ETV Bharat / state

ನೆಹರೂ ಇತಿಹಾಸ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

author img

By

Published : Nov 14, 2022, 7:30 PM IST

ಕೆಟ್ಟ ಆಲೋಚನೆಗಳನ್ನು ಬೆಳೆಯಲು ಬಿಟ್ಟರೆ ಅದು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ ಎಂದು ನೆಹರು ಹೇಳಿದ್ದರು. ಅದರಂತೆ ಇಂದು ಮೋದಿ ಸರ್ಕಾರ ಇಡೀ ದೇಶವನ್ನೇ ನಾಶ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

No one can erase Nehru's history: Veerappa Moily
ನೆಹರು ಇತಿಹಾಸ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ವೀರಪ್ಪ ಮೊಯ್ಲಿ

ಬೆಂಗಳೂರು: ದೇಶಾದ್ಯಂತ ಮಾಜಿ ಪ್ರಧಾನಿ ಪಂಡಿತ್ ನೆಹರೂ ಅವರ ಜನ್ಮದಿನ ಆಚರಿಸಲಾಗುತ್ತಿದ್ದು, ಬಿಜೆಪಿಯವರಿಗೆ ಇದರ ಸುಳಿವೂ ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಆರೋಪಿಸಿದ್ದಾರೆ.

ನಗರದ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 133 ವರ್ಷಗಳ ಹಿಂದೆ ನೆಹರೂ ಅವರು ಜನಿಸಿ ದೇಶದ ಪ್ರಧಾನಿಯಾಗಿ ಕೆಲಸ ಮಾಡಿದ್ದಾರೆ. ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಸ್ವಾತಂತ್ರ್ಯ ಸಮರಕ್ಕೆ ಧುಮುಕಿ ತಮ್ಮ ಜೀವನವನ್ನೇ ತ್ಯಾಗ ಬಲಿದಾನ ಮಾಡಿದ್ದಾರೆ. ಈ ಇತಿಹಾಸ ಅಜರಾಮರವಾಗಿ ಉಳಿಯುತ್ತದೆ. ಯಾರೂ ಅಳಿಸಿಹಾಕಲು ಸಾಧ್ಯವಿಲ್ಲ.‌ ನೆಹರೂ ಅವರು ದಾರ್ಶನಿಕರಾಗಿದ್ದು, ಸುಂದರ ಭಾರತ ನಿರ್ಮಾಣದ ಚಿಂತನೆಯಿಂದ ಪಂಚವಾರ್ಷಿಕ ಯೋಜನೆ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಯೋಜನೆ ರೂಪಿಸಿದವರು ಎಂದು ಮಾತನಾಡಿದರು.

