ETV Bharat / state

ಕೆಎಸ್ಆರ್‌ಟಿಸಿ ಸಿಬ್ಬಂದಿ ವೇತನದಲ್ಲಿ ಕಡಿತವಿಲ್ಲ: ಸಚಿವ ಸವದಿ ಅಭಯ - minister laxman savadhi

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನಕ್ಕೆ ಸಮಸ್ಯೆಯಾಗದಂತೆ ಸರ್ಕಾರದಿಂದಲೇ ವೇತನ ಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.

KSRTC staff salary
ಸಚಿವ ಲಕ್ಷ್ಮಣ ಸವದಿ
author img

By

Published : Apr 16, 2020, 11:05 AM IST

ಬೆಂಗಳೂರು: ಲಾಕ್ ಡೌನ್​ನಿಂದಾಗಿ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಸಾರಿಗೆ‌ ನಿಗಮಗಳು ಆದಾಯವಿಲ್ಲದೇ ಸಿಬ್ಬಂದಿಗೆ ವೇತನ ನೀಡಲು‌ ಸಾಧ್ಯವಾಗದ ಸ್ಥಿತಿ ಎದುರಾಗಿರುವ ಕಾರಣ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ ವೇತನವನ್ನು ಸರ್ಕಾರದಿಂದಲೇ ನೀಡಲು ನಿರ್ಧರಿಸಲಾಗಿದೆ.

ಪ್ರಥಮ ಹಂತದ ಲಾಕ್ ಡೌನ್ ವೇಳೆ ಸಾರಿಗೆ ಇಲಾಖೆಗೆ 1200 ಕೋಟಿ ನಷ್ಟ ಉಂಟಾಗಿದೆ. ಕೆಎಸ್ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ ಹಾಗೂ ವಾಯವ್ಯ ಸಾರಿಗೆ ನಿಗಮಗಳಿಗೆ ಆದಾಯವೇ ಇಲ್ಲದಂತಾಗಿದೆ. ಪ್ರಯಾಣಿಕರ ಟಿಕೆಟ್ ಹಣವೇ ಸಿಬ್ಬಂದಿ ವೇತನಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗ ಬಸ್ ಸಂಚಾರ ಇಲ್ಲದೇ ಆದಾಯವೇ ಇಲ್ಲವಾಗಿದೆ. ನಮ್ಮ ಜನರ ಹಾಗೂ ಸಿಬ್ಬಂದಿಗಳ ಪ್ರಾಣಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನಕ್ಕೆ ಸಮಸ್ಯೆಯಾಗದಂತೆ ಸರ್ಕಾರದಿಂದಲೇ ವೇತನ ಪಾವತಿಸಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅಭಯ ನೀಡಿದ್ದು, ವೇತನ ಕಡಿತದಂತಹ ಭೀತಿಯಲ್ಲಿದ್ದ ಸಾರಿಗೆ ನಿಗಮದ‌ ಸಿಬ್ಬಂದಿಗೆ ನೆಮ್ಮದಿ ಮೂಡಿಸಿದೆ.

KSRTC staff salary
ಕೆಎಸ್ಆರ್‌ಟಿಸಿ ಸಿಬ್ಬಂದಿ ವೇತನದಲ್ಲಿ ಕಡಿತವಿಲ್ಲ.

ಇನ್ನು ಒಟ್ಟಿಗೆ 3 ತಿಂಗಳ ವೇತನ ನೀಡಲು 1050 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯಕ್ಕೆ 1 ತಿಂಗಳ ವೇತನ ಪಾವತಿಗೆ ಮುಖ್ಯಮಂತ್ರಿಗಳು ತಾತ್ವಿಕ ಅನುಮತಿ ನೀಡಿದ್ದಾರೆ. ಹಾಗಾಗಿ ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪಾವತಿ ವಿಚಾರದಲ್ಲಿ ಆತಂಕಗೊಳ್ಳುವುದು ಬೇಡ. ನಿಗದಿಯಂತೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ ಮಾಡಲಾಗುತ್ತದೆ ಎಂದಿದ್ದಾರೆ.

ಸಾರಿಗೆ ಬಸ್​​ಗಳ ಸಂಚಾರ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಆರಂಭಿಸಲು ವಿಳಂಬವಾಗಬಹುದು. ಆದರೂ ಮುಂದಿನ ಎರಡು ತಿಂಗಳ ವೇತನವನ್ನು ಮುಂದಿನ ದಿನಗಳಲ್ಲಿ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.