂದರೆಯಾಗಿದೆ. ಇವುಗಳನ್ನು ತೆರೆವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಮಾಹಿತಿಯನ್ನು ನೀಡಲಾಗುವುದು. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರವುಗೊಳಿಸಲಾಗುವುದು ಎಂದರು.
ಪಿ.ಎಸ್.ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು ಮಾತನಾಡಿರುವ ಆಡಿಯೋ ಬಿಡುಗಡೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆಡಿಯೋನೋ, ವಿಡಿಯೋನೋ ಗೊತ್ತಿಲ್ಲ. ಅದನ್ನು ಪರಿಶೀಲಿಸಲಾಗುವುದು. ಹಾಗೇನಾದರೂ ತಪ್ಪು ಕಂಡುಬಂದಲ್ಲಿ ತನಿಖೆಗೆ ಆದೇಶಿಸಲಾಗುವುದು ಎಂದರು.
ಇದನ್ನೂ ಓದಿ: ಮಳೆಗಾಲದ ಅಧಿವೇಶನ ಆರಂಭ: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