ಬೆಂಗಳೂರು: ಎರಡು ದಿನದಲ್ಲಿ ಸಚಿವ ಸ್ಥಾನ ನೀಡುವ ಕುರಿತು ಯಾರಿಗೂ ಭರವಸೆ ನೀಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವುದು ಹೈಕಮಾಂಡ್ ನಿರ್ಧಾರದ ಮೇಲೆ ಅವಲಂಬಿತವಾಗಿದೆ, ವರಿಷ್ಠರು ಈ ಬಗ್ಗೆ ನಿರ್ಧಾರ ಮಾಡಲಿದ್ದಾರೆ ಎಂದರು.
ಎರಡು ದಿನದಲ್ಲಿ ಮಂತ್ರಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎನ್ನುವ ಆರ್.ಶಂಕರ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಅಂತಹ ಯಾವ ಭರವಸೆಯನ್ನೂ ಅವರಿಗೆ ಕೊಟ್ಟಿಲ್ಲ. ಬೇರೆ ಯಾರಿಗೂ ಕೊಟ್ಟಿಲ್ಲ, ಹೈಕಮಾಂಡ್ ನಾಯಕರು ಒಪ್ಪಿಗೆ ಕೊಡದೆ ನಾನು ಹೇಗೆ ಭರವಸೆ ಕೊಡಲು ಸಾಧ್ಯ ಎಂದ ಅವರು, ಶಂಕರ್ ಹೇಳಿಕೆಯನ್ನು ತಳ್ಳಿಹಾಕಿದರು.