ಬೆಂಗಳೂರು: ಇನ್ಮುಂದೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿದ್ದ ಕಾರಣ ರಾಜ್ಯಕ್ಕೆ ಪ್ರವೇಶ ಮಾಡುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ತೋರಿಸಿ ಬರಬೇಕಿತ್ತು. ಆದರೆ ಇನ್ಮುಂದೆ ಈ ಆದೇಶಕ್ಕೆ ವಿನಾಯಿತಿ ನೀಡಲಾಗಿದೆ.
ವಿಮಾನ ನಿಲ್ದಾಣ, ರೈಲ್ವೆ, ರಸ್ತೆ ಸಾರಿಗೆ ಮತ್ತು ವೈಯಕ್ತಿಕ ವಾಹನದ ಮೂಲಕ ಬರುವವರು ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿ ನೀಡುವ ಆದೇಶವನ್ನು ಹಿಂಪಡೆಯಲಾಗಿದೆ. ಆದರೆ ಮಹಾರಾಷ್ಟ್ರದಿಂದ ಬರುವವರು ಎರಡು ಡೋಸ್/ಪೂರ್ಣ ಡೋಸ್ ವ್ಯಾಕ್ಸಿನೇಷನ್ ಪ್ರಮಾಣ ಪತ್ರ ಹೊಂದಿರಬೇಕು. ಇದನ್ನು ಕಟ್ಟುನಿಟ್ಟಾಗಿ ಜಾರಿಯೊಂದಿಗೆ ಮುಂದುವರಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಪದವಿ, ವಿವಿ, ಡಿಪ್ಲೋಮಾ ಕಾಲೇಜುಗಳಿಗೆ ಫೆ.16ರವರೆಗೆ ರಜೆ ಘೋಷಿಸಿದ ಸರ್ಕಾರ