ಹಾಗೆ ಮಾತನಾಡಿದ ಅವರು, ಕೆಟ್ಟ ಆಲೋಚನೆಗಳನ್ನು ಬೆಳೆಯಲು ಬಿಟ್ಟರೆ ಅದು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ ಎಂದು ನೆಹರು ಹೇಳಿದ್ದರು. ಅದರಂತೆ ಇಂದು ಮೋದಿ ಸರ್ಕಾರ ಇಡೀ ದೇಶವನ್ನೇ ನಾಶ ಮಾಡುತ್ತಿದೆ. ನೆಹರೂ ಅವರು ವೈಜ್ಞಾನಿಕವಾಗಿ ಆಲೋಚನೆ ಮಾಡಬೇಕು ಎಂದು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ದೇಶದ ಬಡತನ, ಹಸಿವಿನ ಬಾಧೆ ನೀಗಿಸಲು ಇರುವ ಅಸ್ತ್ರ ವಿಜ್ಞಾನ ಎಂದು ಹೇಳಿದ್ದರು. ಮೂಢನಂಬಿಕೆ, ಅನಕ್ಷರತೆ, ಬಡತನ ನಿರ್ಮೂಲನೆ ಆಗಬೇಕಾದರೆ ಅದು ವಿಜ್ಞಾನದಿಂದ ಮಾತ್ರ ಸಾಧ್ಯ ಎಂಬ ಸಂದೇಶ ಕೊಟ್ಟಿದ್ದಾರೆ ಎಂದ ಮೊಯ್ಲಿ ಅವರು ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದಲ್ಲಿ ಅಂದಕಾರ, ಜಾತಿ, ಮತೀಯ ಕಬಂಧಬಾಹುಗಳನ್ನು ಪಸರಿಸಿ ದೇಶ ನಾಶ ಮಾಡುತ್ತಿದ್ದಾರೆ ಆರೋಪಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಪಂಡಿತ್ ನೆಹರೂ ಅವರು ಅಪರೂಪದ ಅದ್ಭುತ ರಾಜಕಾರಣಿ. ಬ್ರಿಟಿಷರ ವಿರುದ್ಧ ಹೋರಾಟ ಮಾಡಿ 13 ವರ್ಷಗಳ ಕಾಲ ಸೆರೆವಾಸ ಅನುಭವಿಸಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ದೇಶವನ್ನು 16 ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ದೂರ ದೃಷ್ಟಿಯ ಹಾಗು ಪಂಚವಾರ್ಷಿಕ ಯೋಜನೆಗಳ ಮಹಾನ್ ನಾಯಕ ನೆಹರೂ. ಅವರು ಹಲವು ಸಂಸ್ಥೆಗಳನ್ನು ಹುಟ್ಟುಹಾಕಿ ಇಸ್ರೋ, ಡಿಆರ್ ಡಿಒ ಸಂಸ್ಥೆ ಸ್ಥಾಪಿಸಿ ದೇಶ ನಿರ್ಮಾಣಕ್ಕೆ ಕಾರಣವಾದರು. ಅವರ ಆಡಳಿತದಲ್ಲಿ ಸಮಾಜದ ಎಲ್ಲ ವರ್ಗದ ಜನರ ಕಷ್ಟಕ್ಕೆ ಸ್ಪಂದಿಸಿದರು. ಯುವಕರು ಅವರ ಸ್ವಾತಂತ್ರ್ಯ ಹೋರಾಟದ ಬಗ್ಗೆ ಓದಬೇಕು. ಈಗ ನಮ್ಮ ನಿಮ್ಮ ಮೇಲೆ ಬಹಳ ದೊಡ್ಡ ಜವಬ್ದಾರಿ ಇದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೆಹರೂ ಅವರು ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಅವರ ಯೋಗ್ಯತೆಗೂ ನೆಹರೂ ಅವರ ಯೋಗ್ಯತೆಗು ತಿಳಿದು ಮಾತನಾಡಬೇಕು. ಅವರಿಗೆ ಇತಿಹಾಸ, ಹೋರಾಟ ಗೊತ್ತಿಲ್ಲ. ನೆಹರೂ ಬಗ್ಗೆ ಟೀಕೆ ಮಾಡುವ ಯೋಗ್ಯತೆ ಕೂಡ ನಿಮಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ನೆಹರೂ ಅವರ ಮಾರ್ಗದರ್ಶನದಂತೆ ಕೆಲಸ ಮಾಡೋಣ: ನೆಹರೂ ಅವರು ಹಗರಣ ಮುಕ್ತ ಆಡಳಿತ ನೀಡಿದ್ದರು. ಆದರೆ ಇಂದು ರಾಜ್ಯ ಸರ್ಕಾರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟವಾಗಿದೆ. ಅಭಿವೃದ್ಧಿ ಇಲ್ಲ, ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಭಾರತ ಜೋಡೋ ಯಾತ್ರೆ ಸಂದರ್ಭದಲ್ಲಿ ಲಕ್ಷಾಂತರ ಜನ ರಾಹುಲ್ ಗಾಂಧಿ ಅವರಿಗೆ ಬೆಂಬಲ ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಯಾವುದೇ ಅಧಿಕಾರ, ಹುದ್ದೆಯ ಆಸೆ ಇಲ್ಲದೆ ದೇಶದುದ್ದಕ್ಕೂ 3570 ಕಿ.ಮೀ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ದೇಶ ಒಡೆಯುವ ಕೆಲಸ ಮಾಡಿದರೆ, ರಾಹುಲ್ ಗಾಂಧಿ ಅವರು ದೇಶ ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಹಾಗೆ ನಾವೆಲ್ಲರೂ ನೆಹರೂ ಅವರ ಮಾರ್ಗದರ್ಶನದಂತೆ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಎನ್ಎಸ್ ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತಿತರರು ಮಾತನಾಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸೋತ ಕ್ಷೇತ್ರದಿಂದಲೇ ಗೆದ್ದು ಜನ ನಾಯಕ ಅನಿಸಿಕೊಳ್ಳಲಿ: ಕೆ.ಎಸ್ ಈಶ್ವರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.