ETV Bharat / state

ಹೊಸ ಮಾರ್ಗಸೂಚಿ ಹೊರಡಿಸಿಲ್ಲ, ಸಾಮಾಜಿಕ ಜಾಲತಾಣದಲ್ಲಿ ಬಂದಿರುವುದು ತಪ್ಪು ಮಾಹಿತಿ: ಸಿಎಂ ಕಚೇರಿ ಸ್ಪಷ್ಟನೆ!

ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಎಲ್ಲೆಡೆ ಸುದ್ದಿ ಹರಡಿತ್ತು. ಈ ಸಂಬಂಧ ಸ್ಪಷ್ಟನೆ ನೀಡಿರುವ ಸಿಎಂ ಕಚೇರಿ, ಈ ಬಗ್ಗೆ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ. ಇದೆಲ್ಲಾ ಸುಳ್ಳು ಎಂದಿದೆ.

No new guidelines issued over corona: CM office
ಸಾಮಾಜಿಕ ಜಾಲತಾಣದಲ್ಲಿ ಬಂದಿರುವುದು ತಪ್ಪು ಮಾಹಿತಿ: ಸಿಎಂ ಕಚೇರಿ ಸ್ಪಷ್ಟನೆ!
author img

By

Published : Apr 19, 2021, 7:09 PM IST

ಬೆಂಗಳೂರು: ಕೊರೊನಾ ನಿಯಂತ್ರಣ ಸಂಬಂಧ ಈಗಾಗಲೇ ಇರುವ ಮಾರ್ಗಸೂಚಿ ಮುಂದುವರೆಯಲಿದ್ದು, ಹೊಸ ಮಾರ್ಗಸೂಚಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಮಾಹಿತಿ ನಕಲಿಯಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ‌ ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾರ್ಗಸೂಚಿ ನಕಲಿಯಾಗಿದ್ದು, ಸರ್ಕಾರ ಆ ರೀತಿಯ ಯಾವುದೇ ಮಾರ್ಗಸೂಚಿ ಹೊರಡಿಸಿರುವುದಿಲ್ಲ ಎಂದು ತಿಳಿಸಲಾಗಿದೆ.

ನಾಳೆ ಪ್ರತಿಪಕ್ಷ ನಾಯಕರು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಇದ್ದು ಸಭೆಯ ನಂತರ ಹೊಸ ಮಾರ್ಗಸೂಚಿ ಅಥವಾ ಹೊಸ ನಿಯಮಾವಳಿಗಳನ್ನು ಹೊರಡಿಸುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.